ಆರ್ಥಿಕ, ಸಾಮಾಜಿಕ ಪ್ರಗತಿಗೆ ಗ್ಯಾರಂಟಿಗಳು ಬುನಾದಿ

| Published : Apr 04 2025, 12:49 AM IST

ಆರ್ಥಿಕ, ಸಾಮಾಜಿಕ ಪ್ರಗತಿಗೆ ಗ್ಯಾರಂಟಿಗಳು ಬುನಾದಿ
Share this Article
  • FB
  • TW
  • Linkdin
  • Email

ಸಾರಾಂಶ

ಯಾವುದೇ ಜಾತಿ-ಧರ್ಮದ ಬೇಧವಿಲ್ಲದೇ ಜಾರಿಗೆ ತರಲಾಗಿರುವ ಗ್ಯಾರಂಟಿ ಯೋಜನೆಗಳ ಲಾಭ ಯಾವುದೇ ಮಧ್ಯವರ್ತಿಗಳ ಹಾವಳಿಯಿಲ್ಲದೇ ನೇರವಾಗಿ ಫಲಾನುಭವಿಗಳಿಗೆ ತಲುಪುತ್ತಿದೆ. ಇದರಿಂದ ಜಿಲ್ಲೆಯ ನಾಲ್ಕು ಲಕ್ಷ ಕುಟುಂಬಗಳಿಗೆ ವಾರ್ಷಿಕ ₹60 ಸಾವಿರವರೆಗೆ ಅನುಕೂಲವಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ.ತಿಮ್ಮಾಪೂರ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಯಾವುದೇ ಜಾತಿ-ಧರ್ಮದ ಬೇಧವಿಲ್ಲದೇ ಜಾರಿಗೆ ತರಲಾಗಿರುವ ಗ್ಯಾರಂಟಿ ಯೋಜನೆಗಳ ಲಾಭ ಯಾವುದೇ ಮಧ್ಯವರ್ತಿಗಳ ಹಾವಳಿಯಿಲ್ಲದೇ ನೇರವಾಗಿ ಫಲಾನುಭವಿಗಳಿಗೆ ತಲುಪುತ್ತಿದೆ. ಇದರಿಂದ ಜಿಲ್ಲೆಯ ನಾಲ್ಕು ಲಕ್ಷ ಕುಟುಂಬಗಳಿಗೆ ವಾರ್ಷಿಕ ₹60 ಸಾವಿರವರೆಗೆ ಅನುಕೂಲವಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ.ತಿಮ್ಮಾಪೂರ ಹೇಳಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರತಂದಿರುವ ಪಂಚ ಗ್ಯಾರಂಟಿ ಯೋಜನೆಗಳ ಬಾಗಲಕೋಟೆ ಜಿಲ್ಲಾ ಪ್ರಗತಿ ನೋಟದ ಕಿರುಹೊತ್ತಿಗೆಯನ್ನು ಜಮಖಂಡಿಯ ನಿರೀಕ್ಷಣಾ ಮಂದಿದಲ್ಲಿ ಬುಧವಾರ ಬಿಡುಗಡೆ ಮಾಡಿ ಅವರು ಮಾತನಾಡಿದರು. ಗೃಹಲಕ್ಷ್ಮೀ ಹಾಗೂ ಶಕ್ತಿ ಯೋಜನೆಗಳು ಮಹಿಳೆಯರ ಆರ್ಥಿಕ ಸ್ವಾವಲಂಬನೆ, ಶಿಕ್ಷಣ, ಉದ್ಯೋಗ ಅವಕಾಶ ಹೆಚ್ಚಳಕ್ಕೆ ಪೂರಕವಾಗಿದ್ದು, ಅವರ ಆರ್ಥಿಕ, ಸಾಮಾಜಿಕ ಉನ್ನತಿಗೆ ಬುನಾದಿಯಾಗಿವೆ ಎಂದು ಶ್ಲಾಘಿಸಿದರು.ಮಹಿಳಾ ಸಬಲೀಕರಣಕ್ಕೆ ಅರ್ಥತಂದ ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ ಪ್ರತಿ ದಿನ ಸಂಚರಿಸುವ ಒಟ್ಟು 3.4 ಲಕ್ಷ ಪ್ರಯಾಣಿಕರ ಪೈಕಿ 1.87 ಲಕ್ಷ ಮಹಿಳೆಯರು ಇದರ ಪ್ರಯೋಜನ ಪಡೆಯುತ್ತಿದ್ದಾರೆ. ಹಸಿದವರ ಹೊಟ್ಟೆ ತಣಿಸುತ್ತಿರುವ ಅನ್ನಭಾಗ್ಯ ಯೋಜನೆಯಡಿ 2,99,293 ಪಡಿತರ ಚೀಟಿದಾರರು ಪ್ರಯೋಜನೆ ಪಡೆದರೆ, ಆರ್ಥಿಕ ಸಬಲತೆಯ ಜೊತೆಗೆ ಹರುಷ ತರುವ ಮೂಲಕ ಸಾರ್ಥಕತೆ ಪಡೆದುಕೊಂಡ ಗೃಹಲಕ್ಷ್ಮೀ ಯೋಜನೆಯಿಂದ 4,19,360 ಮಹಿಳೆಯರು ಲಾಭ ಪಡೆಯುತ್ತಿದ್ದಾರೆ. ಅಲ್ಲದೇ ಯುವ ಸಮುದಾಯವನ್ನು ಮುಖ್ಯವಾಹಿನಿಗೆ ತರುವ ಮೂಲಕ ಅವರಿಗೆ ಉದ್ಯೋಗ ದೊರಕಿಸುವ ಯುವನಿಧಿ ಯೋಜನೆಯಡಿ 8084 ಪದವೀಧರರು, 105 ಡಿಪ್ಲೋಮಾ ಪದವೀಧರರು ಪ್ರಯೋಜನ ಪಡೆಯುತ್ತಿದ್ದಾರೆ ಎಂದು ತಿಳಿಸಿದರು. ಸರ್ಕಾರ ಜಾರಿಗೆ ತರುವ ಯೋಜನೆಗಳು ನೇರವಾಗಿ ಫಲಾನುಭವಿಗೆ ತಲುಪುವಂತಾಗಬೇಕು ಎಂಬುದು ನಮ್ಮ ಆಶಯ. ಜನಸಾಮಾನ್ಯರಿಗೆ ಸರ್ಕಾರ ಜಾರಿಗೆ ತಂದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಮಾಹಿತಿಯುಳ್ಳ ಪುಸ್ತಕವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರತಂದಿರುವುದು ಜನರ ಜೀವನ ಮಟ್ಟ ಸುಧಾರಿಸುವಲ್ಲಿ ಬೆಳಕು ಚೆಲ್ಲಲಿ ಎಂದು ಹಾರೈಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಅಮರನಾಥ ರೆಡ್ಡಿ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ಜಿಲ್ಲಾ ವಾರ್ತಾಧಿಕಾರಿ ಕಸ್ತೂರಿ ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.