ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಶಾಸಕ ಬಸವಂತಪ್ಪ

| Published : Feb 06 2024, 01:36 AM IST

ಸಾರಾಂಶ

ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ ಮತ್ತು ಪ್ರತಿ ಅರ್ಹ ಫಲಾನುಭವಿಗಳಿಗೆ ಈ ಯೋಜನೆಗಳ ಸೌಲಭ್ಯ ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಯವರು ಈ ಯೋಜನೆಗಳ ನಿಲ್ಲಿಸಲ್ಲ.

ಕನ್ನಡಪ್ರಭ ವಾರ್ತೆ ದಾವಣಗೆರೆ

ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕವಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಸರ್ಕಾರ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಗ್ಯಾರಂಟಿ ಸಮಾವೇಶ ಆಯೋಜಿಸುತ್ತಿದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.

ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಹಾಗೂ ತಾಲೂಕಿನ ಆನಗೋಡು ಗ್ರಾಮದ ವಾಲ್ಮೀಕಿ ಸಮುದಾಯ ಭವನದಲ್ಲಿ ಸೋಮವಾರ ಗ್ರಾಮ ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ''''''''ಗ್ಯಾರಂಟಿ ಸಮಾವೇಶ'''''''' ಉದ್ಘಾಟಿಸಿ ಮಾತನಾಡಿ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ ಮತ್ತು ಪ್ರತಿ ಅರ್ಹ ಫಲಾನುಭವಿಗಳಿಗೆ ಈ ಯೋಜನೆಗಳ ಸೌಲಭ್ಯ ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಯವರು ಈ ಯೋಜನೆಗಳ ನಿಲ್ಲಿಸಲ್ಲ ಎಂದು ತಿಳಿಸಿದರು.

ಕೆಲವರು ಈ ಯೋಜನೆಗಳನ್ನು ತಪ್ಪಿಸಬೇಕೆಂಬ ಉದ್ದೇಶದಿಂದಲೇ ಇಲ್ಲಸಲ್ಲದ ವದಂತಿಗಳ ಫಲಾನುಭವಿಗಳ ತಲೆಯಲ್ಲಿ ತುಂಬುತ್ತಿದ್ದಾರೆ. ಯಾರೂ ಕೂಡ ಈ ಊಹಾಪೋಹಗಳಿಗೆ ಕಿವಿಗೊಡಬಾರದು. ಬಡವರಿಗೆ, ತಾಯಂದಿಯರಿಗೆ ಈ ಸೌಲಭ್ಯ ತಲುಪಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಯೋಜನೆಗಳ ಜಾರಿಗೊಳಿಸಿದ್ದಾರೆ. ಯಾವುದೇ ಕಾರಣಕ್ಕೂ ಫಲಾನುಭವಿಗಳು ಸುಳ್ಳು ವದಂತಿಗಳ ನಂಬಬಾರದು ಎಂದು ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಉಪ ತಹಸೀಲ್ದಾರ್ ರಾಮಸ್ವಾಮಿ, ಡಿ.ಎಂ. ಸಹಾಯಕ ಕೃಷಿ ನಿರ್ದೇಶಕ ಶ್ರೀಧರಮೂರ್ತಿ, ಸಿಡಿಪಿಒ ಅಭಿಕುಮಾರ್, ತಾಪಂ ಇಒ ರಾಮಭೋವಿ, ಕಂದಾಯ ಅಧಿಕಾರಿ ಚಂದ್ರಪ್ಪ, ಕೆಇಬಿ ಎಇಇ ತೀರ್ಥೇಶ್, ಶ್ರೀನಿವಾಸ್, ತೇಜವರ್ಧನ್ ಸೇರಿ ಇನ್ನಿತರರಿದ್ದರು.