ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವ, ಶಾಸಕರರಿಂದ ಗುದ್ದಲಿ ಪೂಜೆ

| Published : Jan 08 2025, 12:16 AM IST

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವ, ಶಾಸಕರರಿಂದ ಗುದ್ದಲಿ ಪೂಜೆ
Share this Article
  • FB
  • TW
  • Linkdin
  • Email

ಸಾರಾಂಶ

ಈಗ ಅಭಿವೃದ್ಧಿಗೊಳ್ಳುತ್ತಿರುವ ರಸ್ತೆಯೂ ಪಾಂಡವಪುರಕ್ಕೆ 7 ಕಿ.ಮೀ. ಹಾಗೂ ಶ್ರೀರಂಗಪಟ್ಟಣಕ್ಕೆ 4 ಕಿ.ಮೀ.ಬರುತ್ತಿದೆ. ರಸ್ತೆಯೂ ಹಾಸನ, ಶಿವಮೊಗ್ಗ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದೆ. ರಸ್ತೆಯಲ್ಲಿ ಅಧಿಕ ವಾಹನಗಳು ಓಡಾಡುವುದರಿಂದ ಗುಣಮಟ್ಟದ ಕಾಮಗಾರಿ ಮೂಲಕ ಅಭಿವೃದ್ಧಿ ಪಡಿಸಬೇಕು.

ಕನ್ನಡಪ್ರಭ ವಾರ್ತೆ ಪಾಂಡವಪುರ

ತಾಲೂಕಿನ ಬನಘಟ್ಟದಿಂದ - ಶ್ರೀರಂಗಪಟ್ಟಣದ ಕಿರಂಗೂರು ಬಳಿ ಮೈಸೂರು- ಬೆಂಗಳೂರು ರಸ್ತೆಗೆ ಸಂಪರ್ಕಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಮಂಗಳವಾರ ಗುದ್ದಲಿ ಪೂಜೆ ನೆರವೇರಿಸಿದರು.

ತಾಲೂಕಿನ ರೈಲ್ವೆ ನಿಲ್ದಾಣದ ಬಳಿ ಇರುವ ಪಿಎಸ್‌ಎಸ್‌ಕೆ ಸಕ್ಕರೆ ಕಾರ್ಖಾನೆ ಮುಂಭಾಗ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಬಳಿಕ ಸಚಿವ ಎನ್.ಚಲುವರಾಯಸ್ವಾಮಿ ಮಾತನಾಡಿ, ಶ್ರೀರಂಗಪಟ್ಟಣದಿಂದ ಪಾಂಡವಪುರ, ನಾಗಮಂಗಲ ಮಾರ್ಗವಾಗಿ ಜೇವರ್ಗಿ ಸಂಪರ್ಕಿಸುವ ರಸ್ತೆಯನ್ನು ಬನಘಟ್ಟದಿಂದ ಕಿರಂಗೂರು ವರೆಗೆ ಅಂದಾಜು 42 ಕೋಟಿ ರು. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದರು.

ಈಗಾಗಲೇ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಪೂಜೆ ಸಲ್ಲಿಸಿದ್ದರು. ಈ ವೇಳೆ ನಾನು ವಿಧಾನಸಭೆ ಕಲಾಪದಲ್ಲಿ ಭಾಗವಹಿಸಿದ್ದರಿಂದ ಈಗ ಮತ್ತೆ ರಸ್ತೆ ಕಾಮಗಾರಿಗೆ ಪೂಜೆ ಸಲ್ಲಿಸಲಾಗಿದೆ ಎಂದರು.

ಈಗ ಅಭಿವೃದ್ಧಿಗೊಳ್ಳುತ್ತಿರುವ ರಸ್ತೆಯೂ ಪಾಂಡವಪುರಕ್ಕೆ 7 ಕಿ.ಮೀ. ಹಾಗೂ ಶ್ರೀರಂಗಪಟ್ಟಣಕ್ಕೆ 4 ಕಿ.ಮೀ.ಬರುತ್ತಿದೆ. ರಸ್ತೆಯೂ ಹಾಸನ, ಶಿವಮೊಗ್ಗ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದೆ. ರಸ್ತೆಯಲ್ಲಿ ಅಧಿಕ ವಾಹನಗಳು ಓಡಾಡುವುದರಿಂದ ಗುಣಮಟ್ಟದ ಕಾಮಗಾರಿ ಮೂಲಕ ಅಭಿವೃದ್ಧಿ ಪಡಿಸಬೇಕು ಎಂದರು.

