ಗ್ಯಾರಂಟಿ ಯೋಜನೆಗಳೇ ಗೆಲುವಿಗೆ ಶ್ರೀರಕ್ಷೆ: ಶಾಸಕ ಕಾಗೆ

| Published : Mar 29 2024, 12:54 AM IST

ಗ್ಯಾರಂಟಿ ಯೋಜನೆಗಳೇ ಗೆಲುವಿಗೆ ಶ್ರೀರಕ್ಷೆ: ಶಾಸಕ ಕಾಗೆ
Share this Article
  • FB
  • TW
  • Linkdin
  • Email

ಸಾರಾಂಶ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಿಗೆ ಸರಿಯಾಗಿ ಅರ್ಥ ಮಾಡಿಸಿ ಬಿಜೆಪಿಯ ಸುಳ್ಳುಗಳಿಗೆ ತಕ್ಕ ಸತ್ಯದ ದಾಖಲೆಗಳನ್ನು ಮಂಡಿಸುವ ಮೂಲಕ ಉತ್ತರ ನೀಡಬೇಕು ಎಂದು ಶಾಸಕ ರಾಜು ಕಾಗೆ ಹೇಳಿದರು.

ಕನ್ನಡಪ್ರಭ ವಾರ್ತೆ ಕಾಗವಾಡ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಿಗೆ ಸರಿಯಾಗಿ ಅರ್ಥ ಮಾಡಿಸಿ ಬಿಜೆಪಿಯ ಸುಳ್ಳುಗಳಿಗೆ ತಕ್ಕ ಸತ್ಯದ ದಾಖಲೆಗಳನ್ನು ಮಂಡಿಸುವ ಮೂಲಕ ಉತ್ತರ ನೀಡಬೇಕು ಎಂದು ಶಾಸಕ ರಾಜು ಕಾಗೆ ಹೇಳಿದರು.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ 8 ವಿಧಾನಸಭಾ ಮತಕ್ಷೇತ್ರಗಳ ಪೈಕಿ 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದೇವೆ. ಸತೀಶ ಜಾರಕಿಹೊಳಿಯವರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾರೆ. ಬಹುತೇಕ ಗ್ರಾಮ ಪಂಚಾಯತಿಗಳು, ಪುರಸಭೆ, ಪಟ್ಟಣ ಪಂಚಾಯತಿಗಳು ಕಾಂಗ್ರೆಸ್ ಸದಸ್ಯರೇ ಇರುವುದರಿಂದ ನಮ್ಮ ಪಕ್ಷದ ಅಭ್ಯರ್ಥಿಗೆ ಅನುಕೂಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ, ಯುವ ನಾಯಕ ರಾಹುಲ್‌ ಜಾರಕಿಹೊಳಿ ಅವರು ಶಾಸಕ ರಾಜು ಕಾಗೆಯವರಿಗೆ ಹೂಗುಚ್ಛ ನೀಡಿ ಚುನಾವಣೆಯ ರಣತಂತ್ರಗಳ ಬಗ್ಗೆ ಚರ್ಚಿಸಿದರು.ಬ್ಲಾಕ್ ಅಧ್ಯಕ್ಷ ವಿಜಯಕುಮಾರ ಅಕಿವಾಟೆ, ಮುಖಂಡರಾದ ಪ್ರವೀಣ ಗಾಣಿಗೇರ, ಅರುಣ ಗಾಣಿಗೇರ, ಸಂಜಯ ಬಿರಡಿ, ಸಂಜಯ ಕುಚನೂರೆ, ವಿನಾಯಕ ಬಾಗಡಿ, ಡಾ.ರಮೇಶ ಚೌಗುಲಾ, ಜ್ಯೋತಿಕುಮಾರ ಪಾಟೀಲ, ಸೌರಭ ಪಾಟೀಲ, ಪ್ರಕಾಶ ಪಾಟೀಲ, ಸಿದ್ದಪ್ಪ ಕನಾಳೆ, ಅಪ್ಪಾಸಾಬ ಪಾಟೀಲ, ಡಾ,ಅರವಿಂದರಾವ್ ಕಾರ್ಚಿ, ಈಶ್ವರ ಕಾಂಬಳೆ, ವಸಂತ ಖೋತ, ವಿನೋದ ಬರಗಾಲೆ, ಘೂಳಪ್ಪ ಜತ್ತಿ, ರಫೀಕ್‌ ಪಟೇಲ್, ಮಲ್ಲಿಕಾರ್ಜುನ ದಳವಾಯಿ, ಸೇರಿದಂತೆ ಅನೇಕರು ಇದ್ದರು.