ಸಾರಾಂಶ
ಕನ್ನಡಪ್ರಭ ವಾರ್ತೆ ಬೆಳ್ತಂಗಡಿಹಿರಿಯರ ಆಚಾರ ವಿಚಾರಗಳು ಬಹಳ ಅರ್ಥಪೂರ್ಣ ಮತ್ತು ಮಹತ್ವವನ್ನು ಹೊಂದಿದ್ದು, ಇದರಿಂದ ಉತ್ತಮ ಸಂಸ್ಕಾರ ಬೆಳೆಯುತ್ತಿತ್ತು. ಹೀಗಾಗಿ ಇಂತಹ ಆಚರಣೆಗಳನ್ನು ಮುಂದಿನ ಪೀಳಿಗೆಗೆ ತಿಳಿಸುವ ಅಗತ್ಯವಿದೆ ಎಂದು ಶಾಸಕ ಹರೀಶ್ ಪೂಂಜಾ ಹೇಳಿದರು.
ಅವರು ಭಾನುವಾರ ಗುರುವಾಯನಕೆರೆ ಪಿಲಿಚಾಮುಂಡಿಕಲ್ಲು ಗದ್ದೆಮನೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಗುರುವಾಯನಕೆರೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಗುರುವಾಯನಕೆರೆ, ಪ್ರಗತಿಭಂದು ಸ್ವ - ಸಹಾಯ ಸಂಘಗಳ ಒಕ್ಕೂಟ ಗುರುವಾಯನಕೆರೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಆಟಿದ ಕೆಸರ್ದ ಗೊಬ್ಬು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮಾತನಾಡಿ, ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಕಲ್ಪನೆಯ ಧ.ಗ್ರಾ. ಯೋಜನೆ ಜನರ ಬಡತನ ನಿವಾರಣೆ ಜೊತೆಗೆ ಜನರಲ್ಲಿ ಆತ್ಮಸ್ಥೈರ್ಯ ತುಂಬಲು ಸಹಕಾರಿಯಾಗಿದೆ. ಇಂದು ಯೋಜನೆಯ ಸದಸ್ಯರು ಆರ್ಥಿಕ ಸ್ವಾವಲಂಬಿಯಾಗಿ ಸಮಾಜದ ಅಭಿವೃದ್ಧಿಗೆ ಕೈಜೋಡಿಸುತ್ತಿದ್ದಾರೆ ಎಂದರು.
ಧ.ಗ್ರಾ. ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್.ಎಸ್., ಗದ್ದೆಗೆ ಹಾಲುಹಾಕುವ ಮೂಲಕ ಕೆಸರ್ ಗೊಬ್ಬಿಗೆ ಚಾಲನೆ ನೀಡಿದರು.ಕಾರ್ಯಕ್ರಮದಲ್ಲಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾಣದ ಅಧ್ಯಕ್ಷ ಸಂಪತ್ ಸುವರ್ಣ, ಶಿರ್ಲಾಲ್ ಮಹಾಲಿಂಗೇಶ್ವರ ಭಜನಾ ಮಂಡಳಿಯ ಗೌರವಾಧ್ಯಕ್ಷ ಪ್ರಶಾಂತ್ ಪಾರೆಂಕಿ, ಎಕ್ಸೆಲ್ ಕಾಲೇಜಿನ ಅರಮಲೆಬೆಟ್ಟ ಕ್ಯಾಂಪಸ್‌ನ ಪ್ರಭಾರ ಪ್ರಾಚಾರ್ಯ ಡಾ.ಪ್ರಜ್ವಲ್, ಎಕ್ಸೆಲ್ ಕಾಲೇಜಿನ ಆಡಳಿತ ವಿಭಾಗದ ಅಧಿಕಾರಿಗಳಾದ ಶಾಂತಿರಾಜ್ ಜೈನ್, ಸಹನಾ, ತಾಲೂಕು ಪತ್ರಕರ್ತರ ಸಂಘ ಅಧ್ಯಕ್ಷ ಪ್ರಸಾದ್ ಶೆಟ್ಟಿ ಏಣಿಂಜೆ, ರೈತಬಂಧು ಅಹಾರೋದ್ಯಮದ ಮಾಲಕ ಶಿವಶಂಕರ್ ನಾಯಕ್, ಭಜನಾ ಪರಿಷತ್ ರಾಜ್ಯಾಧ್ಯಕ್ಷ ಚಂದ್ರಶೇಖರ್, ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ದೇವದಾಸ್ ಶೆಟ್ಟಿ, ಧ.ಗ್ರಾ. ಯೋಜನೆಯ ಉಡುಪಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ, ಧಾರ್ಮಿಕ ಮುಖಂಡ ಕಿರಣ್ ಪುಷ್ಪಗಿರಿ, ಡಾ.ವೇಣುಗೋಪಾಲ ಶರ್ಮ, ಶ್ರೀ ಕೊಡಮಣಿತ್ತಾಯ ಕ್ಷೇತ್ರ ಅರಮಲೆಬೆಟ್ಟ ಆಡಳಿತ ಮೊಕ್ತೇಸರ ಸುಕೇಶ್ ಕುಮಾರ್ ಕಡಂಬು, ಪ್ರಗತಿ ಪರ ಕೃಷಿಕ ವಿಶ್ವನಾಥ್ ರಾವ್, ಕೇಂದ್ರ ಒಕ್ಕೂಟ ಅಧ್ಯಕ್ಷ ಸದಾನಂದ ಬಂಗೇರ ನಾರಾವಿ, ಪ್ರಗತಿ ಪರ ಕೃಷಿಕ ನಾರಾಯಣ ಶೆಟ್ಟಿ, ಪ್ರಗತಿ ಪರ ಕೃಷಿಕ ಕ್ರಿಷ್ಣೋಜಿ ರಾವ್ ಗದ್ದೆ ಮನೆ ಮುಂತಾದವರು ಉಪಸ್ಥಿತರಿದ್ದರು. ಧ.ಗ್ರಾ ಯೋಜನೆಯ ಗುರುವಾಯನಕೆರೆ ವಲಯದ ಯೋಜನಾದಿಕಾರಿ ಅಶೋಕ್ ಸ್ವಾಗತಿಸಿದರು.
ವಿನ್ಯಾಸ್ ಕಾರ್ಯಕ್ರಮ ನಿರೂಪಿಸಿದರು. ಭಜನಾ ಪರಿಷತ್ ರಾಜ್ಯಾಧ್ಯಕ್ಷ ಚಂದ್ರಶೇಖರ ಸಾಲಿಯಾನ್ ವಂದಿಸಿದರು. ವಿವಿಧ ತುಳುನಾಡಿನ ಕ್ರೀಡಾ ಸ್ಪರ್ಧೆಗಳು ನಡೆದವು.