ಕಡಬದಲ್ಲಿ ‘ಕೈ’ ಹಿಡಿದ ಗ್ಯಾರಂಟಿ: ಶಾಸಕ ಅಶೋಕ್ ರೈ

| Published : Aug 21 2025, 02:00 AM IST

ಕಡಬದಲ್ಲಿ ‘ಕೈ’ ಹಿಡಿದ ಗ್ಯಾರಂಟಿ: ಶಾಸಕ ಅಶೋಕ್ ರೈ
Share this Article
  • FB
  • TW
  • Linkdin
  • Email

ಸಾರಾಂಶ

ಕಡಬ ಪಟ್ಟಣ ಪಂಚಾಯಿತಿಗೆ ನಡೆದ ಚೊಚ್ಚಲ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಭೇರಿ ಭಾರಿಸಿದ್ದು ಇದು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ ಪ್ರತಿಫಲ ಎಂದು ಶಾಸಕ ಅಶೋಕ್ ಕುಮಾರ್ ರೈ ಬಣ್ಣಿಸಿದ್ದಾರೆ.

ಪುತ್ತೂರು: ಕಡಬ ಪಟ್ಟಣ ಪಂಚಾಯಿತಿಗೆ ನಡೆದ ಚೊಚ್ಚಲ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಭೇರಿ ಭಾರಿಸಿದ್ದು ಇದು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ ಪ್ರತಿಫಲವಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳು ಪ್ರತೀ ಕುಟುಂಬಕ್ಕೂ ನೆರವಾಗಿದೆ. ಕಾಂಗ್ರೆಸ್ ಕೇವಲ ಭರವಸೆಯನ್ನು ಮಾತ್ರ ಕೊಟ್ಟು ಜನರಿಗೆ ಎಂದೂ ಮೋಸ ಮಾಡುವುದಿಲ್ಲ ಕೊಟ್ಟ ಮಾತಿನಂತೆ ನಡೆದುಕೊಳ್ಳುವ ಮೂಲಕ ಕಾಂಗ್ರೆಸ್ ಜನರ ಮನಗೆಲ್ಲುವಲ್ಲಿ ಸಫಲವಾಗಿದೆ. ದ ಕ ಜಿಲ್ಲೆ ಸೇರಿದಂತೆ ಎಲ್ಲಾ ಕ್ಷೇತ್ರಗಳ ಅಭಿವೃದ್ದಿಗೆ ಸರ್ಕಾರ ಪಕ್ಷ ಬೇಧ ಮಾಡದೆ ಅನುದಾನವನ್ನು ನೀಡಿದೆ. ಜನ ಈಗ ಬುದ್ದಿವಂತರಾಗಿದ್ದು ಯಾವ ಪಕ್ಷ ಬಡವರ ಪರ, ಯಾವ ಪಕ್ಷ ಅಧಿಕಾರಕ್ಕೆ ಬಂದರೆ ನೆಮ್ಮದಿಯ ಬದುಕು ಕಟ್ಟಲು ಸಾಧ್ಯ ಎಂಬುದನ್ನು ತಿಳಿದುಕೊಂಡಿದ್ದಾರೆ ಇದರ ಪಲಿತಾಂಶವೇ ಕಡಬದ ಜನತೆ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.೧೩ ರಲ್ಲಿ ೮ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲವು ಸಾಧಿಸಿದ್ದು ಉಳಿದಂತೆ ಅಲ್ಪ ಮತಗಳ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸೋತಿದ್ದಾರೆ. ಮುಂದಿನ ದಿನಗಳಲ್ಲಿ ದ ಕ. ಜಿಲ್ಲೆ ಸೇರಿದಂತೆ ಎಲ್ಲಾ ಕಡೆಗಳಲ್ಲಿ ನಡೆಯುವ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆದ್ದು ಬರಲಿದೆ ಮತ್ತು ೨೦೨೮ ರ ಚುನಾವಣೆಯಲ್ಲೂ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಬಡವರ ಪರ ಸರ್ಕಾರ ಇನ್ನಷ್ಟು ಯೋಜನೆಗಳನ್ನು ಮುಂದಿನ ದಿನಗಳಲ್ಲಿ ರೂಪಿಸಲಿದೆ ಎಂದು ಪ್ರತಿಕ್ರಿಯಿಸಿದ್ದಾರೆ.