ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆ

| Published : Jan 16 2025, 12:47 AM IST

ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆ
Share this Article
  • FB
  • TW
  • Linkdin
  • Email

ಸಾರಾಂಶ

ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ಕೂಡ ಮಂಗಳೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ. ಶಶಿಧರ್ ಅಧ್ಯಕ್ಷತೆ ವಹಿಸಿದ್ದರು.

ಕನ್ನಡಪ್ರಭ ವಾರ್ತೆ ಕುಶಾಲನಗರ

ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ಕೂಡ ಮಂಗಳೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.

ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ. ಶಶಿಧರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಮತ್ತು ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಿತು.

ಹಿಂದಿನ ಸಭೆಯ ನಿರ್ಣಯ ಮತ್ತು ಅನುಷ್ಠಾನ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿ ಸಮಗ್ರ ಮಾಹಿತಿ ಅಧಿಕಾರಿಗಳಿಂದ ಪಡೆದು ಕಾರ್ಯಸೂಚಿ ಅನುಗುಣವಾಗಿ ಕೈಗೊಂಡ ವರದಿ ಪರಿಶೀಲನೆ ನಡೆಸಿ ಫಲಾನುಭವಿಗಳಿಗೆ ಸಮರ್ಪಕವಾಗಿ ಯೋಜನೆ ತಲುಪುವಂತೆ ಅಧಿಕಾರಿಗಳಿಗೆ ಸಲಹೆ ನೀಡಲಾಯಿತು.

ಮಡಿಕೇರಿ ಬಸ್‌ ಡಿಪೋ ಘಟಕದ ವ್ಯವಸ್ಥಾಪಕ ಮೆಹಬೂಬ್ ಆಲಿ ಸಾರಿಗೆ ಇಲಾಖೆಯ ವತಿಯಿಂದ ಗ್ಯಾರಂಟಿ ಯೋಜನೆಯ ಬಗ್ಗೆ ಸಭೆಗೆ ಮಾಹಿತಿ ಒದಗಿಸಿದರು.ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಪ್ರದೀಪ್ ಗೃಹಜ್ಯೋತಿ ಯೋಜನೆಗೆ ಸಂಬಂಧಿಸಿ ಮಾಹಿತಿ ಒದಗಿಸಿದರು.

ಕುಶಾಲನಗರ ತಾಲೂಕು ವ್ಯಾಪ್ತಿಯ ಗೃಹ ಲಕ್ಷಿ ಯೋಜನೆಗೆ ಸಂಬಂಧಿಸಿದಂತೆ ಸೋಮವಾರಪೇಟೆ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಶ್ರೀದೇವಿ ವಿವರ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ವಿ.ಪಿ.ಶಶಿಧರ್ ಮಾತಾನಾಡಿ, ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ ಸೇರಿದಂತೆ ಒಟ್ಟು 5 ಯೋಜನೆಗಳನ್ನು ಸಂಬಂಧಿಸಿದ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುವುದರ ಮೂಲಕ ಫಲಾನುಭವಿಗಳಿಗೆ ತಲುಪುವಂತೆ ಎಚ್ಚರವಹಿಸ ಬೇಕಾಗಿದೆ ಎಂದರು.

ಸೋಮವಾರಪೇಟೆ ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪರಮೇಶ್ ಕುಮಾರ್, ಅನುಷ್ಠಾನ ಸಮಿತಿ ಉಪಾಧ್ಯಕ್ಷ ಕೆ.ಸಿ. ಭೀಮಯ್ಯ, ತಾಲೂಕು ಸಮಿತಿ ಸದಸ್ಯರಾದ ಕೆ.ಎಸ್. ಕೃಷ್ಣೆ ಗೌಡ, ಎಚ್ . ಎನ್ . ರಾಜಶೇಖರ್, ಫಿಲೋಮಿನಾ, ಶ್ರೀನಿವಾಸ್ ಕುಮಾರ್, ಅಬ್ದುಲ್ ರಝಾಕ್ ವಿವಿಧ ಇಲಾಖೆಗಳ ಅಧಿಕಾರಿಗಳು, ಅನುಷ್ಠಾನ ಸಮಿತಿಯ ಸದಸ್ಯರು ಇದ್ದರು.