ರಾಜ್ಯದ 1.2 ಕೋಟಿಗೂ ಹೆಚ್ಚು ಕುಟುಂಬಕ್ಕೆ ಗ್ಯಾರಂಟಿ ಅನುಕೂಲ

| Published : Jun 21 2024, 01:04 AM IST

ಸಾರಾಂಶ

ಪ್ರಜಾತಂತ್ರಕ್ಕೆ ಬದ್ಧವಾಗಿರುವ ಒಂದು ದೇಶವು ತನ್ನ ಅತ್ಯಂತ ತಳಮಟ್ಟದ ನಾಗರಿಕರಿಗೆ ಆರ್ಥಿಕ ಭದ್ರತೆ ಕೊಡುವ ಜವಾಬ್ದಾರಿ ಹೊಂದಿದೆ. ಸ್ವಾತಂತ್ರ್ಯದ ಹೊಸ್ತಿಲಲ್ಲಿ ರಾಷ್ಟ್ರಪಿತ ಗಾಂಧೀಜಿ ಅವರ ಆಕಾಂಕ್ಷೆಯೂ ಮೂಲತಃ ಇದೇ ಆಗಿತ್ತು. ಯಾವೊಬ್ಬ ನಾಗರಿಕನು ಕಣ್ಣೀರು ಹಾಕದಂತೆ ನೋಡುವ ಜವಾಬ್ದಾರಿ ಚುನಾಯಿತ ಸರ್ಕಾರದ್ದಾಗಿದೆ.

ಕನ್ನಡಪ್ರಭ ವಾರ್ತೆ ಮೈಸೂರು

ಶಕ್ತಿ, ಅನ್ನಭಾಗ್ಯ, ಗೃಹ ಜ್ಯೋತಿ, ಗೃಹಲಕ್ಷ್ಮಿ ಹಾಗೂ ಯುವ ನಿಧಿ ಯೋಜನೆ ಜಾರಿಗೊಳಿಸುವ ಮೂಲಕ 1.2 ಕೋಟಿಗೂ ಹೆಚ್ಚು ಕುಟುಂಬಗಳಿಗೆ ಅನುಕೂಲ ಕಲ್ಪಿಸಲಾಗಿದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮೆರೋಜ್‌ಖಾನ್‌ ತಿಳಿಸಿದರು.

ನಗರದ ಕಾಂಗ್ರೆಸ್‌ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಗೆ 36,000 ಕೋಟಿ ರೂ. ಅನುದಾನವನ್ನು ಸಂಪೂರ್ಣವಾಗಿ ವೆಚ್ಚ ಮಾಡಲಾಗಿದೆ. 2024-25 ನೇ ಸಾಲಿಗೆ 52,009 ಕೋಟಿ ರು. ಒದಗಿಸಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿಗೆ ಬದಲಾಗಿ ಪ್ರತಿ ಫಲಾನುಭವಿಗೆ 170 ರು. ಗಳಂತೆ ನಗದು ವರ್ಗಾವಣೆ ಮಾಡಲಾಗುತ್ತಿದೆ.

ಈವರೆಗೆ 5754.6 ಕೋಟಿ ರು. ಮೊತ್ತವನ್ನು 4,09,34,896 ಫಲಾನುಭವಿಗಳಿಗೆ ವರ್ಗಾಯಿಸಲಾಗಿದೆ. ಗೃಹ ಜ್ಯೋತಿ ಯೋಜನೆಯಡಿ 1.67 ಕೋಟಿ ಗ್ರಾಹಕರು ನೋಂದಾಯಿಸಿಕೊಂಡಿದ್ದು, 1.60 ಕೋಟಿ ಜನರಿಗೆ 200 ಯುನಿಟ್‌ ವರೆಗೆ ಉಚಿತ ವಿದ್ಯುತ್‌ಒದಗಿಸಲಾಗುತ್ತಿದೆ. ಈ ಯೋಜನೆಯಡಿ 7436 ಕೋಟಿ ರು. ವೆಚ್ಚ ಭರಿಸಲಾಗಿದೆ.

