The inaugural ceremony of the Hobli-level sports meet for primary and high schools began on Thursday at the Jawaharlal Nehru Stadium here. The sports meet will continue until August 11.
- ಬೆಳೆವಿಮೆ ಮಾಡಿಸಲು ರೈತರಿಗೆ ಸಚಿವ ಡಾ. ಶರಣಪ್ರಕಾಶ ಮನವಿ । ಸೂಕ್ತ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ
ಕನ್ನಡಪ್ರಭ ವಾರ್ತೆ ಸುರಪುರರಾಜ್ಯದಲ್ಲಿ ಉಂಟಾಗಿರುವ ಮಳೆಯ ಕೊರತೆ ಹಾಗೂ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸೂಚನೆಯಂತೆ ವೈದ್ಯಕೀಯ ಶಿಕ್ಷಣ, ಕೌಶಲಾಭಿವೃದ್ಧಿ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರು ಗುರುವಾರ ಸುರಪುರ ತಾಲೂಕಿನ ರುಕ್ಮಾಪುರ ಹಾಗೂ ವಣಿಕಿಹಾಳ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ಹಾನಿ ಮತ್ತು ಬರ ಪರಿಸ್ಥಿತಿ ಪರಿಶೀಲಿಸಿದರು.
ಶಾಸಕ ರಾಜಾ ವೇಣುಗೋಪಾಲ ನಾಯಕ ಹಾಗೂ ಅಧಿಕಾರಿಗಳೊಂದಿಗೆ ರೈತರ ಜಮೀನುಗಳಿಗೆ ಭೇಟಿ ನೀಡಿದ ಸಚಿವರು, ಹತ್ತಿ, ಭತ್ತ, ಹೆಸರು ಸಹಿತ ವಿವಿಧ ಬೆಳೆಗಳ ಸ್ಥಿತಿಗತಿ ವೀಕ್ಷಿಸಿದರು. ಮಳೆ ಕೊರತೆಯಿಂದ ಉಂಟಾಗಿರುವ ಬೆಳೆ ಹಾನಿ, ನೀರಿನ ಸಮಸ್ಯೆ ಹಾಗೂ ರೈತರ ಸಂಕಷ್ಟದ ಕುರಿತು ಮಾಹಿತಿ ಪಡೆದು, ಅಗತ್ಯ ಪರಿಹಾರ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಬಳಿಕ ಶಾಸಕ ಕಚೇರಿಯಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಮಳೆ ಕೊರತೆಯಿಂದ ಹತ್ತಿ, ಹೆಸರು, ಉದ್ದು, ತೊಗರಿ ಹಾಗೂ ಭತ್ತ ಸೇರಿದಂತೆ ವಿವಿಧ ಬೆಳೆಗಳಿಗೆ ತೀವ್ರ ಹಾನಿಯಾಗಿದೆ. ಅದ್ದರಿಂದ ಗುರುಮಠಕಲ್, ಯಾದಗಿರಿ ಭಾಗವನ್ನು ಮಧ್ಯಂತರ ಬೆಳೆ ಹಾನಿ (ಮಿಡ್ ಸೀಸನ್ ಅಡ್ರ‍್ಸಿಟಿ) ಪ್ರದೇಶವೆಂದು ಘೋಷಿಸಲಾಗಿದೆ ಎಂದು ತಿಳಿಸಿದರು.
