ಕೆದಮುಳ್ಳೂರು ಪಾಲಂಗಾಲದಲ್ಲಿ ಗುರು ವಂದನಾ ಕಾರ್ಯಕ್ರಮ

| Published : Jul 19 2025, 02:00 AM IST

ಕೆದಮುಳ್ಳೂರು ಪಾಲಂಗಾಲದಲ್ಲಿ ಗುರು ವಂದನಾ ಕಾರ್ಯಕ್ರಮ
Share this Article
  • FB
  • TW
  • Linkdin
  • Email

ಸಾರಾಂಶ

ಬಿಜೆಪಿ ವತಿಯಿಂದ ಕೆದಮುಳ್ಳೂರು ಗ್ರಾ.ಪಂ. ವ್ಯಾಪ್ತಿಯ ಪಾಲಂಗಾಲ ಗ್ರಾಮದಲ್ಲಿ ಗುರುವಂದನಾ ಕಾರ್ಯಕ್ರಮ ನಡೆಯಿತು. ನಿವೃತ್ತ ಪ್ರಾಂಶುಪಾಲೆ ಡಾ.ಸುಲೋಚನಾ ಭಟ್ ಅವರನ್ನು ಸನ್ಮಾನಿಸುವ ಮೂಲಕ ಗುರು ವಂದನೆ ಅರ್ಪಿಸಲಾಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಬಿಜೆಪಿ ವತಿಯಿಂದ ಕೆದಮುಳ್ಳೂರು ಗ್ರಾ.ಪಂ. ವ್ಯಾಪ್ತಿಯ ಪಾಲಂಗಾಲ ಗ್ರಾಮದಲ್ಲಿ ಗುರುವಂದನಾ ಕಾರ್ಯಕ್ರಮ ನಡೆಯಿತು. ನಿವೃತ್ತ ಪ್ರಾಂಶುಪಾಲೆ ಡಾ.ಸುಲೋಚನಾ ಭಟ್ ಅವರನ್ನು ಸನ್ಮಾನಿಸುವ ಮೂಲಕ ಗುರು ವಂದನೆ ಅರ್ಪಿಸಲಾಯಿತು.ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಭಾರತೀಯ ಜನತಾ ಪಾರ್ಟಿಯ ಎಸ್‌ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಎಂ.ಎಂ.ಪರಮೇಶ್ವರ, ಗುರುಗಳನ್ನು ಗೌರವಿಸುವುದು ಭಾರತೀಯ ಸಂಸ್ಕೃತಿಯ ಪ್ರತೀಕವಾಗಿದೆ. ಪ್ರತಿಯೊಬ್ಬರು ಗುರು ಹಿರಿಯರನ್ನು ಗೌರವಿಸುವ ಮೂಲಕ ದೇಶದ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು ಎಂದು ಕರೆ ನೀಡಿದರು.ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಸುಲೋಚನಾ ಭಟ್, ಸನಾತನ ಹಿಂದೂ ಧರ್ಮದ ಸಂರಕ್ಷಣೆಗಾಗಿ ಆರ್‌ಎಸ್‌ಎಸ್ ಬ್ರಿಟಿಷರ ಕಾಲದಿಂದಲೂ ಶ್ರಮಿಸುತ್ತಿದೆ. ಸನಾತನ ಸಂಸ್ಕೃತಿಯ ಕುರಿತು ಮುಂದಿನ ಪೀಳಿಗೆಗೆ ಮನದಟ್ಟು ಮಾಡಿಕೊಡುವ ಅಗತ್ಯವಿದೆ. ಇತರರಿಗೆ ಸಂದೇಶ ನೀಡುವ ಮೊದಲು ನಮ್ಮೊಳಗೆ ನಾವು ಬದಲಾಗಬೇಕು. ಸನಾತನ ಧರ್ಮದ ಉಳಿವಿಗೆ ಕಟಿಬದ್ಧರಾಗಬೇಕು. ಸಂಸ್ಕೃತಿಯನ್ನು ಅಳವಡಿಸಿಕೊಂಡು ಅನುಸರಿಸಬೇಕು, ಗುರು ಸಮಾನರನ್ನು ಗೌರವಿಸಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಬಿಜೆಪಿ ಪಾಲಂಗಾಲ ಬೂತ್ ಅಧ್ಯಕ್ಷ ಚಾತಂಡ ಹರೀಶ್, ಗ್ರಾ.ಪಂ. ಮಾಜಿ ಅಧ್ಯಕ್ಷರಾದ ಶೀಲ ಮೇದಪ್ಪ, ರಾಷ್ಟ್ರೀಯ ಸ್ವಯಂಸೇವಕ ಸಂಘದ ತಾಲೂಕು ಪ್ರಮುಖ್ ರಂಜನ್ ನಂಜಪ್ಪ, ಶ್ರೀನಿವಾಸ, ಗ್ರಾಮದ ಹಿರಿಯರಾದ ನಾಗರಾಜ್ ಸ್ವಾಮಿ, ಪಾಲೆಯಂಡ ಉಮೇಶ್, ಬೇಪಡಿಯಂಡ ಧನು, ಬಲ್ಯಾಟಂಡ ಗಿರೀಶ್, ನಡಿಕೇರಿಯಂಡ ರಂಜನ್ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.