ಸಾರಾಂಶ
ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜನರಿಗೆ ತಲುಪಿಸುವ ಮೂಲಕ ನುಡಿದಂತೆ ನಡೆದುಕೊಂಡಿದ್ದೇವೆ. ಇನ್ನೂ ಅಭಿವೃಧಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು.
ಸಮನವಳ್ಳಿಯಲ್ಲಿ 17 ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಮಧು ಬಂಗಾರಪ್ಪ
ಕನ್ನಡಪ್ರಭ ವಾರ್ತೆ ಆನವಟ್ಟಿಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜನರಿಗೆ ತಲುಪಿಸುವ ಮೂಲಕ ನುಡಿದಂತೆ ನಡೆದುಕೊಂಡಿದ್ದೇವೆ. ಇನ್ನೂ ಅಭಿವೃಧಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು.ಶನಿವಾರ ಆನವಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಮನವಳ್ಳಿಯಲ್ಲಿ ಹಮ್ಮಿಕೊಂಡಿದ್ದ 17 ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ 17 ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ದಂಡಾವತಿ ಯೋಜನೆಯ ಅಡಿಯಲ್ಲಿ ₹980 ಕೋಟಿ ವೆಚ್ಚದ ನೀರಾವರಿ ಯೋಜನೆಗಳಿಗೆ ಸದ್ಯದಲ್ಲೇ ಚಾಲನೆ ದೊರೆಯಲಿದೆ. ಶಕ್ತಿ ಯೋಜನೆ ಅಡಿಯಲ್ಲಿ ಈಗಾಗಲೇ ಜಿಲ್ಲೆಗೆ 64 ಬಸ್‌ಗಳನ್ನು ಹೊಸದಾಗಿ ಖರೀದಿಸಲಾಗಿದೆ. ಇನ್ನೂ 34 ಬಸ್‌ಗಳನ್ನು ಖರೀದಿ ಮಾಡಲಾಗುವುದು. ಆಗ ಸೊರಬ ತಾಲೂಕಿಗೆ ಹೆಚ್ಚಿನ ಬಸ್‌ಗಳನ್ನು ನೀಡಲಾಗುವುದು ಎಂದರು.ಬಗರ್ ಹುಕುಂ ರೈತರಿಗೆ ಹಕ್ಕು ಪತ್ರ ನೀಡಲು ಸರ್ಕಾರ ಬದ್ಧ: ಹಲವು ದಶಕಗಳಿಂದ ಭೂಮಿ ಸಾಗುವಳಿ ಮಾಡುತ್ತಿರುವ ಬಗರ್ ಹುಕುಂ ರೈತರಿಗೆ ಹಾಗೂ ಅರಣ್ಯ ಪ್ರದೇಶದಲ್ಲಿ ಮನೆ ಕಟ್ಟಿಕೊಂಡಿರುವ ಅರಣ್ಯ ವಾಸಿಗಳಿಗೆ ಹಕ್ಕು ಪತ್ರ ನೀಡಲು ಹಾಗೂ ರಕ್ಷಣೆ ನೀಡಲು ಸರ್ಕಾರ ಬದ್ಧವಾಗಿದೆ ಎಂದರು.
ಸಮಾರಂಭದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಎನ್. ಹೇಮಂತ್, ಉಪವಿಭಾಗಾಧಿಕಾರಿ ಯತೀಶ್, ತಹಸೀಲ್ದಾರ್ ಮಂಜುಳಾ ಹೆಗಡಾಳ್, ಬಿಇಒ ಆರ್. ಪುಷ್ಪಾ, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಾದ ಸದಾನಂದ ಗೌಡ ಪಾಟೀಲ್, ಅಣ್ಣಪ್ಪ ಹಾಲಘಟ್ಟ, ಜಿಲ್ಲಾ ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಪಿ ರುದ್ರಗೌಡ, ಹಿರಿಯ ಕಾಂಗ್ರೆಸ್ ಮುಖಂಡರಾದ ಜರ್ಮಲೆ ಚಂದ್ರಶೇಖರ್, ಚೌಟಿ ಚಂದ್ರಶೇಖರ್ ಪಾಟೀಲ್, ಮುಖಂಡರಾದ ಮಧುಕೇಶ್ವರ್ ಪಾಟೀಲ್, ಸುರೇಶ್ ಹಾವಣ್ಣನವರ್, ಎಲ್. ಜಿ ಮಾಲತೇಶ್, ಹಬೀಬುಲ್ಲಾ ಹವಾಲ್ದರ್, ಸಂಜೀವ ತರಕಾರಿ, ಅನೀಶ್ ಗೌಡ, ಚಾಂದ್ ನೂರಿ, ನಾಗರಾಜ ಶುಂಠಿ, ಬಸವರಾಜ್ ಅಗಸನಹಳ್ಳಿ ಇದ್ದರು.