ಸೇವೆ ಕಾಯಮಾತಿಗೆ ಅತಿಥಿ ಉಪನ್ಯಾಸಕರ ಆಗ್ರಹ

| Published : Dec 19 2023, 01:45 AM IST

ಸಾರಾಂಶ

ಸೇವಾ ಕಾಯಮಾತಿ ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಇಲ್ಲಿನ ಮಲ್ಲಿಗಾರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎದುರು ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಸೋಮವಾರ ಶಾಸಕ ಶ್ರೀನಿವಾಸ ಮಾನೆ ಭೇಟಿ ನೀಡಿ ಮನವಿ ಸ್ವೀಕರಿಸಿದರು.

ಕನ್ನಡಪ್ರಭ ವಾರ್ತೆ ಹಾನಗಲ್ಲ

ಸೇವಾ ಕಾಯಮಾತಿ ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಇಲ್ಲಿನ ಮಲ್ಲಿಗಾರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎದುರು ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಸೋಮವಾರ ಶಾಸಕ ಶ್ರೀನಿವಾಸ ಮಾನೆ ಭೇಟಿ ನೀಡಿ ಮನವಿ ಸ್ವೀಕರಿಸಿದರು.

ತಮ್ಮ ಸೇವೆಯನ್ನು ಕಾಯಂಗೊಳಿಸುವಂತೆ ಒತ್ತಾಯಿಸಿ ಕಳೆದ ನ. ೨೩ ರಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ. ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದಾರೆ. ಕಡಿಮೆ ಗೌರವಧನಕ್ಕೆ ಸೇವೆ ಸಲ್ಲಿಸುವ ಅತಿಥಿ ಉಪನ್ಯಾಸಕರ ಕುಟುಂಬಗಳು ಆರ್ಥಿಕ ಸಂಕಷ್ಟದಲ್ಲಿದೆ. ಸಮಸ್ಯೆಗಳ ಕುರಿತು ಸರ್ಕಾರದ ಗಮನ ಸೆಳೆಯುವಂತೆ ಈ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರು ಮನವಿ ಮಾಡಿದರು.

ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಪ್ರತಿಭಟನೆಯ ಕುರಿತು ಸರ್ಕಾರದ ಗಮನ ಸೆಳೆಯಲಾಗಿದೆ. ಈ ಕುರಿತು ಉನ್ನತ ಶಿಕ್ಷಣ ಸಚಿವರ ಗಮನ ಸೆಳೆಯುವುದಾಗಿ ಶಾಸಕ ಶ್ರೀನಿವಾಸ ಮಾನೆ ಭರವಸೆ ನೀಡಿದರು.

ಅತಿಥಿ ಉಪನ್ಯಾಸಕರಾದ ವೀರಪ್ಪ ಬಡಿಗೇರ, ಬಸನಗೌಡ ಪಾಟೀಲ, ಗಿರೀಶ ಮುದಕಣ್ಣನವರ, ತಿಪ್ಪಣ್ಣ ಬಾರಕೇರ, ಜಗದೀಶ ಜವಳಿ, ನಾಗರಾಜ ಹಾವನೂರ, ನಾಗರಾಜ ದೊಡ್ಡಮನಿ, ವಿನಾಯಕ ಕುಲಕರ್ಣಿ, ಚಂದ್ರಶೇಖರ ತಳವಂದ, ಮಂಜುನಾಥ ಬಾರ್ಕಿ, ರಾಧಾ ಎನ್., ಸುಧಾ ಡಿ.ಬಿ., ಪೂಜಾ ಸಾವಂತ ಈ ಸಂದರ್ಭದಲ್ಲಿದ್ದರು.