ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ಸರ್ಕಾರದ ಯೋಜನೆಗಳ ಯಾವ ಲಾಭವೂ ನಿಮಗೆ ಸಿಗುವುದಿಲ್ಲ. ಹಾಗಾಗಿ ಎಸ್‌ಐಆರ್(ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ) ವೇಳೆ ಎಚ್ಚರದಿಂದ ಇರಿ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕನ್ನಡಪ್ರಭ ವಾರ್ತೆ ರಾಮನಗರ
ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ಸರ್ಕಾರದ ಯೋಜನೆಗಳ ಯಾವ ಲಾಭವೂ ನಿಮಗೆ ಸಿಗುವುದಿಲ್ಲ. ಹಾಗಾಗಿ ಎಸ್‌ಐಆರ್(ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ) ವೇಳೆ ಎಚ್ಚರದಿಂದ ಇರಿ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.ಬೆಂಗಳೂರು ದಕ್ಷಿಣ ಜಿಲ್ಲೆಯ ಹಾರೋಹಳ್ಳಿ ಮತ್ತು ಕನಕಪುರ ತಾಲೂಕಿನ ಹಲವು ಗ್ರಾಮಗಳಲ್ಲಿ ನಡೆದ ಕೃತಜ್ಞತಾ ಸಮರ್ಪಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್ ಎಸ್‌ಐಆರ್ ಬಗ್ಗೆ ಪ್ರಸ್ತಾಪಿಸಿದರು. ಯಾರೂ ತಮ್ಮ ಮತವನ್ನು ಬೇರೆ ಕಡೆಗೆ ವರ್ಗಾಯಿಸಬೇಡಿ. ನಿಮ್ಮ ಊರಿನಲ್ಲೇ ಮತದಾರರ ಪಟ್ಟಿಯಲ್ಲಿ ಹೆಸರು ಉಳಿಸಿಕೊಳ್ಳಿ. ಎಲ್ಲಾ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳಿ ಎಂದು ಸಲಹೆ ನೀಡಿದರು.
ಎಸ್‌ಐಆರ್ ಬಗ್ಗೆ ಎಲ್ಲರೂ ಎಚ್ಚರಿಕೆಯಿಂದ ಇರಬೇಕು. ನಮ್ಮ ಮತ ಇದೆ ಎಂದು ಭಾವಿಸಿ ಸುಮ್ಮನಾದರೆ ಮತ ಹೋಗುತ್ತದೆ. ಮತ್ತೊಮ್ಮೆ ಎಲ್ಲರೂ ಅರ್ಜಿ ಸಲ್ಲಿಸಬೇಕು. ನೀವು ಅರ್ಜಿ ಸಲ್ಲಿಸದಿದ್ದರೆ ಮತವೂ ಇಲ್ಲ, ಜೊತೆಗೆ ಯಾವುದೇ ಸರ್ಕಾರಿ ಯೋಜನೆಗಳ ಲಾಭವೂ ಸಿಗುವುದಿಲ್ಲ. ಗೃಹಲಕ್ಷ್ಮೀ, ಗೃಹಜ್ಯೋತಿ ಯಾವುದೂ ಸಿಗುವುದಿಲ್ಲ. ನಿಮ್ಮ ಮತವನ್ನು ಕನಕಪುರ ಕ್ಷೇತ್ರದಲ್ಲಿಯೇ ಉಳಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.ಸಿದ್ದರಾಮಯ್ಯ ನುಡಿದಂತೆ ನಡೆದಿದ್ದಾರೆ:ನನ್ನ ಕಷ್ಟ ಕಾಲದಲ್ಲಿ ನೀವು ನನಗಾಗಿ ಪ್ರಾರ್ಥನೆ ಮಾಡಿದ್ದೀರಿ, ಹರಕೆ ಕಟ್ಟಿಕೊಂಡಿದ್ದೀರಿ, ಹೋರಾಟ ಮಾಡಿದ್ದೀರಿ, ಕೇಸ್ ಹಾಕಿಸಿಕೊಂಡಿದ್ದೀರಿ. ನಿಮ್ಮ ಶ್ರಮಕ್ಕೆ ಈಗ ಫಲ ಸಿಕ್ಕಿದೆ. ಎರಡು ದಿನ ತಡವಾದರೂ ಸಿದ್ದರಾಮಯ್ಯ ಅವರು ನುಡಿದಂತೆ ನಡೆದಿದ್ದಾರೆ. ನಾನು ಪಕ್ಷದ ಮಾರ್ಗದರ್ಶನದಂತೆ ನಡೆಯಬೇಕು. ನಾನು ಹಾಗೂ ಸಿದ್ದರಾಮಯ್ಯ ಅವರು ಸೇರಿ 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ, ಸರ್ಕಾರ ರಚಿಸಲು ನೀವು ಅನುವು ಮಾಡಿಕೊಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ನನಗೆ ಜಾತಿ, ಧರ್ಮ ಬೇಧ ಭಾವದ ಮೇಲೆ ನಂಬಿಕೆ ಇಲ್ಲ. ಕುವೆಂಪು ಅವರು ಹೇಳಿರುವಂತೆ ಈ ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿ ಮಾಡಬೇಕು. ಎಲ್ಲ ಸಮುದಾಯದವರನ್ನು ನಾನು ನನ್ನ ಅಣ್ಣ ತಮ್ಮಂದಿರೆಂದು ಕಂಡಿದ್ದೇನೆ ಎಂದು ಹೇಳಿದರು.ಡಿಕೆಶಿಯಿಂದ 21 ಸ್ಥಳಗಳಲ್ಲಿ ಸಿಎಂ ಕೃತಜ್ಞತಾ ಸಮರ್ಪಣೆ:ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ತವರು ಕ್ಷೇತ್ರ ಕನಕಪುರಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳ ಮಾತ್ರವಲ್ಲದೆ ಜನರಿಂದಲೂ ಭವ್ಯ ಸ್ವಾಗತ ದೊರಕಿತು. ಕನಕಪುರ ಕ್ಷೇತ್ರದ ಜನತೆಗೆ ಕೃತಜ್ಞತೆ ಸಮರ್ಪಿಸಲು ಇಡೀ ದಿನ ಪ್ರವಾಸ ನಡೆಸಿದ ಡಿ.ಕೆ.ಶಿವಕುಮಾರ್ ಅವರು ಹಾರೋಹಳ್ಳಿ ಮತ್ತು ಕನಕಪುರ ತಾಲೂಕಿನಲ್ಲಿ 21 ಸ್ಥಳಗಳಿಗೆ ಭೇಟಿ ನೀಡಿ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಅಭಿಮಾನಿಗಳ ಹರ್ಷೋದ್ಗಾರದಲ್ಲಿ ಡಿ.ಕೆ.ಶಿವಕುಮಾರ್ ಮಿಂದೆದ್ದರು.
ತುಂಗಣಿಗೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಟಿ.ಬೇಕುಪ್ಪೆ ಗ್ರಾಮದಲ್ಲಿಯೂ ಅದ್ಧೂರಿ ಸ್ವಾಗತ ಸಿಕ್ಕಿತು. ಮನೆ ದೇವತೆ ಕೆಂಕೇರಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಈಡು ಗಾಯಿ ಹೊಡೆದು ಹರಕೆ ತೀರಿಸಿದರು. ಡಿಕೆಶಿ ಕೋಡಿಹಳ್ಳಿಯಲ್ಲಿ ಭೋಜನ ಸೇವಿಸಿ ವಿಶ್ರಾಂತಿ ಪಡೆದರು. ಅಲ್ಲದೆ, ತಾಯಿ ಗೌರಮ್ಮ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದು ಕೆಲಕಾಲ ಮಾತುಕತೆ ನಡೆಸಿದರು.ಹಾರೋಹಳ್ಳಿ ಮತ್ತು ಕನಕಪುರ ತಾಲೂಕಿನಲ್ಲಿ 21 ಸ್ಥಳಗಳಿಗೆ ಭೇಟಿ ನೀಡಿ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಅಭಿಮಾನಿಗಳ ಹರ್ಷೋದ್ಗಾರದಲ್ಲಿ ಡಿ.ಕೆ.ಶಿವಕುಮಾರ್ ಮಿಂದೆದ್ದರು. ತುಂಗಣಿಗೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಟಿ.ಬೇಕುಪ್ಪೆ ಗ್ರಾಮದಲ್ಲಿಯೂ ಅದ್ಧೂರಿ ಸ್ವಾಗತ ಸಿಕ್ಕಿತು. ಮನೆ ದೇವತೆ ಕೆಂಕೇರಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಈಡು ಗಾಯಿ ಹೊಡೆದು ಹರಕೆ ತೀರಿಸಿದರು.