ಗ್ಯಾರಂಟಿ ಬಡವರ ಹಸಿವು ನೀಗಿಸುವ ಯೋಜನೆಗಳು: ಭೈರತಿ ಸುರೇಶ

| Published : May 03 2024, 01:02 AM IST

ಸಾರಾಂಶ

ಸಿಎಂ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಐದು ಗ್ಯಾರಂಟಿ ಯೋಜನೆಗಳು ಬಡವರ ಹಸಿವನ್ನು ನೀಗಿಸುವ ಯೋಜನೆಗಳಾಗಿವೆ.

ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಪರ ಪ್ರಚಾರ ಸಭೆಯಲ್ಲಿ ಸಚಿವ

ಕನ್ನಡಪ್ರಭ ವಾರ್ತೆ ಯಲಬುರ್ಗಾ

ಸಿಎಂ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಐದು ಗ್ಯಾರಂಟಿ ಯೋಜನೆಗಳು ಬಡವರ ಹಸಿವನ್ನು ನೀಗಿಸುವ ಯೋಜನೆಗಳಾಗಿವೆ ಎಂದು ಸಚಿವ ಭೈರತಿ ಸುರೇಶ ಹೇಳಿದರು

ತಾಲೂಕಿನ ಚಿಕ್ಕಮ್ಯಾಗೇರಿ ಗ್ರಾಮದಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದರು.ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇರುವವರೆಗೊ ರಾಜ್ಯದಲ್ಲಿ ಯಾವ ಕಾರಣಕ್ಕೂ ಯೊಜನೆಗಳನ್ನು ರದ್ದುಗೊಳಿಸುವುದಿಲ್ಲ. ಇವುಗಳು ಬಡವರ ಪಾಲಿನ ಆಧಾರಸ್ತಂಭವಾಗಿವೆ ಎಂದರು.

ಜನತೆಗೆ ಕೊಟ್ಟಿರುವ ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಕಾಂಗ್ರೆಸ್ ಅತೀ ಸ್ಥಾನಗಳನ್ನು ಗೆಲ್ಲಲಿದೆ. ಬಿಜೆಪಿಯವರು ಏನೇ ಸುಳ್ಳು ಹೇಳಿದರೂ ರಾಜ್ಯದ ಜನತೆ ಅವರಿಗೆ ಮತ ಹಾಕುವುದಿಲ್ಲ. ಕೊಟ್ಟ ಮಾತಿನಂತೆ ಎಲ್ಲ ಭರವಸೆಗಳನ್ನು ಈಡೇರಿಸಿದ ಯಾವುದಾದರೂ ಪಕ್ಷವಿದ್ದರೆ ಅದು ಕಾಂಗ್ರೆಸ್‌. ಮತ್ತೊಮ್ಮೆ ವಿಶ್ವಾಸವಿಟ್ಟು ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳರಿಗೆ ಹೆಚ್ಚಿನ ಮತ ಹಾಕಿಸಿ ಗೆಲ್ಲಿಸಿ ತರಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು.

ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಮಾತನಾಡಿ, ನನ್ನ ಕ್ಷೇತ್ರದ ಜನತೆ ಯಾವತ್ತು ಹಣ, ಹೆಂಡದ ಆಮಿಷಕ್ಕೆ ಮಾರು ಹೋಗುವುದಿಲ್ಲ. ನನ್ನ ಅಬಿವೃದ್ಧಿ ಗಮನಿಸಿ ಅತೀ ಹೆಚ್ಚು ಮತ ನೀಡಲಿದ್ದಾರೆ. ರಾಜಶೇಖರ ಹಿಟ್ನಾಳ ಅಭ್ಯರ್ಥಿಯಲ್ಲ, ನಾನೇ ಅಭ್ಯರ್ಥಿಯೆಂದು ತಿಳಿದುಕೊಂಡು ಕ್ಷೇತ್ರದ ಜನತೆ ಮತ ಹಾಕುತ್ತಾರೆ. ಈ ಬಾರಿ ನಮ್ಮ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಅವರ ಗೆಲುವು ನೂರಕ್ಕೆ ನೂರು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪುರ, ಬ್ಲಾಕ್ ಕಾಂಗ್ರೆಸ್ ತಾಲೂಕಾಧ್ಯಕ್ಷ ಬಸವರಾಜ ಉಳ್ಳಾಗಡ್ಡಿ, ಅಭ್ಯರ್ಥಿ ರಾಜಶೇಖರ ಹಿಟ್ನಾಳ ಮಾತನಾಡಿದರು.

ಈ ಸಂದರ್ಭದಲ್ಲಿ ಶೇಖರಗೌಡ ಗುಮಗೇರಿ, ಯಂಕಣ್ಣ ಯರಾಶಿ, ಹನುಮಂತಗೌಡ ಚೆಂಡೂರು, ವೀರನಗೌಡ ಬಳೂಟಗಿ, ರಾಘವೇಂದ್ರ ಜೋಶಿ, ಗಿರಿಜಾ ಸಂಗಟಿ, ಡಾ. ಶಿವನಗೌಡ ದಾನರಡ್ಡಿ, ಸಾವಿತ್ರಿ ಗೊಲ್ಲರ, ರಸೂಲಸಾಬ ದಮ್ಮೂರ, ಫರೀದಾಬೇಗಂ ಮತ್ತಿತರರಿದ್ದರು.