ಸುರಪುರ ತಾಲೂಕಿನಲ್ಲಿ ಕೇವಲ ಶೇ.25ರಷ್ಟು ರೈತರು ಮಾತ್ರ ಬೆಳೆ ವಿಮೆ ಮಾಡಿಸಿಕೊಂಡಿದ್ದು, ಉಳಿದ ರೈತರು ಕೂಡಲೇ ನೋಂದಾಯಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ಹತ್ತಿ ಬೆಳೆ ವಿಮೆ ನೋಂದಣಿಗೆ ಆ.10ರ ತನಕ ಅವಧಿ ವಿಸ್ತರಿಸಲಾಗಿದ್ದು, ಗ್ರಾಮಮಟ್ಟದಲ್ಲಿ ಡಂಗುರ ಸಾರುವ ಮೂಲಕ ರೈತರಲ್ಲಿ ಜಾಗೃತಿ ಮೂಡಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.ಬರ ಘೋಷಣೆಗೆ ಸಂಬಂಧಿಸಿದಂತೆ ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ಗ್ರೌಂಡ್ ಟ್ರೂಥಿಂಗ್ ಸಮೀಕ್ಷೆ ನಡೆಸಲು ಕಂದಾಯ ಇಲಾಖೆ ಹಾಗೂ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಸಮೀಕ್ಷೆಯ ವರದಿ ಆಧರಿಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ ಬಳಿಕ ನಿಯಮಾನುಸಾರ ಬರ ಘೋಷಣೆ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಮುಂದಿನ ದಿನಗಳಲ್ಲಿ ಎಲ್ ನಿನೋ ಪರಿಣಾಮದಿಂದ ಒಣಹವೆ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಈಗಿನಿಂದಲೇ ಕಂಟಿಂಜೆನ್ಸಿ ಯೋಜನೆ ರೂಪಿಸಿ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶಿಸಿದರು.ಯಾದಗಿರಿಯ ಜಿಲ್ಲಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ, ಜಿಲ್ಲಾ ಪೊಲೀಸ್ ಅಧೀಕ್ಷಕ ಪೃಥ್ವಿಕ್ ಶಂಕರ್, ಜಿ.ಪಂ. ಸಿಇಓ ಲವೀಶ ಒರಡಿಯಾ, ತಹಸೀಲ್ದಾರ್ ಎಚ್.ಎ. ಸರಕಾವಸ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ರತೇಂದ್ರನಾಥ್ ಸೂಗೂರು, ಸಹಾಯಕ ನಿರ್ದೇಶಕ ರಾಮನಗೌಡ ಮಾಲಿ ಪಾಟೀಲ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಸಜ್ಜನ, ಡಿವೈಎಸ್ಪಿ ಜಾವೀದ್ ಇನಾಮದಾರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸರೆಡ್ಡಿ ಮಾಲೀಪಾಟೀಲ್ ಸಹಿತ ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖಂಡರು ಹಾಗೂ ರೈತರು ಉಪಸ್ಥಿತರಿದ್ದರು.
----ಬಾಕ್ಸ್ ಐಟಂ----ಕಲ್ಯಾಣ ಕರ್ನಾಟಕಕ್ಕೆ ಸರ್ಕಾರದ ಆದ್ಯತೆ
ಸುದ್ದಿಗೋಷ್ಠಿಯಲ್ಲಿ ಯಾದಗಿರಿ–ರಾಯಚೂರು ಜಿಲ್ಲೆಗಳಿಗೆ ಸಚಿವ ಸ್ಥಾನ, ರಾಷ್ಟ್ರೀಯ ಹೆದ್ದಾರಿ ಹಗಲೀಕರಣ ಹಾಗೂ ರೈತರ ಸಾಲಮನ್ನಾ ಸಹಿತ ವಿವಿಧ ವಿಷಯಗಳಿಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಕಲ್ಯಾಣ ಕರ್ನಾಟಕ ಭಾಗಕ್ಕೆ ಸರ್ಕಾರ ಆದ್ಯತೆ ನೀಡಿದ್ದು, ಪ್ರಸ್ತುತ ಸಚಿವ ಸಂಪುಟದಲ್ಲಿ ಈ ಭಾಗದ ಎಂಟು ಮಂದಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವ ಡಾ.ಶರಣಪ್ರಕಾಶ ಪಾಟೀಲ ಮಾಹಿತಿ ನೀಡಿದರು.----ಫೋಟೊ---
-6ವೈಡಿಆರ್1ಸುರಪುರ ತಾಲೂಕಿನ ರುಕ್ಮಾಪುರ ಹಾಗೂ ವಣಿಕಿಹಾಳ ಗ್ರಾಮಗಳಲ್ಲಿ ಬರಪೀಡಿತ ಬೆಳೆಗಳ ಸ್ಥಿತಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಪರಿಶೀಲಿಸಿದರು. ಶಾಸಕ ರಾಜಾ ವೇಣುಗೋಪಾಲ ನಾಯಕ, ಜಿಲ್ಲಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರತೇಂದ್ರನಾಥ ಸೂಗೂರು, ಸಹಾಯಕ ನಿರ್ದೇಶಕ ರಾಮನಗೌಡ ಮಾಲಿ ಪಾಟೀಲ, ತಹಸೀಲ್ದಾರ್ ಎಚ್.ಎ.ಸರಕಾವಸ್, ಅಧಿಕಾರಿಗಳು ಉಪಸ್ಥಿತರಿದ್ದರು.