ಸಾರಾಂಶ
ತಾಲೂಕಿನ ಗಡಿ ಭಾಗದಲ್ಲಿ ಕಾಡಂಚಿನ ಹೊಂದಿಕೊಂಡಂತೆ ಇರುವ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುವುದು
ಕನ್ನಡಪ್ರಭ ವಾರ್ತೆ ರಾವಂದೂರು
ತಾಲೂಕಿನ ಕಾಡು ಅಂಚಿನ ಗ್ರಾಮಗಳಿಗೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ರೇಷ್ಮೆ ಹಾಗೂ ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಹೇಳಿದರು.ಪಿರಿಯಾಪಟ್ಟಣ ತಾಲೂಕಿನ ಅಳಲೂರು ಮುದ್ದನಹಳ್ಳಿ ಗ್ರಾಮದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ತಾಲೂಕಿನ ಗಡಿ ಭಾಗದಲ್ಲಿ ಕಾಡಂಚಿನ ಹೊಂದಿಕೊಂಡಂತೆ ಇರುವ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುವುದು ಹಾಗೂ ಅವರಿಗೆ ಮೂಲಭೂತ ಸೌಕರ್ಯಗಳನ್ನು ನೀಡಲಾಗುತ್ತದೆ ಇಂತ ಗ್ರಾಮಗಳಿಗೆ ವಸತಿ ಕುಡಿಯುವ ನೀರು ವಿದ್ಯುತ್ ಸಂಪರ್ಕವನ್ನು ಕಲ್ಪಿಸಲಾಗುತ್ತದೆ ಇಲ್ಲಿನ ಜನರ ಸಮಸ್ಯೆಯನ್ನು ಆಲಿಸಿ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುವುದು ನನ್ನ ಅಧಿಕಾರ ಅವಧಿಯಲ್ಲಿ ತಾಲೂಕಿನ ಎಲ್ಲ ಗ್ರಾಮಗಳನ್ನು ಅತಂತ್ರವಾಗಿ, ಅಭಿವೃದ್ಧಿಯನ್ನು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.ಆಶ್ರಯ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಟಿ. ಸ್ವಾಮಿ,. ಗ್ರಾಪಂ ಅಧ್ಯಕ್ಷೆ ಪೂರ್ಣಿಮಾ, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಈಚೂರು ಲೋಕೇಶ್, ಕೆಪಿಸಿಸಿ ಸದಸ್ಯ ಅನಿಲ್ ಕುಮಾರ್, ಮುಖಂಡರಾದ ಬಿ.ಜೆ. ಬಸವರಾಜ್, ಲಕ್ಷ್ಮಣಗೌಡ, ಗೋವಿಂದ, ಜವರೇಗೌಡ, ಲೋಹಿತ್, ನಜೀರ್ ರಿಯಾಜ್, ಮಾದೇವ್, ತಹಸೀಲ್ದಾರ್ ನಿಸರ್ಗಪ್ರಿಯ ಕಾರ್ಯನಿರ್ವಣಾಧಿಕಾರಿ ಸುನಿಲ್ ಕುಮಾರ್, ಸೋಮಯ್ಯ , ವೆಂಕಟೇಶ್, ಮಲ್ಲಿಕಾರ್ಜುನ್, ಚಂದ್ರಶೇಖರ್, ಸುಗಂಧರಾಜ, ಮಹೇಂದ್ರ ಇದ್ದರು.