ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಗೆ ಶಿವು ಚಂಗಾವರ ಮತ್ತು ಕಲಾವಿದ ರಾಜಣ್ಣ ಅವರನ್ನು ನೇಮಕ ಮಾಡಿರುವುದು ಹಿಂದುಳಿದ ವರ್ಗ ಹಾಗೂ ಎಸ್ ಟಿ ಸಮುದಾಯಕ್ಕೆ ಪ್ರಾತಿನಿಧ್ಯ ದೊರೆತಂತಾಗಿದೆ. ಕಾಂಗ್ರೆಸ್ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೆಚ್ಚು ಸಕ್ರಿಯವಾಗಿ ಕೆಲಸ ಮಾಡುವ ಜವಾಬ್ದಾರಿ ನಿಮ್ಮದಾಗಿದೆ ಎಂದು ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.
ಕನ್ನಡಪ್ರಭ ವಾರ್ತೆ ಶಿರಾ
ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ಬದುಕಿನಲ್ಲಿ ಹೊಸ ಚೈತನ್ಯ ನೀಡಿವೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ನೇತೃತ್ವದ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಜನಸಾಮಾನ್ಯರಿಗೆ ತಿಳಿಯಪಡಿಸುವ ಮೂಲಕ ೨೦೨೮ರಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಆಡಳಿತ ಚುಕ್ಕಾಣಿ ಹಿಡಿಯುವಂತೆ ಮಾಡುವ ಹೊಣೆಗಾರಿಕೆ ಕಾಂಗ್ರೆಸ್ ಕಾರ್ಯಕರ್ತರ ಮೇಲಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚು ಸಕ್ರಿಯವಾಗಿ ಕೆಲಸ ಮಾಡುವ ಅವಶ್ಯಕತೆ ಇದೆ ಎಂದು ಶಿರಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಶಿವು ಚಂಗಾವರ ಹೇಳಿದರು.ಶಿರಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ಶಿರಾ ಕ್ಷೇತ್ರದಲ್ಲೂ ಕೂಡ ದೆಹಲಿ ವಿಶೇಷ ಪ್ರತಿನಿಧಿ, ಶಾಸಕರಾದ ಟಿ.ಬಿ. ಜಯಚಂದ್ರ ಅವರು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡು, ಜನರ ಸಮಸ್ಯೆಗಳಿಗೆ ಉತ್ತಮ ಸ್ಪಂದನೆ ನೀಡುವ ಮೂಲಕ ಹೆಚ್ಚು ಕೆಲಸ ಮಾಡಿದ್ದಾರೆ, ಮತ್ತೊಮ್ಮೆ ಟಿ.ಬಿ.ಜಯಚಂದ್ರ ಅವರು ಗೆಲ್ಲುವಂತೆ ಮಾಡುವುದು ನಮ್ಮ ನಿಮ್ಮೆಲ್ಲರ ಸಂಕಲ್ಪ ಎಂದು ತಿಳಿಸಿದರು.
ಶಿರಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಆರ್. ಮಂಜುನಾಥ್ ಮಾತನಾಡಿ, ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಗೆ ಶಿವು ಚಂಗಾವರ ಮತ್ತು ಕಲಾವಿದ ರಾಜಣ್ಣ ಅವರನ್ನು ನೇಮಕ ಮಾಡಿರುವುದು ಹಿಂದುಳಿದ ವರ್ಗ ಹಾಗೂ ಎಸ್ ಟಿ ಸಮುದಾಯಕ್ಕೆ ಪ್ರಾತಿನಿಧ್ಯ ದೊರೆತಂತಾಗಿದೆ. ಕಾಂಗ್ರೆಸ್ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೆಚ್ಚು ಸಕ್ರಿಯವಾಗಿ ಕೆಲಸ ಮಾಡುವ ಜವಾಬ್ದಾರಿ ನಿಮ್ಮದಾಗಿದೆ ಎಂದು ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಮಾಜಿ ಸಚಿವ ವಿನಯ್ ಸೂರಕೆ, ಮಾಜಿ ಸಂಸದ ಎಸ್. ಪಿ.ಮುದ್ದ ಹನುಮೇಗೌಡ, ಮಾಜಿ ಶಾಸಕ ರಫೀಕ್ ಅಹಮದ್, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಇಕ್ಬಾಲ್ ಅಹಮದ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ, ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಬರಗೂರು ನಟರಾಜು, ನಗರ ಪ್ರಚಾರ ಸಮಿತಿ ಅಧ್ಯಕ್ಷ ರಾಜಣ್ಣ, ಕಾಂಗ್ರೆಸ್ ಮುಖಂಡ ಡಾ.ಮನು ಪಟೇಲ್, ವಾಜರಹಳ್ಳಿ ರಮೇಶ್, ಡಿ ಎಂ ಪಿ ಕರಿಯಪ್ಪ, ರಮೇಶ್ ಯಾದವ್, ಜಯಲಕ್ಷ್ಮಿ, ಮಂಜುಳಾ, ಶ್ರುತಿ, ಮಹದೇವಮ್ಮ, ದೊಡ್ಡಣ್ಣ, ಭೀಮಣ್ಣ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರೇಖಾ ತಿಪ್ಪೇಸ್ವಾಮಿ, ಪರಿಸರ ಪ್ರೇಮಿ ಮಂಜುನಾಥ್, ಹಾರೋಗೆರೆ ಮಾರಣ್ಣ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಶಿವಕುಮಾರ್ ನಾಯಕ, ಪಿ.ಬಿ.ನರಸಿಂಹಯ್ಯ, ಲಕ್ಕನಹಳ್ಳಿ ಶ್ರೀನಿವಾಸ್, ಬೂತಣ್ಣ, ಸಂತೋಷ್ ಗೌಡ, ತರೂರು ರಂಗನಾಥ್, ಹೀಮಂತರಾಜ ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.