ಸಾರಾಂಶ
ಗುಂಪ್ಲುಪೇಟೆ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಸೆ.4 ರ ಬುಧವಾರ ನಡೆಯಲಿದ್ದು, ಕಾಂಗ್ರೆಸ್‌ನ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಸ್ಪರ್ಧಿಸಲು ಹಿಂದೇಟು ಹಾಕಿರುವ ಕಾರಣ ಅಧ್ಯಕ್ಷ ಸ್ಥಾನ ಅವಿರೋಧ ಆಯ್ಕೆಯಾಗುವ ಸಾಧ್ಯತೆ ಹೆಚ್ಚಿದೆ.
ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ
ಇಲ್ಲಿನ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಸೆ.4 ರ ಬುಧವಾರ ನಡೆಯಲಿದ್ದು, ಕಾಂಗ್ರೆಸ್‌ನ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಸ್ಪರ್ಧಿಸಲು ಹಿಂದೇಟು ಹಾಕಿರುವ ಕಾರಣ ಅಧ್ಯಕ್ಷ ಸ್ಥಾನ ಅವಿರೋಧ ಆಯ್ಕೆಯಾಗುವ ಸಾಧ್ಯತೆ ಹೆಚ್ಚಿದೆ.? ಆದರೆ ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಚಿಂತನೆ ನಡೆದಿದ್ದು, ಉಪಾಧ್ಯಕ್ಷ ಸ್ಥಾನಕ್ಕೆ ಮಾತ್ರ ಚುನಾವಣೆ ನಡೆಯಲಿದೆ.ಕಾರಣವೇನು:?ಈಗಾಗಲೇ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಪಿ.ಶಶಿಧರ್ ದೀಪುಗೆ ಹೆಸರು ಘೋಷಿಸಿದೆ. ಜೊತೆಗೆ ವಿಪ್ ಕೂಡ ಜಾರಿಯಾಗಿರುವ ಕಾರಣ ಮತ್ತೊಂದು ವಿಪ್ ನೀಡಿದರೆ ಪಕ್ಷಾಂತರ ಮಾಡಿದ ಸದಸ್ಯರ ಸದಸ್ಯತ್ವ ಅನರ್ಹ ಗೊಳಿಸಲು ತಾಂತ್ರಿಕ ಸಮಸ್ಯೆ ಎದುರಾಗುತ್ತದೆ ಎಂದು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿಲ್ಲ ಎನ್ನಲಾಗಿದೆ.
ಆದರೆ ಪುರಸಭೆ ಬಿಜೆಪಿ ಸದಸ್ಯರಲ್ಲಿ ವಿಪ್ ಉಲ್ಲಂಘಿಸಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಚಲಾಯಿಸಲಿದ್ದಾರೆ. ಆ ಕಾರಣಕ್ಕಾಗಿ ಉಪಾಧ್ಯಕ್ಷ ಸ್ಥಾನಕ್ಕೆ ಎಸ್.ಕುಮಾರ್ ಸ್ಪರ್ಧಿಸಲಿದ್ದು, ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಬಂಡಾಯ ಎದ್ದು ಬಿಜೆಪಿ ಸದಸ್ಯರು ಮತ ಚಲಾಯಿಸಿದರೆ ಸದಸ್ಯತ್ವ ಸ್ಥಾನ ಅನರ್ಹಗೊಳಿಸಲು ಸಾಕ್ಷಿ ಸಿಗಲಿದೆ ಎಂದು ಬಿಜೆಪಿ ವಾದ.ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಬಂಡೆದ್ದ ಬಿಜೆಪಿಗರ ಪಾಲು?
ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಸೆ.4ರ ಬುಧವಾರ ನಡೆಯಲಿದ್ದು, ಬಿಜೆಪಿಯಿಂದ ಬಂಡಾಯ ಎದ್ದಿರುವ ಬಿಜೆಪಿ ಸದಸ್ಯರಿಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಸಿಗಲಿದೆ. ಬಿಜೆಪಿಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಸಿಗಲಿಲ್ಲ ಎಂದು ಬಂಡಾಯ ಸಾರಿರುವ ಬಿಜೆಪಿ ಸದಸ್ಯರಾದ ಕಿರಣ್ ಗೌಡಗೆ ಅಧ್ಯಕ್ಷ, ಹೀನಾ ಕೌಸರ್‌ಗೆ ಉಪಾಧ್ಯಕ್ಷ ಸ್ಥಾನ ನೀಡುವುದಾಗಿ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಘೋಷಿಸಿರುವ ಹಿನ್ನೆಲೆ ಕಿರಣ್ ಗೌಡ, ಹೀನಾ ಕೌಸರ್‌ಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಸಿಗಲಿದೆ.ಕಾಂಗ್ರೆಸ್ ಸದಸ್ಯ ಗೌಡ್ರ ಮಧು, ಪಕ್ಷೇತರ ಸದಸ್ಯ ಪಿ.ಶಶಿಧರ್ ದೀಪು ಕೂಡ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಆದರೆ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಇರದ ಕಾರಣ ಬಿಜೆಪಿಯಿಂದ ಕಾಂಗ್ರೆಸ್ ಬಂದ ಬಿಜೆಪಿ ಸದಸ್ಯರಿಗೆ ಬಂಪರ್ ಸಿಕ್ಕಿದಂತಾಗಿದೆ.