ಚೇರಂಬಾಣೆ ಕಾಲೇಜಿನಲ್ಲಿ ಗುರುವಂದನಾ ಕಾರ್ಯಕ್ರಮ

| Published : Jan 18 2025, 12:47 AM IST

ಸಾರಾಂಶ

ಚೇರಂಬಾಣೆಯ ಅರುಣ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳು ಗುರುವಂದನ ಕಾರ್ಯಕ್ರಮ ಆಯೋಜಿಸಿದ್ದರು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ದೇಶದ ಪ್ರಜೆಗಳನ್ನು ರೂಪಿಸುವ ಗುರುಗಳ ಪಾತ್ರ ಈ ಸಮಾಜದಲ್ಲಿ ಮಹತ್ತರವಾದದ್ದು. ಗುರುಗಳಿಗೆ ನಾವು ಸದಾ ಚಿರಋಣಿ ಆಗಿರಬೇಕು ಎಂದು ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು.

ಚೇರಂಬಾಣೆಯ ಅರುಣ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳು ಆಯೋಜಿಸಿದ್ದ ಗುರುವಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಗುರುಗಳು ಇಡುವ ಪ್ರತಿಯೊಂದು ಹೆಜ್ಜೆಯನ್ನು ವಿದ್ಯಾರ್ಥಿಗಳು ಗಮನಿಸಿ ಪಾಲಿಸುತ್ತಾರೆ. ಹಾಗಾಗಿ ದೇಶದ ಉತ್ತಮ ಭವಿಷ್ಯ ರೂಪಿಸುವ ಗುರುತರ ಜವಾಬ್ದಾರಿ ಗುರುಗಳ ಮೇಲಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಅಧ್ಯಕ್ಷ ಪೊಡನೊಳಂಡ ಎಸ್. ಸುಬ್ಬಯ್ಯ ವಹಿಸಿದ್ದು, ಅತಿಥಿಗಳಾಗಿ ಚೇರಂಬಾಣೆಯ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಟ್ಟಮಾಡ ಮಿಲನ್, ಕಾಲೇಜು ಪ್ರಾಂಶುಪಾಲರಾದ ದಾಯನ ಎಸ್. ರಾಮಕೃಷ್ಣ, ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಬಾಚರಣಿಯಂಡ ದಿನೇಶ್, ಚೇರಂಬಾಣೆ ಗೌಡ ಸಮಾಜದ ಅಧ್ಯಕ್ಷ ಕೊಡಪಾಲ್ ಗಪ್ಪು ಗಣಪತಿ, ಕಾಲೇಜಿನ ಮುಖ್ಯಶಿಕ್ಷಕ ಸಿ.ಆರ್. ಲೋಕೇಶ್, ಕಾಲೇಜಿನ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕ ವೃಂದ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಸನ್ಮಾನಿಸಲಾಯಿತು.

ನಂತರ ವಿವಿಧ ಮನರಂಜನಾ ಕಾರ್ಯಕ್ರಮಗಳು ಜರುಗಿದವು.

17-ಎನ್ಪಿ ಕೆ-2.

ಚೇರಂಬಾಣೆಯ ಅರುಣ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳು ಆಯೋಜಿಸಿದ್ದ ಗುರುವಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಗಣ್ಯರು .

17-ಎನ್ಪಿ ಕೆ-3.

ಚೇರಂಬಾಣೆಯ ಅರುಣ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳು ಆಯೋಜಿಸಿದ್ದ ಗುರುವಂದನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಸನ್ಮಾನಿಸಿ ಗೌರವಿಸಲಾಯಿತು.

=========================================================