ಬರ ಪರಿಸ್ಥಿತಿ ವ್ಯವಸ್ಥಿತ ನಿರ್ವಹಣೆಗೆ ಮಾರ್ಗಸೂಚಿ: ಸಲ್ಮಾ

| Published : Oct 31 2023, 01:15 AM IST

ಬರ ಪರಿಸ್ಥಿತಿ ವ್ಯವಸ್ಥಿತ ನಿರ್ವಹಣೆಗೆ ಮಾರ್ಗಸೂಚಿ: ಸಲ್ಮಾ
Share this Article
  • FB
  • TW
  • Linkdin
  • Email

ಸಾರಾಂಶ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳನ್ನು ಬರಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಲಾಗಿದ್ದು, ಮುಖ್ಯವಾಗಿ ಕುಡಿಯುವ ನೀರಿನ ಸಮಸ್ಯೆ, ಜಾನುವಾರುಗಳಿಗೆ ಮೇವಿನ ಅಭಾವವಾಗದಂತೆ ನೋಡಿಕೊಂಡು ಬರ ಪರಿಸ್ಥಿತಿಯನ್ನು ಸಮಗ್ರವಾಗಿ ಎದುರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಕಾರ್ಯದರ್ಶಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ. ಫಾಹಿಂ ಅಧಿಕಾರಿಗಳಿಗೆ ಸೂಚಿಸಿದರು.
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳನ್ನು ಬರಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಲಾಗಿದ್ದು, ಮುಖ್ಯವಾಗಿ ಕುಡಿಯುವ ನೀರಿನ ಸಮಸ್ಯೆ, ಜಾನುವಾರುಗಳಿಗೆ ಮೇವಿನ ಅಭಾವವಾಗದಂತೆ ನೋಡಿಕೊಂಡು ಬರ ಪರಿಸ್ಥಿತಿಯನ್ನು ಸಮಗ್ರವಾಗಿ ಎದುರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಕಾರ್ಯದರ್ಶಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ. ಫಾಹಿಂ ಅಧಿಕಾರಿಗಳಿಗೆ ಸೂಚಿಸಿದರು. ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಬರ ಪರಿಸ್ಥಿತಿಯ ಬಗ್ಗೆ ಚರ್ಚಿಸಿ ಪ್ರಸಕ್ತ ಸಾಲಿನಲ್ಲಿ ಜನವರಿ 1ರಿಂದ ಅಕ್ಟೋಬರ್ 26ರವರೆಗೆ 716 ಮಿ.ಮೀ. ವಾಡಿಕೆ ಮಳೆಗೆ 598 ಮಿ.ಮೀ. ಮಳೆಯಾಗಿದ್ದು ಶೇಕಡ 17 ರಷ್ಟು ಮಳೆ ಕೊರತೆಯಾಗಿದೆ, ಜಿಲ್ಲೆಯಲ್ಲಿ ರಾಗಿ ಪ್ರಮುಖ ಬೆಳೆಯಾಗಿದ್ದು ತನೆ ಬೆಳವಣಿಗೆ ಹಂತದಲ್ಲಿದೆ. ಮಳೆ ಕೊರತೆಯಿಂದ ಇಳುವರಿ ಕಡಿಮೆಯಾಗಿದೆ. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕುಡಿಯುವ ನೀರು ಸಮಸ್ಯೆ ಆಗದಂತೆ ಕ್ರಮವಹಿಸಿ ಅವಶ್ಯವಿದ್ದಲ್ಲಿ ಖಾಸಗಿಯಾಗಿ ಕುಡಿಯುವ ನೀರು ಪೂರೈಕೆ ವ್ಯವಸ್ಥೆ ಮಾಡಿಕೊಳ್ಳುವಂತೆ ತಿಳಿಸಿದರು. ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಮಾದಕ ವಸ್ತುಗಳ ಮಾರಾಟ ಸೇರಿದಂತೆ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಹೆಚ್ಚಿನ ಕ್ರಮ ವಹಿಸಿ, ಮಾಲಿನ್ಯಕಾರಕ ಪಟಾಕಿ ಮಾರಾಟ, ಸಾಗಾಟ ಅಂಗಡಿಗಳ ಮೇಲೆ ದಾಳಿ ನಡೆಸಿ, ಅವರ ವಿರುದ್ಧ ಕ್ರಮ ವಹಿಸಿ ಹಸಿರು ಪಟಾಕಿ ಮಾರಾಟಕ್ಕೆ ಅನುಮತಿ ನೀಡಿ ಎಂದು ಪೋಲಿಸ್ ಅಧಿಕಾರಿಗಳಿಗೆ ಸೂಚಿಸಿದರು. ಜಾನುವಾರುಗಳಿಗೆ ಆಹಾರ ಮೇವು ಕೊರತೆ ಉಂಟಾಗದಂತೆ ಕ್ರಮವಹಿಸಿ, ಮೇವು ಸಂಗ್ರಹ ಕೇಂದ್ರಗಳನ್ನು ತೆರೆದು ರೈತರಿಗೆ ಮಾಹಿತಿ ನೀಡಬೇಕು. ಅನ್ನಭಾಗ್ಯಕ್ಕೆ 2.31 ಲಕ್ಷ ಫಲಾನುಭವಿಗಳು: ಅನ್ನ ಭಾಗ್ಯ ಯೋಜನೆ ಅಡಿ 231009 ಫಲಾನುಭವಿಗಳಿದ್ದು, ಅದರಲ್ಲಿ 1,91,976 ಫಲಾನುಭವಿಗಳಿಗೆ ಡಿಬಿಟಿ ಮೂಲಕ ನೇರವಾಗಿ 11,05,62,390/- ಕೋಟಿ ರು. ಸೆಪ್ಟೆಂಬರ್ ಮಾಹೆಯಲ್ಲಿ ಜಮೆಯಾಗಿದೆ. ಉಳಿದಂತೆ ವಿವಿಧ ಕಾರಣಗಳಿಂದ ಹಣ ಜಮೆ ಆಗಿರದ ಫಲಾನುಭವಿಗಳಿಗೆ ರೇಷನ್ ಕಾರ್ಡ್, ಆಧಾರ್ ಕಾರ್ಡ್, ಬ್ಯಾಂಕ್ ಖಾತೆಯಲ್ಲಿ ಇರುವ ಸಮಸ್ಯೆಗಳ ಬಗ್ಗೆ ತಿಳಿಸಿ. ಸಮಸ್ಯೆ ಬಗೆಹರಿಸಿಕೊಂಡು ಮುಂದಿನ ಮಾಹೆಯೊಳಗೆ ಎಲ್ಲಾ ಅರ್ಹ ಫಲಾನುಭವಿಗಳಿಗೆ ಡಿ. ಬಿ. ಟಿ ಮೂಲಕ ಜಮೆಯಾಗಲು ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು. ಗೃಹಲಕ್ಷ್ಮಿ ಯೋಜನೆಗೆ 1.96 ಲಕ್ಷ ನೊಂದಣಿ: ಗೃಹಲಕ್ಷ್ಮಿ ಯೋಜನೆ ಅಡಿ ಜಿಲ್ಲೆಯಲ್ಲಿ ಇಲ್ಲಿಯವರೆಗೆ 1,96,662 ಫಲಾನುಭವಿಗಳು ನೋಂದಣಿ ಆಗಿರುತ್ತಾರೆ. ಬಾಕಿ ಇರುವ ಫಲಾನುಭವಿಗಳಿಗೆ ಗ್ರಾಮಮಟ್ಟದಲ್ಲಿ ಪ್ರಚಾರ ಮಾಡಿ, ಜಾಗೃತಿ ಮೂಡಿಸಿ, ಮಾಹಿತಿ ನೀಡಿ ನೋಂದಾಯಿಸಿಕೊಳ್ಳಲು ಕ್ರಮವಹಿಸಿ ಎಂದರಲ್ಲದೆ ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸುವ ಕೇಂದ್ರಗಳಿಗೆ ಭೇಟಿ ನೀಡಿ ನೋಂದಾವಣಿ ಪ್ರಕ್ರಿಯೆಯನ್ನು ಪರಿಶೀಲಿಸಿ ಎಂದು ಹೇಳಿದರು. ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವಿದ್ಯಾರ್ಥಿನಿಲಯಗಳಿಗೆ ನಿವೇಶನ ಹಂಚಲು ಕ್ರಮ ವಹಿಸಬೇಕು. ಕೃಷಿ, ತೋಟಗಾರಿಕೆ ಇಲಾಖೆಯ ಬೆಳೆಗಳಿಗೆ ಸಂಬಂಧಿಸಿದಂತೆ ಬಿತ್ತನೆ ಬೀಜ, ರಸಗೊಬ್ಬರ, ಔಷಧಿಗಳ ಕೊರತೆಯಾಗದಂತೆ ನೋಡಿಕೊಳ್ಳಿ ಎಂದರಲ್ಲದೆ ರೈತರಿಗೆ ಸೂಕ್ತ ಮಾರ್ಗದರ್ಶನ, ಸಲಹೆ ನೀಡಿ ಎಂದರು. ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ: ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರು ಪೂರೈಕೆಯ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಎಂದರು.ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಪ್ರಗತಿ ಪರಿಶೀಲನೆ ನಡೆಸಿ ಬಾಕಿ ಇರುವ ರಸ್ತೆ , ಸೇತುವೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಎಂದರು. ನರೇಗಾ ಯೋಜನೆಯಡಿ ಇಲಾಖೆಗಳಲ್ಲಿ ಬಾಕಿ ಇರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ. ಶೇಕಡಾವಾರು ಪ್ರಗತಿ ಕಡಿಮೆ ಸಾಧಿಸಿರುವ ಇಲಾಖೆಗಳಿಗೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸೂಚಿಸಿ ವರದಿ ನೀಡಿ ಎಂದರು. 2024-25 ನೇ ಸಾಲಿನ ಮಹಾತ್ಮ ಗಾಂಧಿ ನರೇಗಾ ಯೋಜನೆಯಲ್ಲಿ ಉದ್ಯೋಗ ಖಾತರಿ ನಡೆ ಸುಸ್ಥಿರತೆಯಡೆಗೆ ಎಂಬ ಕ್ರಿಯಾ ಯೋಜನೆ ತಯಾರಿಸಲು ಗ್ರಾಮ ಪಂಚಾಯಿತಿಗಳಿಗೆ ಐಇಸಿ ಕಾರ್ಯಕ್ರಮದ ನರೇಗಾ ಭಿತ್ತಿ ಪತ್ರಗಳ ಬಿಡುಗಡೆಗೊಳಿಸಿದರು. ನಂತರ ದೇವನಹಳ್ಳಿ ತಾಲೂಕು ಸರ್ಕಾರಿ ಆಸ್ಪತ್ರೆ ಭೇಟಿ ನೀಡಿ ಔಷಧಿಗಳ ಕೊಠಡಿಯಲ್ಲಿ ಔಷಧಿಗಳು ಪರಿಶೀಲಿಸಿದರು. ಮಹಿಳಾ ಮತ್ತು ಮಕ್ಕಳ ಕೊಠಡಿಯನ್ನು ಪರಿಶೀಲಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಶಿವಶಂಕರ, ಜಿಪಂ ಸಿಇಒ ಡಾ.ಅನುರಾಧ, ಅಪರ ಜಿಲ್ಲಾಧಿಕಾರಿ ಅಮರೇಶ್, ಜಿಪಂ ಉಪಕಾರ್ಯದರ್ಶಿ ರಮೇಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. 30ಕೆಡಿಬಿಪಿ1- ಬೆಂ.ಗ್ರಾ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನೇತೃತ್ವದಲ್ಲಿ ಬರ ಪರಿಸ್ಥಿತಿ ಅವಲೋಕನ ಸಭೆ ನಡೆಯಿತು.