ಕ್ರೀಡೆಯ ಜೊತೆಗೆ ವ್ಯಾಸಂಗಕ್ಕೂ ಆದ್ಯತೆ ನೀಡಿ

| Published : Oct 29 2024, 01:08 AM IST

ಸಾರಾಂಶ

ವಿಶ್ವವಿದ್ಯಾನಿಲಯದಲ್ಲಿರುವ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ತಮ್ಮ ದೈಹಿಕ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ಮೈಸೂರು

ವಿದ್ಯಾರ್ಥಿ ಕ್ರೀಡಾಪಟುಗಳು ಕ್ರೀಡೆಯ ಜೊತೆಗೆ ವ್ಯಾಸಂಗಕ್ಕೂ ಆದ್ಯತೆ ನೀಡಬೇಕು ಎಂದು ಕೆ.ಆರ್. ಉಪ ವಿಭಾಗದ ಎಸಿಪಿ ಎಚ್.ಬಿ. ರಮೇಶ್ ಕುಮಾರ್ ತಿಳಿಸಿದರು.ಮೈಸೂರು ವಿವಿ ದೈಹಿಕ ಶಿಕ್ಷಣ ವಿಭಾಗವು ಆಯೋಜಿಸಿರುವ 3 ದಿನಗಳ ಅಂತರ ಕಾಲೇಜು ಜಿಮ್ನಾಸ್ಟಿಕ್ಸ್, ಈಜು, ಯೋಗಾಸನ, ಕರಾಟೆ, ಕಿಕ್ ಬಾಕ್ಸಿಂಗ್, ಕುಸ್ತಿ, ಭಾರ ಎತ್ತುವ (ಪುರುಷ ಮತ್ತು ಮಹಿಳೆಯರ) ಹಾಗೂ ಅತ್ಯುತ್ತಮ ದೇಹದಾರ್ಢ್ಯ (ಪುರುಷರ) ಸ್ಪರ್ಧೆಗಳನ್ನು ಅವರು ಸೋಮವಾರ ಉದ್ಘಾಟಿಸಿ ಮಾತನಾಡಿದರು.ವಿಶ್ವವಿದ್ಯಾನಿಲಯದಲ್ಲಿರುವ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ತಮ್ಮ ದೈಹಿಕ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಬೇಕು. ಆ ಮೂಲಕ ಉತ್ತಮ ಕ್ರೀಡಾಪಟುಗಳಾಗಿ ವಿವಿ, ರಾಜ್ಯ ಹಾಗೂ ರಾಷ್ಟ್ರಕ್ಕೆ ಕೀರ್ತಿ ತರಲು ಶ್ರಮಿಸಬೇಕು ಎಂದು ಅವರು ಕರೆ ನೀಡಿದರು.ಮೈಸೂರು ವಿವಿ ಕುಲಪತಿ ಪ್ರೊ.ಎನ್.ಕೆ. ಲೋಕನಾಥ್ ಮಾತನಾಡಿ, ವಿದ್ಯಾರ್ಥಿ ಕ್ರೀಡಾಪಟುಗಳು ಸ್ವೀಕರಿಸಿದ ಪ್ರಮಾಣ ವಚನವು ಈ ಕ್ರೀಡಾಕೂಟಕ್ಕೆ ಮಾತ್ರ ಕ್ರೀಡಾ ಸ್ಫೂರ್ತಿ ಮತ್ತು ಕ್ರೀಡಾ ಮನೋಭಾವನೆ ಸೀಮಿತವಾಗಬಾರದು. ಜೀವನದ್ಯಾದಂತ ಕ್ರೀಡಾ ಸ್ಫೂರ್ತಿ ಮತ್ತು ಕ್ರೀಡಾ ಮನೋಭಾವನೆಯಿಂದ ನಿಯಮಗಳಿಗೆ ಅನುಗುಣವಾಗಿ ಕ್ರೀಡಾಪಟುಗಳಾಗಿ ಕ್ರೀಡೆಯ ಘನತೆಯನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗುತ್ತದೆ ಎಂದರು.ತಮ್ಮ ಆರೋಗ್ಯ ವೃದ್ಧಿಗಾಗಿ ಮತ್ತು ದೇಶವನ್ನು ಉನ್ನತ ಸ್ಥಾನಕ್ಕೆ ಕೊಂಡ್ಯೊಯಲು ಕ್ರೀಡೆಯಿಂದ ಮಾತ್ರ ಸಾಧ್ಯ. ಅದರಿಂದ ವಿದ್ಯಾರ್ಥಿ ಕ್ರೀಡಾಪಟುಗಳು ತಮ್ಮ ಜೀವನದ್ಯಾಂತ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅವರು ಹೇಳಿದರು.ಮೈಸೂರು ವಿವಿ ಸಿಂಡಿಕೇಟ್ ಸದಸ್ಯ ಗೋಕುಲ್ ಗೋವರ್ಧನ್, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಸಿ. ವೆಂಕಟೇಶ್ ಮೊದಲಾದವರು ಇದ್ದರು.