ಗುರು ಈ ಜಗತ್ತಿನ ಅದ್ಭುತ ಶಕ್ತಿ: ಕೊಳಮಲಿ

| Published : Jul 22 2024, 01:16 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಕಲ್ಲಿನಂತೆ ಇರುವವರನ್ನು ಸುಂದರ ಮೂರ್ತಿಯನ್ನಾಗಿ ಮಾಡಿ ಜಗತ್ತಿಗೆ ಅರ್ಪಿಸಿದ ಕೀರ್ತಿ ಗುರುಗಳಿಗೆ ಸಲ್ಲುತ್ತದೆ. ಗುರು ಈ ಜಗತ್ತಿನ ಅದ್ಭುತವಾದ ಶಕ್ತಿ, ಗುರುಗಳು ತಮ್ಮ ಶ್ರೇಷ್ಠ ಕರ್ತವ್ಯವನ್ನು ನಿರ್ವಹಿಸಿ ಜಗತ್ತಿಗೆ ಮಾದರಿಯಾಗಿದ್ದಾರೆ. ಗುರುಗಳಿಗೆ ಜಗತ್ತಿನಲ್ಲಿ ಪೂಜ್ಯನೀಯ ಸ್ಥಾನವಿದೆ ಎಂದು ಜಾನಪದ ವಿದ್ವಾಂಸ ಪ್ರೊ.ಎ.ಎಚ್.ಕೊಳಮಲಿ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಕಲ್ಲಿನಂತೆ ಇರುವವರನ್ನು ಸುಂದರ ಮೂರ್ತಿಯನ್ನಾಗಿ ಮಾಡಿ ಜಗತ್ತಿಗೆ ಅರ್ಪಿಸಿದ ಕೀರ್ತಿ ಗುರುಗಳಿಗೆ ಸಲ್ಲುತ್ತದೆ. ಗುರು ಈ ಜಗತ್ತಿನ ಅದ್ಭುತವಾದ ಶಕ್ತಿ, ಗುರುಗಳು ತಮ್ಮ ಶ್ರೇಷ್ಠ ಕರ್ತವ್ಯವನ್ನು ನಿರ್ವಹಿಸಿ ಜಗತ್ತಿಗೆ ಮಾದರಿಯಾಗಿದ್ದಾರೆ. ಗುರುಗಳಿಗೆ ಜಗತ್ತಿನಲ್ಲಿ ಪೂಜ್ಯನೀಯ ಸ್ಥಾನವಿದೆ ಎಂದು ಜಾನಪದ ವಿದ್ವಾಂಸ ಪ್ರೊ.ಎ.ಎಚ್.ಕೊಳಮಲಿ ಹೇಳಿದರು.

ನಗರದ ಕರ್ನಾಟಕ ಕನಕದಾಸ ಶಿಕ್ಷಣ ಸಂಸ್ಥೆಯ ಕನಕ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಗುರು ಪೂರ್ಣಿಮೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ದಿನಗಳಲ್ಲಿ ಮಾನವೀಯ ಮೌಲ್ಯಗಳು ಕುಸಿಯುತ್ತಿವೆ. ಯುವ ಜನಾಂಗದಲ್ಲಿ ಸಂಸ್ಕೃತಿ ಸಂಸ್ಕಾರ ಕೊರತೆ ಎದ್ದು ಕಾಣುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಪ್ರಸ್ತುತ ಸಮಾಜಕ್ಕೆ ಮೌಲ್ಯಾಧಾರಿತ ಶಿಕ್ಷಣವನ್ನು ಬೋಧಿಸುವ ಗುರುಗಳ ಅವಶ್ಯಕತೆಯಿದೆ ಎಂದು ಹೇಳಿದರು.

ಕರ್ನಾಟಕ ಕನಕದಾಸ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಜಯಪ್ರಭು ಕೊಳಮಲಿ ಮಾತನಾಡಿ, ಕನಕ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಪಠ್ಯದ ಜೊತೆಗೆ ಮೌಲ್ಯ ಶಿಕ್ಷಣವನ್ನು ನಿರಂತರವಾಗಿ ಬೋಧಿಸುತ್ತೇವೆ. ಪರಿಪೂರ್ಣ ವ್ಯಕ್ತಿತ್ವಕ್ಕೆ ನಮ್ಮ ಶಿಕ್ಷಣ ಸಂಸ್ಥೆ ಅಡಿಗಲ್ಲು ಎಂದು ಪ್ರಾಸ್ತಾವಿಕವಾಗಿ ಮಾತನಾಡಿದರು.

ವಿದ್ಯಾರ್ಥಿ ಸಮೂಹ, ಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.