ಡಿಕೆಶಿ ಕೋಡಿಹಳ್ಳಿಯಲ್ಲಿ ಭೋಜನ ಸೇವಿಸಿ ವಿಶ್ರಾಂತಿ ಪಡೆದರು. ಅಲ್ಲದೆ, ತಾಯಿ ಗೌರಮ್ಮ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದು ಕೆಲಕಾಲ ಮಾತುಕತೆ ನಡೆಸಿದರು. ತುಂಗಣಿಗೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಟಿ.ಬೇಕುಪ್ಪೆ ಗ್ರಾಮದಲ್ಲಿಯೂ ಅದ್ಧೂರಿ ಸ್ವಾಗತ ಸಿಕ್ಕಿತು. ಮನೆ ದೇವತೆ ಕೆಂಕೇರಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಈಡು ಗಾಯಿ ಹೊಡೆದು ಹರಕೆ ತೀರಿಸಿದರು. ಡಿಕೆಶಿ ಕೋಡಿಹಳ್ಳಿಯಲ್ಲಿ ಭೋಜನ ಸೇವಿಸಿ ವಿಶ್ರಾಂತಿ ಪಡೆದರು. ಅಲ್ಲದೆ, ತಾಯಿ ಗೌರಮ್ಮ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದು ಕೆಲಕಾಲ ಮಾತುಕತೆ ನಡೆಸಿದರು.2 ವರ್ಷ ಸಿಎಂ ಆಗಿದ್ರೆ ಸಾಕಾ?:ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ, ನಿಮ್ಮ ಮನೆ ಮಗ, ನಿಮ್ಮ ಸೇವಕ. ನೀವು ನನ್ನನ್ನು ಎರಡು ವರ್ಷದ ಮುಖ್ಯಮಂತ್ರಿಯಾಗಿ ನೋಡಿದರೆ ಸಾಕಾ. 2028ಕ್ಕೂ ನಾನೇ ಬರಬೇಕು ಅಂದರೆ ಇಡೀ ರಾಜ್ಯ ಸುತ್ತಲು ನನಗೆ ಬಿಡುವು ಮಾಡಿಕೊಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ 2028ರಲ್ಲಿಯೂ ತಾವೇ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಶಯ ವ್ಯಕ್ತಪಡಿಸಿದರು.ಹಾರೋಹಳ್ಳಿ ಮತ್ತು ಕನಕಪುರ ತಾಲೂಕಿನ ಹಲವು ಗ್ರಾಮಗಳಲ್ಲಿ ನಡೆದ ಕೃತಜ್ಞತಾ ಸಮರ್ಪಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ನಾನು ಇಡೀ ರಾಜ್ಯ ಸುತ್ತಬೇಕಿದೆ. ನಿಮಗೆ ಹೆಚ್ಚು ಸಮಯ ಕೊಡಲು ಆಗಲ್ಲ. 2028ಕ್ಕೂ ನಾನೇ ಸಿಎಂ ಆಗಿ ಬರಬೇಕೆಂದರೆ ನನಗೆ ಬಿಡುವು ನೀಡಬೇಕು ಎಂದರು.ನೀವು ಗೆಲ್ಲಿಸಿದ್ದಕ್ಕೆ ನಾನು ಮುಖ್ಯಮಂತ್ರಿ ಆಗಿದ್ದೇನೆ. ಮುಖ್ಯಮಂತ್ರಿ ಆಗಿದ್ದರೂ ನಾನು ನಿಮ್ಮ ಸೇವಕ. ನಿಮ್ಮೆಲ್ಲರ ಆಶೀರ್ವಾದದಿಂದ ನಾನು ಸಫಲವಾಗಿದ್ದೇನೆ. ನಿಮ್ಮ ಏನೇ ಸಮಸ್ಯೆ ಇದ್ದರೂ ನಮ್ಮ ಮನೆಯ ಬಾಗಿಲು ತೆರೆದಿರುತ್ತದೆ. ನಿಮ್ಮ ಸಮಸ್ಯೆಗಳಿಗೆ ಪರಿಹಾರ ನೀಡುತ್ತೇನೆ ಎಂದು ತಿಳಿಸಿದರು.ಎಲ್ಲೆಡೆ ಕನಕಪುರ ಅಂದರೆ ಮುಖ್ಯಮಂತ್ರಿ ಕ್ಷೇತ್ರ ಅನ್ನುತ್ತಾರೆ. ಆ ಅಧಿಕಾರ ಕೊಟ್ಟಿದ್ದು ನೀವು. ನಿಮ್ಮ ಆಶೀರ್ವಾದ ಸದಾ ನನ್ನ ಮೇಲೆ ಇರಲಿ. ನನ್ನ ಕೊನೆಯ ಉಸಿರು ಇರುವವರೆಗೂ ನಿಮ್ಮ ಮಗನಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಈ ದೇಶದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ನವರಿಗೆ ಮತ್ತೊಬ್ಬ ಡಿ.ಕೆ.ಶಿವಕುಮಾರ್‌ನನ್ನು ತಯಾರು ಮಾಡಲು ಸಾಧ್ಯವಿಲ್ಲ ಎಂದರು.