ಕೊಲ್ಹಾರ: ಪೆಟ್ರೋಲ್ ಪಂಪ್ ನಲ್ಲಿ ಮಾಲೀಕ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಗಾಯಗೊಂಡ ಘಟನೆ ಕೊಲ್ಹಾರ ಪೊಲೀಸ್ ಠಾಣೆ ವ್ಯಾಪ್ತಿಯ ಮಟ್ಟಿಹಾಳ ಕ್ರಾಸ್ ನಲ್ಲಿ ಭಾನುವಾರ ನಡೆದಿದ್ದು, ಗುಂಡಿನ ದಾಳಿ ನಡೆಸಿದ ಬಂಕ್ ಮಾಲೀಕನನ್ನು ಕೊಲ್ಹಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೊಲ್ಹಾರ ತಾಲೂಕಿನ ಮಟ್ಟಿಹಾಳ ಗ್ರಾಮದ ಸುಖದೇವ ಚಲವಾದಿ (30) ಹಾಗೂ ರಾಜು ಚಲವಾದಿ (40) ಗಾಯಗೊಂಡವರು. ಪೆಟ್ರೋಲ್ ಬಂಕ್ ಮಾಲೀಕ ಸಂಗಪ್ಪ ಪೂಜಾರಿ (48) ಬಂಧಿತ ಆರೋಪಿ.ನಡೆದಿದ್ದೇನು?:
ಸುಖದೇವ ಚಲವಾದಿ ಎಂಬಾತ ಸ್ನೇಹಿತ ರಾಜು ಚಲವಾದಿ ಜೊತೆಗೆ ಪೆಟ್ರೋಲ್ ಬಂಕ್‌ಗೆ ತೆರಳಿದ್ದರು. ಈ ವೇಳೆ ಪೆಟ್ರೋಲ್ ಬಂಕ್ ಮಾಲೀಕ ಸಂಗಪ್ಪ ಪೂಜಾರಿ (48) ಹಾಗೂ ಇಬ್ಬರ ನಡುವೆ ಯಾವುದೋ ವಿಚಾರಕ್ಕೆ ವಾಗ್ವಾದ ನಡೆದಿದ್ದು, ಸಂಗಪ್ಪ ಪೂಜಾರಿ ಪರವಾನಗಿ ಹೊಂದಿರುವ ತನ್ನ ಪಿಸ್ತೂಲ್‌ನಿಂದ ಗುಂಡು ಹಾರಿಸಿದ್ದಾನೆ. ಸುಖದೇವಗೆ ಗುಂಡೇಟಿನಿಂದ ತೀವ್ರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ವಿಜಯಪುರ ಬಿಎಲ್ಡಿಇ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜು ಚಲವಾದಿಗೂ ಗಾಯಗಳಾದ ಬಗ್ಗೆ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ದಾಳಿಗೆ ನಿಖರ ತಿಳಿದುಬಂದಿಲ್ಲ.ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿ ಸಂಗಪ್ಪ ಪೂಜಾರಿಯನ್ನು ವಶಕ್ಕೆ ಪಡೆದಿದ್ದಾರೆ. ಘಟನಾ ಸ್ಥಳಕ್ಕೆ ಎಸ್.ಪಿ. ಲಕ್ಷ್ಮಣ ನಿಂಬರಗಿ, ಡಿವಾಯ್ಎಸ್ ಪಿ ಚಂದ್ರಕಾಂತ ನಂದರೆಡ್ಡಿ, ಸಿಪಿಐ ಶರಣಗೌಡ ಗೌಡರ, ಪಿಎಸ್ಐ ಅಶೋಕ ನಾಯಕ ಹಾಗೂ ಎಸ್‌ಒಸಿಒ ತಂಡ ಪರಿಶೀಲನೆ ನಡೆಸಿ, ಸಾಕ್ಷ್ಯಾಧಾರ ಸಂಗ್ರಹಿಸಿದ್ದಾರೆ.
ಗುಂಡಿನ ದಾಳಿಗೆ ನಿಖರ ಕಾರಣವೇನು ಹಾಗೂ ಘಟನೆಯ ವೇಳೆ ನಿಖರವಾಗಿ ಏನಾಯಿತು ಎಂಬುದರ ಕುರಿತು ಪೊಲೀಸರ ತನಿಖೆಯಿಂದಷ್ಟೇ ಗೊತ್ತಾಗಲಿದೆ. ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.