ಗೃಹಲಕ್ಷ್ಮಿ ಯೋಜನೆಯಡಿ ಮನೆ ಯಜಮಾನಿಗೆ ಪ್ರತಿ ತಿಂಗಳು 2,000 ರೂ. ನಂತೆ ಒಟ್ಟು 1.2 ಕೋಟಿ ಮಹಿಳೆಯರಿಗೆ 20293.49 ಕೋಟಿ ರೂ. ವರ್ಗಾಯಿಸಲಾಗಿದೆ. ಯುವ ನಿಧಿ ಯೋಜನೆಯಡಿ 2022-23ನೇ ಶೈಕ್ಷಣಿಕ ವರ್ಷದಲ್ಲಿ ಪದವೀಧರರಾದ ನಿರುದ್ಯೋಗಿ ಯುವಕ ಯುವತಿಯರಿಗೆ ಮಾಸಿಕ 3,000 ಹಾಗೂ ಡಿಪ್ಲೊಮಾ ಪಡೆದವರಿಗೆ 1500 ರೂ. ನಂತೆ ನಿರುದ್ಯೋಗ ಭತ್ಯೆ ನೀಡಲಾಗುತ್ತದೆ. ಈವರೆಗೆ 1.53.255 ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. ನೇರ ನಗದು ವರ್ಗಾವಣೆ ಮೂಲಕ 29,587 ಅರ್ಹ ಅಭ್ಯರ್ಥಿಗಳಿಗೆ ಭತ್ಯೆಯನ್ನು ವಿತರಿಸಲಾಗಿದೆ. ಶಕ್ತಿ ಯೋಜನೆಯಡಿ ಏಪ್ರಿಲ್‌ಅಂತ್ಯದವರೆಗೆ 201.32 ಕೋಟಿಗೂ ಹೆಚ್ಚು ಮಹಿಳೆಯರು ಉಚಿತ ಪ್ರಯಾಣ ಸೌಲಭ್ಯ ಪಡೆದುಕೊಂಡಿದ್ದು, ಇದಕ್ಕಾಗಿ 4857.95 ಕೋಟಿ ರೂ. ವೆಚ್ಚ ಭರಿಸಲಾಗಿದೆ.

ಪ್ರಜಾತಂತ್ರಕ್ಕೆ ಬದ್ಧವಾಗಿರುವ ಒಂದು ದೇಶವು ತನ್ನ ಅತ್ಯಂತ ತಳಮಟ್ಟದ ನಾಗರಿಕರಿಗೆ ಆರ್ಥಿಕ ಭದ್ರತೆ ಕೊಡುವ ಜವಾಬ್ದಾರಿ ಹೊಂದಿದೆ. ಸ್ವಾತಂತ್ರ್ಯದ ಹೊಸ್ತಿಲಲ್ಲಿ ರಾಷ್ಟ್ರಪಿತ ಗಾಂಧೀಜಿ ಅವರ ಆಕಾಂಕ್ಷೆಯೂ ಮೂಲತಃ ಇದೇ ಆಗಿತ್ತು. ಯಾವೊಬ್ಬ ನಾಗರಿಕನು ಕಣ್ಣೀರು ಹಾಕದಂತೆ ನೋಡುವ ಜವಾಬ್ದಾರಿ ಚುನಾಯಿತ ಸರ್ಕಾರದ್ದಾಗಿದೆ ಎಂದು ಗಾಂಧೀಜಿ ಅವರು ಹೇಳಿದ್ದರು.

ಸರ್ಕಾರ ಅಧಿಕಾರಕ್ಕೆ ಬಂದ ದಿನವೇ ನಡೆಸಿದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಯಿತು. ಶಕ್ತಿ, ಅನ್ನಭಾಗ್ಯ, ಗೃಹ ಜ್ಯೋತಿ, ಗೃಹಲಕ್ಷ್ಮಿ ಹಾಗೂ ಯುವ ನಿಧಿ ಯೋಜನೆ ಜಾರಿ ಮಾಡುವ ಮೂಲಕ 1.2 ಕೋಟಿಗೂ ಹೆಚ್ಚು ಕುಟುಂಬಕ್ಕೆ ಅನುಕೂಲ ಕಲ್ಪಿಸಲಾಗಿದೆ. ಗ್ಯಾರಂಟಿ ಯೋಜನೆಗೆ 36000 ಕೋಟಿ ರೂ. ಅನುದಾನವನ್ನು ಸಂಪೂರ್ಣವಾಗಿ ವೆಚ್ಚ ಮಾಡಲಾಗಿದೆ. 2024-25ನೇ ಸಾಲಿಗೆ 52,009 ಕೋಟಿ ರೂ. ಒದಗಿಸಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿಗೆ ಬದಲಾಗಿ ಪ್ರತಿ ಫಲಾನುಭವಿಗೆ 170 ರೂ. ಗಳಂತೆ ನಗದು ವರ್ಗಾವಣೆ ಮಾಡಲಾಗುತ್ತಿದೆ. ಈ ವರೆಗೆ 5754.6 ಕೋಟಿ ರೂ. ಮೊತ್ತವನ್ನು 4,09,34,896 ಫಲಾನುಭವಿಗಳಿಗೆ ವರ್ಗಾಯಿಸಲಾಗಿದೆ. ಗೃಹ ಜ್ಯೋತಿ ಯೋಜನೆಯಡಿ 1.67 ಕೋಟಿ ಗ್ರಾಹಕರು ನೋಂದಾಯಿಸಿಕೊಂಡಿದ್ದು, 1.60 ಕೋಟಿ ಜನರಿಗೆ 200 ಯುನಿಟ್‌ ವರೆಗೆ ಉಚಿತ ವಿದ್ಯುತ್‌ಒದಗಿಸಲಾಗುತ್ತಿದೆ.

