ಧಾರವಾಡ ಜಿಲ್ಲೆಗೆ ಗುಂಜನ್‌ ಆರ್ಯ ನೂತನ ಎಸ್ಪಿ

| Published : Jul 15 2025, 11:45 PM IST

ಧಾರವಾಡ ಜಿಲ್ಲೆಗೆ ಗುಂಜನ್‌ ಆರ್ಯ ನೂತನ ಎಸ್ಪಿ
Share this Article
  • FB
  • TW
  • Linkdin
  • Email

ಸಾರಾಂಶ

ಗುಂಜನ್ ಆರ್ಯ ಮೂಲತಃ ಮಧ್ಯಪ್ರದೇಶ ರಾಜ್ಯದವವರು. 2018 ರ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ. ಈ ಮೊದಲು ಅವರು ರಾಯಚೂರ ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಚಿಕ್ಕಮಂಗಳೂರು ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

ಧಾರವಾಡ: ಗುಪ್ತಚರ ವಿಭಾಗದಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಗುಂಜನ್ ಆರ್ಯ ಅವರನ್ನು ವರ್ಗಾವಣೆ ಮಾಡಿ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಆಗಿ ನೇಮಿಸಲಾಗಿದೆ. ಪ್ರಸ್ತುತ ಎಸ್‌ಪಿ ಡಾ. ಗೋಪಾಲ್ ಬ್ಯಾಕೋಡ್ ಅವರನ್ನು ಬೆಂಗಳೂರಿನಲ್ಲಿರುವ ವಿಧಿ ವಿಜ್ಞಾನ ಪ್ರಯೋಗಾಲಯದ ಜಂಟಿ ನಿರ್ದೇಶಕರಾಗಿ ವರ್ಗಾಯಿಸಲಾಗಿದೆ.

2018ರ ಬ್ಯಾಚ್ ಐಪಿಎಸ್ ಅಧಿಕಾರಿ ಗುಂಜನ್ ಆರ್ಯ ಜಿಲ್ಲಾ ಎಸ್ಪಿಯಾಗಿ ಮಂಗಳವಾರ ಸಂಜೆ ಅಧಿಕಾರ ಸ್ವೀಕರಿಸಿದರು. ಗುಂಜನ್ ಆರ್ಯ ಮೂಲತಃ ಮಧ್ಯಪ್ರದೇಶ ರಾಜ್ಯದವವರು. 2018 ರ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ. ಈ ಮೊದಲು ಅವರು ರಾಯಚೂರ ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಚಿಕ್ಕಮಂಗಳೂರು ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಧಾರವಾಡ ಎಸ್.ಪಿ. ಆಗಿ ನೇಮಕವಾಗುವ ಮೊದಲು ಅವರು ಬೆಂಗಳೂರಿನಲ್ಲಿ ರಾಜ್ಯ ಗುಪ್ತಚರ ವಿಭಾಗದಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆಯಲ್ಲಿದ್ದರು.

ಬೆಂಗಳೂರಿಗೆ ವರ್ಗಾವಣೆ ಆಗಿರುವ ಡಾ. ಗೋಪಾಲ ಬ್ಯಾಕೋಡ್ ಅವರಿಗೆ ಇಂದು ಮಂಗಳವಾರ ಎಸ್.ಪಿ. ಕಚೇರಿಯಲ್ಲಿ ಜಿಲ್ಲೆಯ ಎಲ್ಲ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಬಿಳ್ಕೋಡುಗೆ ನೀಡಿ, ನೂತನ ಎಸ್.ಪಿ. ಗುಂಜನ್ ಆರ್ಯ ಅವರನ್ನು ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಬರಮನಿ, ಉಪ ಪೊಲೀಸ್ ವರಿಷ್ಠಾಧಿಕಾರಿ ವಿನೋದ ಮುಕ್ತೆದಾರ, ಸಿಇಎನ್ ಡಿವೈಎಸ್‌ಪಿ ಶಿವಾನಂದ ಕಟಗಿ ಇದ್ದರು.

----

15ಡಿಡಬ್ಲೂಡಿ10

ಈ ಮೊದಲಿನ ಎಸ್ಪಿ ಗೋಪಾಲ ಬ್ಯಾಕೋಡ ಅವರಿಂದ ನೂತನ ಎಸ್ಪಿ ಗುಂಜನ್‌ ಆರ್ಯ ಅಧಿಕಾರ ಸ್ವೀಕರಿಸಿದರು.