ರಾಜ್ಯ ಸರ್ಕಾರ ರೂಪಿಸಿದ ಗ್ಯಾರಂಟಿ ಯೋಜನೆಗಳಿಂದ ಬಡ ಮತ್ತು ಸಾಮಾನ್ಯ ಜನರಿಗೆ ಸಾಕಷ್ಟು ಅನುಕೂಲವಾಗಿದೆ. ಕೇಂದ್ರದ ತಪ್ಪು ಆರ್ಥಿಕ ನೀತಿಗಳಿಂದ ಬೆಲೆ ಏರಿಕೆ ಹೆಚ್ಚಾಗಿರುವ ಸಂದರ್ಭದಲ್ಲಿ ಈ ಯೋಜನೆಗಳು ಜನರಿಗೆ ಬಹಳ ನೆರವಾಗಿವೆ. ಆದ್ದರಿಂದ ಸರ್ಕಾರದ ಈ ಯೋಜನೆಗಳನ್ನು ಜನತೆಗೆ ತಲುಪಿಸುವುದು ಪಕ್ಷದ ನಾಯಕರ ಕರ್ತವ್ಯವಾಗಿದೆ ಎಂದು ರಾಜ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ರಿಜ್ವಾನ್ ಅರ್ಷದ್ ಹೇಳಿದರು.
ಉಡುಪಿ: ರಾಜ್ಯ ಸರ್ಕಾರ ರೂಪಿಸಿದ ಗ್ಯಾರಂಟಿ ಯೋಜನೆಗಳಿಂದ ಬಡ ಮತ್ತು ಸಾಮಾನ್ಯ ಜನರಿಗೆ ಸಾಕಷ್ಟು ಅನುಕೂಲವಾಗಿದೆ. ಕೇಂದ್ರದ ತಪ್ಪು ಆರ್ಥಿಕ ನೀತಿಗಳಿಂದ ಬೆಲೆ ಏರಿಕೆ ಹೆಚ್ಚಾಗಿರುವ ಸಂದರ್ಭದಲ್ಲಿ ಈ ಯೋಜನೆಗಳು ಜನರಿಗೆ ಬಹಳ ನೆರವಾಗಿವೆ. ಆದ್ದರಿಂದ ಸರ್ಕಾರದ ಈ ಯೋಜನೆಗಳನ್ನು ಜನತೆಗೆ ತಲುಪಿಸುವುದು ಪಕ್ಷದ ನಾಯಕರ ಕರ್ತವ್ಯವಾಗಿದೆ ಎಂದು ರಾಜ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ರಿಜ್ವಾನ್ ಅರ್ಷದ್ ಹೇಳಿದರು.
ಅವರು ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಪಕ್ಷದ ಮುಖಂಡರ ಹಾಗೂ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಯೋಜವನ್ನು ಪಕ್ಷ, ಜಾತಿ, ಧರ್ಮ ಭೇದವಿಲ್ಲದೆ ಎಲ್ಲಾ ಅರ್ಹ ಫಲಾನುಭವಿಗಳಿಗೆ ತಲುಪಿಸಲಾಗುತ್ತಿದೆ. ಪ್ರತಿಯೊಬ್ಬರೂ ಸಮಾಜದಲ್ಲಿ ನೆಮ್ಮದಿಯ ಜೀವನ ನಡೆಸುವಂತಾಗಬೇಕು ಎಂಬುದೇ ಕಾಂಗ್ರೆಸ್ ಪಕ್ಷದ ಸಂಕಲ್ಪ ಎಂದರು.ಮಾಜಿ ಸಂಸದರಾದ ಜಯಪ್ರಕಾಶ್ ಹೆಗ್ಡೆ ಮಾತನಾಡಿ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದ ಬಿಜೆಪಿ ಈಗ ತಾನು ಅಧಿಕಾರದಲ್ಲಿರುವ ರಾಜ್ಯಗಳಲ್ಲಿಯೂ ಇದೇ ಮಾದರಿಯ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ, ಅಂದರೆ ಬಿಜೆಪಿ ಕರ್ನಾಟಕದ ಯೋಜನೆಯನ್ನು ನಕಲು ಹೊಡೆಯುತ್ತಿದೆ ಎಂದರ್ಥ, ಹಾಗಾಗಿ ಇಂದು ದೇಶಕ್ಕೆ ಕರ್ನಾಟಕವೇ ಮಾದರಿ ಆಗಿದೆ ಎಂದರು.ಸಭೆಯಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕರಾವಳಿಯ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಪೂರ್, ಪಕ್ಷದ ಪ್ರಮುಖರಾದ ದಿನಕರ ಹೇರೂರು, ಪ್ರಶಾಂತ್ ಜತ್ತನ್ನ, ಉದಯಕುಮಾರ್ ಶೆಟ್ಟಿ ಮುನಿಯಾಲು, ವೈ. ಸುಕುಮಾರ್, ಗೋಪಿನಾಥ್ ಭಟ್, ಸಂತೋಷ್ ಕುಲಾಲ್, ಭುಜಂಗ ಶೆಟ್ಟಿ, ಬಿ . ನರಸಿಂಹಮೂರ್ತಿ ವಿಶ್ವಾಸ್ ಅಮೀನ್, ಹರಿಪ್ರಸಾದ್ ರೈ, ಹಬೀಬ್ ಆಲಿ, ಪ್ರಖ್ಯಾತ ಶೆಟ್ಟಿ, ಜ್ಯೋತಿ ಹೆಬ್ಬಾರ್, ಮಿನಾಕ್ಷಿ ಮಾಧವ ಬನ್ನಂಜೆ, ಮಹಾಬಲ ಕುಂದರ್, ಕೀರ್ತಿ ಶೆಟ್ಟಿ, ಸುರೇಶ್ ಶೆಟ್ಟಿ ಬನ್ನಂಜೆ, ಇಸ್ಮಾಯಿಲ್ ಅತ್ರಾಡಿ ಉಪಸ್ಥಿತರಿದ್ದರು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಸ್ವಾಗತಿಸಿ, ಜಿಲ್ಲಾ ವಕ್ತಾರ ಭಾಸ್ಕರ್ ರಾವ್ ಕಿದಿಯೂರು ವಂದಿಸಿದರು. ಪಕ್ಷ ಸೇರಲು ಎಲ್ಲರಿಗೂ ಬಾಗಿಲು ತೆರೆದಿದೆ
ಕಾರ್ಯಕರ್ತರಿದ್ದರೇ ಮಾತ್ರ ಮುಖಂಡರಾಗಿರಲು ಸಾಧ್ಯ. ಪಕ್ಷವನ್ನು ಸೇರಲು ಇಚ್ಛಿಸುವ ಎಲ್ಲರಿಗೂ ಪಕ್ಷದ ಬಾಗಿಲು ತೆರೆದಿದೆ. ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಈಗಿಂದಲೇ ತಯಾರಿ ನಡೆಸಬೇಕು. ಚುನಾವಣೆಗೆ ನಿರಂತರವಾಗಿ ಪಕ್ಷದಲ್ಲಿ ತೊಡಗಿಸಿಕೊಂಡವರನ್ನು ಗುರುತಿಸುವ ಕಾರ್ಯ ನಡೆಯಬೇಕಾಗಿದೆ ಎಂದರು.