ಸಾರಾಂಶ
Guarantee projects are properly implemented
ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮೊಹ್ಮದ್ ರಿಯಾಜ್ ಸೂಚನೆ
ಕನ್ನಡಪ್ರಭ ವಾರ್ತೆ ಬೀದರ್ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ ತಾಲೂಕು ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆಯಿತು.
ಈ ವೇಳೆ ಗ್ಯಾರಂಟಿ ಯೋಜನೆ ಬೀದರ್ ತಾಲೂಕಾ ಅಧ್ಯಕ್ಷ ಮೊಹ್ಮದ್ ರಿಯಾಜ್ ಮಾತನಾಡಿ, ಬೀದರ್ ಜಿಲ್ಲೆಯು ಶರಣರ ನಾಡು ಜಗತ್ತಿಗೆ ದಾಸೋಹ ಪದ್ಧತಿ ನೀಡಿದ ಪುಣ್ಯ ಭೂಮಿಯಾಗಿದೆ. ಆದ್ದರಿಂದ, ಈ ಜಿಲ್ಲೆಯಲ್ಲಿ ಅನ್ನಭಾಗ್ಯ ಸೇರಿದಂತೆ ಎಲ್ಲಾ ಯೋಜನೆಗಳು ಸರಿಯಾದ ರೀತಿಯಲ್ಲಿ ಅನುಷ್ಠಾನವಾಗಲಿ ಎಂದು ಹೇಳಿದರು.ಉಪಾಧ್ಯಕ್ಷ ರಾಹುಲ್ ಮಡಕೆ ಮಾತಾನಾಡಿ, ಗ್ಯಾರಂಟಿ ಯೋಜನೆಗಳ ಸದುಪಯೋಗ ಎಲ್ಲರು ಪಡೆಯಬೇಕು. ಈ ಯೋಜನೆಗಳು ಸಾಮಾನ್ಯ ಜನರ ಆರ್ಥಿಕ ಪ್ರಗತಿಗೆ ಸಹಾಕಾರಿಯಾಗಲಿವೆ ಎಂದರು.
ಬೀದರ ತಾಪಂ ಅಧಿಕಾರಿ ಕಿರಣ ಪಾಟೀಲ್ ಮಾತನಾಡಿ, ಸಾಕಷ್ಟು ಜನರು ಬ್ಯಾಂಕ್ ಖಾತೆಗೆ ಆಧಾರ ಜೋಡಣೆ ಮಾಡಿಸದ ಕಾರಣ ಈ ಯೋಜನೆಗಳಿಂದ ವಂಚಿತರಾಗುತ್ತಿದ್ದೂ ಆದಷ್ಟು ಬೇಗ ಎಲ್ಲರೂ ಆಧಾರ ಜೋಡಣೆ ಮಾಡಿಸಿಕೊಳ್ಳಬೇಕು ಎಂದರು. ಈ ವೇಳೆ ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷರಾದ ಅಮೃತರಾವ ಚಿಮಕೋಡೆ, ಸೇರಿದಂತೆ ಇತರರು ಉಪಸ್ಥಿತರಿದ್ದರು----
ಚಿತ್ರ 4ಬಿಡಿಆರ್57ಬೀದರ್ ತಾಪಂ ಕಚೇರಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.