ಗ್ಯಾರಂಟಿ ಯೋಜನೆಗಳೇ ಕಾಂಗ್ರೆಸ್‌ ಗೆಲುವಿಗೆ ಶ್ರೀರಕ್ಷೆ-ಆನಂದಸ್ವಾಮಿ

| Published : Mar 23 2024, 01:08 AM IST

ಗ್ಯಾರಂಟಿ ಯೋಜನೆಗಳೇ ಕಾಂಗ್ರೆಸ್‌ ಗೆಲುವಿಗೆ ಶ್ರೀರಕ್ಷೆ-ಆನಂದಸ್ವಾಮಿ
Share this Article
  • FB
  • TW
  • Linkdin
  • Email

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನೀಡುವುದರ ಮೂಲಕ ಎಲ್ಲಾ ವರ್ಗದವರನ್ನು ಮೇಲೆತ್ತುವ ಕೆಲಸ ಮಾಡುತ್ತದೆ. ಅದರಿಂದ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಶ್ರೀರಕ್ಷೆಯಾಗಲಿದೆ.

ಹಿರೇಕೆರೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನೀಡುವುದರ ಮೂಲಕ ಎಲ್ಲಾ ವರ್ಗದವರನ್ನು ಮೇಲೆತ್ತುವ ಕೆಲಸ ಮಾಡಿದ್ದು, ಈ ಗ್ಯಾರಂಟಿ ಯೋಜನೆಗಳೇ ನನಗೆ ಶ್ರೀರಕ್ಷೆಯಾಗಲಿದೆ ಎಂದು ಹಾವೇರಿ -ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ವಿಶ್ವಾಸ ವ್ಯಕ್ತಪಡಿಸಿದರು.

ತಾಲೂಕಿನ ಕಚವಿ ಗ್ರಾಮದಲ್ಲಿ ಶುಕ್ರವಾರ ಸ್ವಾತಂತ್ರ್ಯ ಸೇನಾನಿ ಸರ್ದಾರ್ ವೀರನಗೌಡ್ರ ಪಾಟೀಲರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಭರ್ಜರಿ ಮತ ಬೇಟೆ ಆರಂಭಿಸಿದರು.

ಶಾಸಕ ಯು. ಬಿ. ಬಣಕಾರ್ ಮಾತನಾಡಿ, ರಾಜ್ಯ ಸರ್ಕಾರದ ಸಾಧನೆಗಳನ್ನು ಕ್ಷೇತ್ರದ ಮತದಾರರಿಗೆ ಮನೆ ಮನೆಗೆ ಹೋಗಿ ತಿಳಿಸುವುದರ ಮೂಲಕ ತಾಲೂಕಿನಿಂದ ಕಾಂಗ್ರೆಸ್ ಪಕ್ಷಕ್ಕೆ ಅತಿ ಹೆಚ್ಚು ಮತ ನೀಡುವುದರೊಂದಿಗೆ ನಮ್ಮ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದರು.

ಈ ಸಂದರ್ಭದಲ್ಲಿ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಮಡಿವಾಳರ, ಪಿ.ಡಿ. ಬಸನಗೌಡ್ರು, ಎಸ್. ಬಿ. ತಿಪ್ಪಣ್ಣನವರ, ಸಿದ್ದಣ್ಣ ಹಂಪಣ್ಣವರ, ಸಂತೋಷ್ ಪ್ಯಾಟಿ ಬಾಸುರ್, ನಿಂಗಪ್ಪ ಚಳಗೇರಿ, ಸನಾವುಲ್ಲಾ ಮಕಂದಾರ ಹಾಗೂ ಕಚವಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಎಲ್ಲಾ ಕಾರ್ಯಕರ್ತರು ಮುಖಂಡರು ಉಪಸ್ಥಿತರಿದ್ದರು