ಗ್ಯಾರಂಟಿಯಿಂದ ಕಾಂಗ್ರೆಸ್ ಗೆಲುವು ಗ್ಯಾರಂಟಿ: ಸಚಿವ ಜಾರಕಿಹೊಳಿ

| Published : Apr 15 2024, 01:20 AM IST

ಗ್ಯಾರಂಟಿಯಿಂದ ಕಾಂಗ್ರೆಸ್ ಗೆಲುವು ಗ್ಯಾರಂಟಿ: ಸಚಿವ ಜಾರಕಿಹೊಳಿ
Share this Article
  • FB
  • TW
  • Linkdin
  • Email

ಸಾರಾಂಶ

ಕರ್ನಾಟಕದಲ್ಲಿ ಎರಡು ಹಂತದಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಕಳೆದ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿದ ಗ್ಯಾರಂಟಿಗಳ ಗ್ಯಾರಂಟಿ ಅನುಷ್ಠಾನದಿಂದ ಲೋಕಸಭಾ ಚುನಾವಣೆಯಲ್ಲೂ ಅತಿಹೆಚ್ಚು ಸ್ಥಾನಗಳಿಸುವುದು ನಮಗೆ ಗ್ಯಾರಂಟಿಯಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದರು.

ಚಳ್ಳಕೆರೆ: ಕರ್ನಾಟಕದಲ್ಲಿ ಎರಡು ಹಂತದಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಕಳೆದ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿದ ಗ್ಯಾರಂಟಿಗಳ ಗ್ಯಾರಂಟಿ ಅನುಷ್ಠಾನದಿಂದ ಲೋಕಸಭಾ ಚುನಾವಣೆಯಲ್ಲೂ ಅತಿಹೆಚ್ಚು ಸ್ಥಾನಗಳಿಸುವುದು ನಮಗೆ ಗ್ಯಾರಂಟಿಯಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದರು.

ನಗರದ ಗುರುರಾಘವೇಂದ್ರ ಕಲ್ಯಾಣಮಂಟಪದಲ್ಲಿ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಲೋಕಸಭಾ ಚುನಾವಣೆಯ ಪ್ರಚಾರ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳ ಫಲವಾಗಿ ಲಕ್ಷಾಂತರ ಬಡ ಕುಟುಂಬಗಳು ನೆಮ್ಮದಿಯಿಂದ ನೆಲೆಸಿದ್ದು, ರಾಷ್ಟ್ರದ ಇತಿಹಾಸದಲ್ಲೇ ಮಹತ್ವದ ಐದು ಗ್ಯಾರಂಟಿಗಳನ್ನು ಯಾರೂ ಘೋಷಣೆ ಮಾಡಿಲ್ಲ. ಗ್ಯಾರಂಟಿ ಯೋಜನೆಗಳ ಘೋಷಣೆ ಮತ್ತು ಅನುಷ್ಠಾನ ಎರಡೂ ಪ್ರಮುಖವಾಗಿದೆ. ಇದು ಕಾಂಗ್ರೆಸ್ ಪಕ್ಷದ ವಿಜಯಕ್ಕೆ ನಾಂದಿಯಾಗಿದೆ. ಲೋಕಸಭಾ ಚುನಾವಣೆಯಲ್ಲಿ ಯಾವುದೇ ಕ್ಷೇತ್ರದಲ್ಲೂ ಕಾಂಗ್ರೆಸ್‌ಗೆ ಹಿನ್ನೆಡೆಯಾಗಲು ಸಾಧ್ಯವಿಲ್ಲದ ವಾತಾವರಣ ಉಂಟಾಗಿದೆ. ಪಕ್ಷದ ಮುಖಂಡರು, ಕಾರ್ಯಕರ್ತರು ಗ್ಯಾರಂಟಿ ಯೋಜನೆಯಿಂದ ಆಗಿರುವ ಪ್ರಯೋಜನದ ಬಗ್ಗೆ ಮತದಾರರನ್ನು ಜಾಗೃತಿಗೊಳಿಸಬೇಕು. ಬಿಜೆಪಿಯ ಸುಳ್ಳು ಭರವಸೆಗಳ ಬಗ್ಗೆ ಮತದಾರರಿಗೆ ಸ್ಪಷ್ಟನೆ ನೀಡಬೇಕು. ಕಾಂಗ್ರೆಸ್ ಪಕ್ಷದ ಆಡಳಿತದಿಂದ ಮಾತ್ರ ಬಡವರ ಹಿತರಕ್ಷಣೆ ಬಗ್ಗೆ ಜನರಲ್ಲಿ ವಿಶ್ವಾಸ ಮೂಡಿಸಬೇಕು. ಆಗಾದಲ್ಲಿ ಮಾತ್ರ ಈ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳಿಸಲು ಸಾಧ್ಯವಾಗುತ್ತದೆ ಎಂದರು.

ರಾಜ್ಯದಲ್ಲಿ ಪ್ರಸ್ತುತ ಸರ್ಕಾರ ಶಿಕ್ಷಣ ಮತ್ತು ವಸತಿ ಸೌಕರ್ಯಕ್ಕೆ ಆದ್ಯತೆ ನೀಡುತ್ತಿದೆ. ಬಿಜೆಪಿ ನಾಲ್ಕು ವರ್ಷಗಳ ಆಡಳಿತದಲ್ಲಿ ಒಂದು ಶಾಲೆ ನಿರ್ಮಾಣವಾಗಲಿಲ್ಲ, ಇಂದು ವಸತಿಯೂ ನಿರ್ಮಾಣವಾಗಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ೧೩ ಲಕ್ಷ ಮನೆ ನಿರ್ಮಾಣದ ಗುರಿ ನೀಡಿದ್ದು, ಈ ಪೈಕಿ ೫ ಲಕ್ಷ ಮನೆಗಳನ್ನು ವಿತರಣೆ ಮಾಡಲಾಗಿದೆ. ೩ ಲಕ್ಷ ಮನೆಗಳು ನಿರ್ಮಾಣದ ಹಂತದಲ್ಲಿವೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮುಖಂಡರು ಪ್ರತಿ ಮನೆ, ಮತದಾರರ ಭೇಟಿಯಾಗಬೇಕು. ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕೆಂದು ವಿನಂತಿ ಮಾಡಬೇಕಿದೆ. ಸಾರ್ವಜನಿಕರಲ್ಲಿ ಈಗಾಗಲೇ ಪ್ರಸ್ತುತ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಹೆಚ್ಚು ಆತ್ಮವಿಶ್ವಾಸವಿದ್ದು, ಕಾಂಗ್ರೆಸ್ ಪಕ್ಷವನ್ನು ಆಶೀರ್ವಾದಿಸಲು ಅವರು ಹಿಂದೆ, ಮುಂದೆ ನೋಡಲ್ಲ, ಇಂದಿನ ಜನಸ್ತೋಮವನ್ನು ನೋಡಿದರೆ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಈಗಾಗಲೇ ಗೆಲುವಿನತ್ತ ಹೆಜ್ಜೆ ಇಟ್ಟಿದ್ಧಾರೆಂದರು.