ರೈಲ್ವೆ ನಿಲ್ದಾಣದಿಂದ ಚನ್ನರಾಯಪಟ್ಟಣಕ್ಕೆ ಸಂಪರ್ಕಿಸುವ ರಸ್ತೆ ಅಭಿವೃದ್ಧಿ ಪಡಿಸಬೇಕೆಂದು ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಮನವಿ ಮಾಡಿದ್ದಾರೆ. ಅನುದಾನ ನೀಡುವಂತೆ ಸಚಿವರಿಗೆ ಮನವಿ ಮಾಡಿದ್ದೇವೆ. ಜತೆಗೆ ಸಂಸದರಿಗೂ ಕೇಂದ್ರದ ರಾಷ್ಟ್ರೀಯ ಹೆದ್ದಾರಿ ಯೋಜನೆಯಡಿ ಅನುದಾನ ಕೊಡಿಸುವಂತೆ ಮಾಧ್ಯಮಗಳ ಮೂಲಕ ಮನವಿ ಮಾಡಿದ್ದೇನೆ ಎಂದರು.

ಹಿಂದಿನ ಸರ್ಕಾರ ಪಿಎಸ್‌ಎಸ್‌ಕೆ ಸಕ್ಕರೆ ಕಾರ್ಖಾನೆಯೂ ಖಾಸಗಿ ಕಂಪನಿಗೆ ಗುತ್ತಿಗೆ ನೀಡಿದೆ, ರೈತರಿಗೆ ಅನುಕೂಲವಾಗುವಂತೆ ಕಾರ್ಖಾನೆ ಕೆಲಸ ಮಾಡುತ್ತಿದೆ. ಸರಿಯಾಗಿ ರೈತರಿಗೆ ಪೇಮೆಂಟ್ ಮಾಡುತ್ತಿದೆ. ಕಬ್ಬು ನುರಿಸುವ ವಿಚಾರ, ಪೇಮೆಂಟ್ ಕೊಡುವ ವಿಚಾರವಾಗಿ ರೈತರಿಗೆ ತೊಂದರೆಯಾದರೆ ಶಾಸಕರು ನಮ್ಮ ಗಮನಕ್ಕೆ ತಂದರೆ ಕ್ರಮವಹಿಸಲಾಗುವುದು ಎಂದರು.

ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಮಾತನಾಡಿ, ತಾಲೂಕಿನ ಬನಘಟ್ಟ-ಕಿರಂಗೂರು ವರೆಗಿನ ರಸ್ತೆಯಲ್ಲಿ ಸಾಕಷ್ಟು ವಾಹನಗಳ ಸಂಖ್ಯೆಯ ಹೆಚ್ಚಾಗಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿತ್ತು. ರಸ್ತೆಯನ್ನು ಅಭಿವೃದ್ಧಿಪಡಿಸುವ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಸಾರ್ವಜನಿಕರು ಒಗ್ಗಟ್ಟಿನಿಂದ ರಸ್ತೆಯನ್ನು ಅಭಿವೃದ್ಧಿ ಪಡಿಸಬೇಕು ಎಂದರು.

ಈ ವೇಳೆ ಕೆಪಿಸಿಸಿ ಪ್ರಧಾನ ಕಾರ್‍ಯದರ್ಶಿ ಎಚ್.ತ್ಯಾಗರಾಜು, ಮನ್ಮುಲ್ ಅಧ್ಯಕ್ಷ ಬೋರೇಗೌಡ, ನಿರ್ದೇಶಕ ಕಾಡೇನಹಳ್ಳಿ ರಾಮಚಂದ್ರು, ಮುಖಂಡ ಸಂದೇಶ್ ಸೇರಿದಂತೆ ಹಲವು ಮುಖಂಡರು, ಕಾರ್‍ಯಕರ್ತರು ಭಾಗವಹಿಸಿದ್ದರು.