ಸಾರಾಂಶ
ಕನ್ನಡಪ್ರಭ ವಾರ್ತೆ ಮಳವಳ್ಳಿ
ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ನೆಮ್ಮದಿ ಬದುಕು ನೀಡಿದ್ದು, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಗೆಲುವು ಸಾಧಿಸಲಿದ್ದಾರೆ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.ಪಟ್ಟಣದ ಟಿಎಪಿಸಿಎಂಎಸ್ ರೈತ ಸಮುದಾಯ ಭವನದಲ್ಲಿ ಶನಿವಾರ ಸಂಜೆ ನಡೆದ ಕಿರುಗಾವಲು ಹೋಬಳಿಯ ಮುಖಂಡರ ಸಭೆಯಲ್ಲಿ ಮಾತನಾಡಿ, ಕಾಂಗ್ರೆಸ್‌ಗೆ ಕಾರ್ಯಕರ್ತರೇ ಜೀವಾಳ. ಅವರ ಶ್ರಮದಿಂದ ಪಕ್ಷ ಬಲಿಷ್ಠವಾಗುತ್ತಿದೆ. ಲೋಕಸಭೆ ಚುನಾವಣೆ ನಮಗೆ ಬಹುದೊಡ್ಡ ಸವಾಲಾಗಿದೆ ಎಂದರು.
ಎಲ್ಲರೂ ಒಗ್ಗೂಡಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕಿದೆ. ತಕ್ಷಣದಿಂದಲೇ ಪಂಚಾಯ್ತಿ ವಾರು ಮುಖಂಡರು ಹಾಗೂ ಕಾರ್ಯಕರ್ತರು ತಂಡ ರಚಿಸಿಕೊಂಡು ಮತದಾರರ ಬಳಿ ತೆರಳಿ ನಮ್ಮ ಸರ್ಕಾರದ ಸಾಧನೆ ತಿಳಿಸಿ ಮತ ಕೇಳಬೇಕು ಎಂದರು.ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಸಂಕಷ್ಟದಲ್ಲಿ ಇರುವ ಜನರಿಗೆ ನಮ್ಮ ಯೋಜನೆಗಳು ನೆರವಾಗಿವೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನುಡಿದಂತೆ ನಡೆದು ಜನರಿಗೆ ನೀಡಿದ ಭರವಸೆಗಳನ್ನು ಅಧಿಕಾರಕ್ಕೆ ಬಂದ ಕೂಡಲೇ ಜಾರಿಗೊಳಿಸಲಾಗಿದೆ ಎಂದರು.
ಕಾಂಗ್ರೆಸ್ ರಾಜ್ಯದಲ್ಲಿ ಮಾಡಿರುವ ಸಾಧನೆಗಳ ಆಧಾರದ ಮೇಲೆ ಚುನಾವಣೆ ಎದುರಿಸಲಿದೆ. ಮತದಾರರು ವಿಧಾನಸಭಾ ಚುನಾವಣೆಯಂತೆ ನಮ್ಮ ಪಕ್ಷದ ಕೈ ಹಿಡಿಯಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು.ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಚಿಕ್ಕಲಿಂಗಯ್ಯ ಮಾತನಾಡಿ, ಜಿಲ್ಲೆಯಲ್ಲಿಯೇ ಅತಿಹೆಚ್ಚಿನ ಲೀಡ್ ಕೊಡುವ ಕ್ಷೇತ್ರ ಮಳವಳ್ಳಿ ಎಂದು ರಾಜ್ಯ ನಾಯಕರು ಮಾತನಾಡಿಕೊಳ್ಳುತ್ತಿದ್ದಾರೆ. ವಿಧಾನಸಭೆ ಚುನಾವಣಿಗಿಂತಲೂ ಹೆಚ್ಚಿನ ಮತಗಳನ್ನು ನಮ್ಮ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಅವರಿಗೆ ಕೊಡಿಸುವ ಮೂಲಕ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಕೈಬಲಪಡಿಸಬೇಕು ಎಂದರು.
ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ದೊಡ್ಡಯ್ಯ, ಸಿ.ಪಿ.ರಾಜು, ಕಾರ್ಯಾಧ್ಯಕ್ಷ ಎಂ.ಬಿ.ಮಲ್ಲಯ್ಯ, ನಿಕಟಪೂರ್ವ ಅಧ್ಯಕ್ಷ ಕೆ.ಜೆ.ದೇವರಾಜು, ಮುಖಂಡರಾದ ಆರ್.ಎನ್.ವಿಶ್ವಾಸ್, ಸುಜಾತಾ ಕೆ.ಎಂ.ಪುಟ್ಟು, ಬಿ.ಆರ್.ರಾಮಚಂದ್ರು, ಸಿದ್ದೇಗೌಡ, ಸಿ.ಮಾಧು, ಕರಿಯಪ್ಪ, ರಾಮಣ್ಣ ಇದ್ದರು.