ಕನ್ನಡಪ್ರಭ ವಾರ್ತೆ ಮೈಸೂರುಮೈಸೂರು ತಾಲೂಕಿನ ಗುಡುಮಾದನಹಳ್ಳಿಯ ಹಸಿರು ವಲಯದಲ್ಲಿ ಮತ್ತು ಕೊಳಚೆ ನೀರಿನ ಜಾಗದಲ್ಲಿ ನಿಮ್ಹಾನ್ಸ್ ಆಸ್ಪತ್ರೆಯನ್ನು ಕಟ್ಟುವುದು ಬೇಡ ಹಾಗೂ ಆ ಜಮೀನಿನಲ್ಲಿ ಉಳುಮೆ ಮಾಡುತ್ತಿರುವ ರೈತರನ್ನು ಒಕ್ಕಲಿಬಿಸುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದವರು ಸೋಮವಾರ ಪ್ರತಿಭಟಿಸಿದರು.ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣಕ್ಕೆ ಗುರುತಿಸುವ ಸ್ಥಳದಲ್ಲಿ ನಡೆದ ಪ್ರತಿಭಟನೆಗೆ ಪರಿಸರಕ್ಕಾಗಿ ನಾವು, ಕನ್ನಡ ಬಳಗ, ಕೆಆರ್ ಎಸ್ ಪಕ್ಷ ಹಾಗೂ ಇತರೆ ಪ್ರಗತಿಪರ ಸಂಘಟನೆಗಳು ಬೆಂಬಲವನ್ನು ಸೂಚಿಸಿದರು. ಇದೇ ವೇಳೆ ಗ್ರಾಮದ ಮಹಿಳೆಯರು ಹಾಗೂ ಹೋರಾಟಗಾರರು ಪೊರಕೆ ಪ್ರದರ್ಶಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಲ್ಲಿಗೆ ಭೇಟಿ ನೀಡಿ, ನಾವು ನಿಮ್ಹಾನ್ಸ್ ಆಸ್ಪತ್ರೆ ಕಟ್ಟುತ್ತಿದ್ದೇವೆ ಸಹಕಾರ ಕೊಡಿ ಎಂದು ಕೇಳಿಲ್ಲ. 80 ವರ್ಷದಿಂದ ಈ ಭೂಮಿಯಲ್ಲಿ ಕೃಷಿ ಮಾಡಿದವರಿಗೆ ಮಾಹಿತಿಯೇ ನೀಡದೇ, ಎಸಿ ಕೊಠಡಿಯಲ್ಲಿ ಕುಳಿತು ಯೋಜನೆ ರೂಪಿಸಿದ್ದಾರೆ ಎಂದು ಅವರು ಕಿಡಿಕಾರಿದರು.ಕಳೆದ 220 ದಿನದಿಂದ ನಾವು ಹೋರಾಟ ಮಾಡುತ್ತಿದ್ದೇವೆ. ನಮ್ಮ ತಾತ ಮುತ್ತಾತರ ಕಾಲದಿಂದಲೂ ಜಮೀನು ಉಳುಮೆ ಮಾಡಿಕೊಂಡು ಜೀವನ ನಡೆಸುತ್ತಿದ್ದೇವೆ. ಸರ್ಕಾರಕ್ಕೆ ತೆರಿಗೆ ಕಟ್ಟಿದ್ದೇವೆ. ಫಲವತ್ತಾದ ಜಮೀನಿನಲ್ಲಿ ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣ ಮಾಡೋದು ಬೇಡ. ಬೇಕಿದ್ದರೆ ಬರಡು ಭೂಮಿಯಲ್ಲಿ ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣ ಮಾಡಲಿ ಎಂದು ಅವರು ಆಗ್ರಹಿಸಿದರು.ಕಾಮಗಾರಿಯನ್ನು ಮಂಗಳವಾರದಿಂದ ಆರಂಭಿಸುತ್ತಾರೆ ಎಂಬ ಮಾಹಿತಿ ಇದೆ. ನಮ್ಮ ಜೀವ ಹೋದರೂ ಪರವಾಗಿಲ್ಲ. ಹೋಗಿ ಅಡ್ಡಡ್ಡ ಮಲಗುತ್ತೇವೆ. ಯಾರೂ ದೊಡ್ಡ ಭೂಮಿ ಮಾಡಿಕೊಂಡವರಿಲ್ಲ. ಗುಂಟೆ ಲೆಕ್ಕದಲ್ಲಿ ಕೃಷಿ ಮಾಡುತ್ತಿದ್ದೇವೆ. ಇದನ್ನೂ ಕಿತ್ತುಕೊಳ್ಳಲು ಬಂದರೆ ಸುಮ್ಮನೆ ಕೂರಲು ಸಾಧ್ಯವೇ ಎಂದು ಅವರು ಪ್ರಶ್ನಿಸಿದರು.ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ. ಮರಂಕಯ್ಯ, ಮುಖಂಡರಾದ ಮಂಡಕಳ್ಳಿ ಮಹೇಶ್, ಪರಶುರಾಮ ಗೌಡ, ಭಾನು ಮೋಹನ್, ನಾಗರಾಜು, ಪರಮೇಶ್, ಕೃಷ್ಣ ಮೊದಲಾದವರು ಇದ್ದರು.-------------------eom/mys/shekar/
ಗುಡುಮಾದನಹಳ್ಳಿಯಲ್ಲಿ ನಿಮ್ಹಾನ್ಸ್ ಆಸ್ಪತ್ರೆ ಬೇಡ
ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣಕ್ಕೆ ಗುರುತಿಸುವ ಸ್ಥಳದಲ್ಲಿ ನಡೆದ ಪ್ರತಿಭಟನೆಗೆ ಪರಿಸರಕ್ಕಾಗಿ ನಾವು
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.