ಸಾರಾಂಶ
ಗ್ಯಾರಂಟಿ ಯೋಜನೆಗಳ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ದೊರೆಯುವಂತಾಗಬೇಕು ಎಂದು ಹಾಸನ ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ಬನವಾಸಿ ರಂಗಸ್ವಾಮಿ ಅವರು ತಿಳಿಸಿದ್ದಾರೆ. ಅಧಿಕಾರಿಗಳೊಂದಿಗೆ ಮಾಸಿಕ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿದ ಅವರು, ಹಲವು ಸಲಹೆ ಸೂಚನೆಗಳನ್ನು ನೀಡಿದರು. ಇದೇ ವೇಳೆ ಯುವನಿಧಿ ಪೋಸ್ಟರ್ ಮತ್ತು ಕರಪತ್ರಗಳನ್ನು ಬಿಡುಗಡೆ ಮಾಡಿ ಪದವಿ ಮತ್ತು ಡಿಪ್ಲೋಮಾ ಪಡೆದಿರುವ ಪ್ರತಿಯೊಬ್ಬರಿಗೂ ಈ ಸೌಲಭ್ಯ ಸಿಗುವಂತೆ ನೋಡಿಕೊಳ್ಳಬೇಕು ಎಂದರು.
ಕನ್ನಡಪ್ರಭ ವಾರ್ತೆ ಹಾಸನ
ಗ್ಯಾರಂಟಿ ಯೋಜನೆಗಳ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ದೊರೆಯುವಂತಾಗಬೇಕು ಎಂದು ಹಾಸನ ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ಬನವಾಸಿ ರಂಗಸ್ವಾಮಿ ಅವರು ತಿಳಿಸಿದ್ದಾರೆ.ಹಾಸನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾಸಿಕ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿದ ಅವರು, ಹಲವು ಸಲಹೆ ಸೂಚನೆಗಳನ್ನು ನೀಡಿದರು. ಇದೇ ವೇಳೆ ಯುವನಿಧಿ ಪೋಸ್ಟರ್ ಮತ್ತು ಕರಪತ್ರಗಳನ್ನು ಬಿಡುಗಡೆ ಮಾಡಿ ಪದವಿ ಮತ್ತು ಡಿಪ್ಲೋಮಾ ಪಡೆದಿರುವ ಪ್ರತಿಯೊಬ್ಬರಿಗೂ ಈ ಸೌಲಭ್ಯ ಸಿಗುವಂತೆ ನೋಡಿಕೊಳ್ಳಬೇಕು ಎಂದರು.
ಹಾಸನ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಗಿರೀಶ್ ಎಚ್.ಡಿ, ಹಾಸನ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕರಾದ ರಂಗಸ್ವಾಮಿ, ಗ್ಯಾರಂಟಿ ಯೋಜನೆ ಸಮಿತಿ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.