ಈ ಯೋಜನೆಯಡಿ 7436 ಕೋಟಿ ರೂ. ವೆಚ್ಚ ಭರಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ಮನೆ ಯಜಮಾನಿಗೆ ಪ್ರತಿ ತಿಂಗಳು 2,000 ರೂ. ನಂತೆ ಒಟ್ಟು 1.2 ಕೋಟಿ ಮಹಿಳೆಯರಿಗೆ 20293.49 ಕೋಟಿ ರೂ. ವರ್ಗಾಯಿಸಲಾಗಿದೆ. ಯುವ ನಿಧಿ ಯೋಜನೆಯಡಿ 2022-23ನೇ ಶೈಕ್ಷಣಿಕ ವರ್ಷದಲ್ಲಿ ಪದವೀಧರರಾದ ನಿರುದ್ಯೋಗಿ ಯುವಕ ಯುವತಿಯರಿಗೆ ಮಾಸಿಕ 3,000 ಹಾಗೂ ಡಿಪ್ಲೊಮಾ ಪಡೆದವರಿಗೆ 1500 ರೂ. ನಂತೆ ನಿರುದ್ಯೋಗ ಭತ್ಯೆ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.

ಈವರೆಗೆ 1.53.255 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ ಮತ್ತು ನೇರ ನಗದು ವರ್ಗಾವಣೆ ಮೂಲಕ 29,587 ಅರ್ಹ ಅಭ್ಯರ್ಥಿಗಳಿಗೆ ಭತ್ಯೆ ವಿತರಿಸಲಾಗಿದೆ. ಶಕ್ತಿ ಯೋಜನೆಯಡಿ ಏಪ್ರಿಲ್‌ಅಂತ್ಯದ ವರೆಗೆ 201.32 ಕೋಟಿಗೂ ಹೆಚ್ಚು ಮಹಿಳೆಯರು ಉಚಿತ ಪ್ರಯಾಣ ಸೌಲಭ್ಯ ಪಡೆದುಕೊಂಡಿದ್ದು, ಇದಕ್ಕಾಗಿ 4857.95 ಕೋಟಿ ರೂ. ವೆಚ್ಚ ಭರಿಸಲಾಗಿದೆ ಎಂದು ವಿವರಿಸಿದರು.

ಪ್ರಜಾತಂತ್ರಕ್ಕೆ ಬದ್ಧವಾಗಿರುವ ಒಂದು ದೇಶವು ತನ್ನ ಅತ್ಯಂತ ತಳಮಟ್ಟದಲ್ಲಿನ ನಾಗರಿಕರಿಗೆ ಆರ್ಥಿಕ ಭದ್ರತೆ ಕೊಡುವ ಜವಾಬ್ದಾರಿ ಹೊಂದಿದೆ. ಸ್ವಾತಂತ್ರ್ಯದ ಹೊಸ್ತಿಲಲ್ಲಿ ರಾಷ್ಟ್ರಪಿತ ಗಾಂಧೀಜಿಯವರ ಆಕಾಂಕ್ಷೆಯೂ ಮೂಲತಃ ಇದೇ ಆಗಿತ್ತು. ಯಾವೊಬ್ಬ ನಾಗರಿಕನು ಕಣ್ಣೀರು ಹಾಕದಂತೆ ನೋಡುವ ಜವಾಬ್ದಾರಿ ಚುನಾಯಿತ ಸರ್ಕಾರದ್ದಾಗಿದೆ ಎಂದು ಗಾಂಧೀಜಿ ಹೇಳಿದ್ದರು.

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ವಿಶ್ವದ ಅತೀ ದೊಡ್ಡ ಸಾಮಾಜಿಕ ಭದ್ರತಾ ಯೋಜನೆ ಕಾಂಗ್ರೆಸ್ ಗ್ಯಾರಂಟಿ ಯೋಜನೆ. ಈ ಯೋಜನೆಯು ಬಿಜೆಪಿಯ ಕೆಟ್ಟ ಆರ್ಥಿಕ ನೀತಿಯಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಆರ್ಥಿಕ ಪುನಶ್ಚೇತನ ಕಾರ್ಯಕ್ರಮ ಗ್ಯಾರಂಟಿ ಯೋಜನೆಯಿಂದ ರಾಜ್ಯದಲ್ಲಿ ತೆರಿಗೆ ಸಂಗ್ರಹಣೆ ಹೆಚ್ಚಿದ್ದು, ಹೊಸ ಉದ್ಯೋಗ ಸೃಷ್ಟಿಯಾಗಿವೆ ಎಂದರು.