ಮಹಿಳೆಯರ ಸ್ವಾವಲಂಬಿ ಬದುಕಿಗೆ ಗ್ಯಾರಂಟಿ ಸಹಕಾರಿ
Guarantee helps women live independentlykanakagiri, koppal, womens day, guarantee committee, hajarat husein, ಕನಕಗಿರಿ, ಮಹಿಳಾ ದಿನಾಚರಣೆ, ಕೊಪ್ಪಳ, ಹಜರತ್ ಹುಸೇನ್, ಗ್ಯಾರಂಟಿ ಸಮಿತಿ
ಕನಕಗಿರಿ ಪಟ್ಟಣದ ತಾಪಂ ಸಭಾಂಗಣದಲ್ಲಿ ಸೋಮವಾರ ಗ್ಯಾರಂಟಿ ಯೋಜನೆಗಳ ತಾಲೂಕು ಅನುಷ್ಠಾನ ಸಮಿತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಯೋಜಿಸಲಾಗಿತ್ತು.ಕನಕಗಿರಿ: ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳುತ್ತಿದ್ದಾರೆ ಎಂದು ತಾಲೂಕು ಗ್ಯಾರಂಟಿ ಯೋಜನೆಯಗಳ ಅನುಷ್ಠಾನ ಸಮಿತಿಯ ಹಜರತ್ ಹುಸೇನ್ ಹೇಳಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ಸೋಮವಾರ ಗ್ಯಾರಂಟಿ ಯೋಜನೆಗಳ ತಾಲೂಕು ಅನುಷ್ಠಾನ ಸಮಿತಿಯಿಂದ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಅವರು ಮಾತನಾಡಿದರು. ಮಹಿಳೆಯರು ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ಕುಟುಂಬದ ಅಭಿವೃದ್ಧಿ ಜತೆಗೆ ಸಮಾಜದ ಅಭಿವೃದ್ಧಿಗೂ ಕೊಡುಗೆ ನೀಡಬಹುದು. ಶಿಕ್ಷಣ, ಉದ್ಯೋಗ, ಸ್ವ-ಉದ್ಯೋಗ ಸೇರಿ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ಮುನ್ನಡೆಯುತ್ತಿರುವುದು ಶ್ಲಾಘನೀಯ. ಸರ್ಕಾರದ ಗ್ಯಾರಂಟಿ ಯೋಜನೆಗಳು ಮಹಿಳೆಯರ ಜೀವನಮಟ್ಟ ಉತ್ತಮಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಹೇಳಿದರು.
ತಾಪಂ ಇಒ ರಾಜಶೇಖರ್ ಕೆ. ಮಾತನಾಡಿ, ಮಹಿಳೆಯರು ಶಿಕ್ಷಣ, ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚು ಗಮನ ಹರಿಸಿ ತಮ್ಮ ಪ್ರತಿಭೆ ಮೆರೆಯಬೇಕು. ಉನ್ನತ ಶಿಕ್ಷಣ, ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಉನ್ನತ ಹುದ್ದೆಗಳನ್ನು ಪಡೆಯುವತ್ತ ಹೆಚ್ಚಿನ ಆಸಕ್ತಿ ತೋರಬೇಕು. ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ತಾಯಂದಿರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಮಕ್ಕಳಿಗೆ ಉತ್ತಮ ಸಂಸ್ಕಾರ, ಶಿಕ್ಷಣ ನೀಡುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಮಹಿಳೆಯರು ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಹೇಳಿದರು.ತಾಲೂಕು ಯೋಜನಾಧಿಕಾರಿ ಡಾ. ಹುಲುಗಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಿಳಾ ದಿನಾಚರಣೆ ಪ್ರಯುಕ್ತ ಕೇಕ್ ಕತ್ತರಿಸಲಾಯಿತು. ಇದೇ ವೇಳೆ ಪಂಚ ಗ್ಯಾರಂಟಿ ಯೋಜನೆಗಳಿಂದ ಸದುಪಯೋಗ ಪಡೆದ ಐವರು ಮಹಿಳಾ ಫಲಾನುಭವಿಗಳನ್ನು ಸನ್ಮಾನಿಸಲಾಯಿತು.
ಸಿಡಿಪಿಒ ವಿರೂಪಾಕ್ಷಿ, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಜಗದೀಶ್ ರಾಠೋಡ್, ಚನ್ನಬಸನಗೌಡ, ಜಗದೀಶ ಚನ್ನವೀರಪ್ಪ, ಹನುಮಮ್ಮ ಯಂಕನಗೌಡ ಪಾಟೀಲ್, ಗ್ಯಾನಪ್ಪ, ಭೀಮೇಶ್, ಪಪಂ ಮಾಜಿ ಅಧ್ಯಕ್ಷೆ ಹುಸೇನಬಿ ಚಳ್ಳಮರದ್, ಉಪಾಧ್ಯಕ್ಷ ಕಂಠಿರಂಗಪ್ಪ, ಸದಸ್ಯರಾದ ಸಿದ್ದೇಶಕುಮಾರ್, ನಂದಿನಿ, ರಾಕೇಶ್ ಕಂಪ್ಲಿ, ಹನುಮಂತಪ್ಪ ಬಸರಿಗಿಡದ, ತಾಪಂ ಸಿಬ್ಬಂದಿ ಕೊಟ್ರಯ್ಯಸ್ವಾಮಿ, ಪವನಕುಮಾರ್ ಇತರರಿದ್ದರು.