ದೇಶದ ಜಿಡಿಪಿ ಬೆಳವಣಿಗೆಯಲ್ಲಿ ರೇಷ್ಮೆ ಪ್ರಮುಖ ಪಾತ್ರ ವಹಿಸಿದೆ

| Published : Sep 21 2024, 02:01 AM IST

ದೇಶದ ಜಿಡಿಪಿ ಬೆಳವಣಿಗೆಯಲ್ಲಿ ರೇಷ್ಮೆ ಪ್ರಮುಖ ಪಾತ್ರ ವಹಿಸಿದೆ
Share this Article
  • FB
  • TW
  • Linkdin
  • Email

ಸಾರಾಂಶ

ಚೀನಾದಲ್ಲಿ ಹೆಚ್ಚಿನ ರೇಷ್ಮೆ ಬೆಳೆಯುತ್ತಿದ್ದು, ಮುಂದಿನ ದಿನಗಳಲ್ಲಿ ಭಾರತವು ರೇಷ್ಮೆ ಬೆಳೆಯಲ್ಲಿ ಪ್ರಥಮ ಸ್ಥಾನ ಪಡೆಯುತ್ತದೆ.

ಕನ್ನಡಪ್ರಭ ವಾರ್ತೆ ಮೈಸೂರುದೇಶದಲ್ಲಿ ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿಡಿಪಿ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿ ಘಟಿಕೋತ್ಸವ ಭವನದಲ್ಲಿ ಶುಕ್ರವಾರ ನಡೆದ ಕೇಂದ್ರ ರೇಷ್ಮೆ ಮಂಡಳಿಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ 27 ರಾಜ್ಯಗಳ ರೈತರು ತಮ್ಮನ್ನು ರೇಷ್ಮೆ ಕೃಷಿಯಲ್ಲಿ ತೊಡಗಿಸಿಕೊಂಡು ತಮ್ಮ ಜೀವನವನ್ನು ರೂಪಿಸಿಕೊಂಡಿದ್ದಾರೆ. ಕರ್ನಾಟಕದಲ್ಲೂ ರೇಷ್ಮೆ ಬೆಳೆಯನ್ನು ಹೆಚ್ಚಾಗಿ ಬೆಳೆಯಲಾಗುತ್ತಿದೆ. ಮೈಸೂರು ಭಾಗದಲ್ಲಿ ಅಭಿವೃದ್ಧಿ ಹೊಂದಲು ಮೈಸೂರು ಅರಸರ ಕೊಡುಗೆ ಅಪಾರ ಎಂದು ಸ್ಮರಿಸಿದರು. ಕರ್ನಾಟಕದಲ್ಲಿ ರೇಷ್ಮೆ ಬೆಳೆಯನ್ನು ಹೆಚ್ಚಾಗಿ ಬೆಳೆಯಲಾಗುತ್ತಿದೆ. ಚೀನಾದಲ್ಲಿ ಹೆಚ್ಚಿನ ರೇಷ್ಮೆ ಬೆಳೆಯುತ್ತಿದ್ದು, ಮುಂದಿನ ದಿನಗಳಲ್ಲಿ ಭಾರತವು ರೇಷ್ಮೆ ಬೆಳೆಯಲ್ಲಿ ಪ್ರಥಮ ಸ್ಥಾನ ಪಡೆಯುತ್ತದೆ. ರೇಷ್ಮೆ ಬೆಳೆಯು ಕಳೆದ 2- 3 ವರ್ಷಗಳಿಂದ ಉತ್ತಮವಾದ ಬೆಲೆ ಸಿಗುತ್ತಿದ್ದು, ರೇಷ್ಮೆ ಬೆಳೆಗಾರರು ಅಭಿವೃದ್ಧಿ ಹೊಂದಲು ಸಾಧ್ಯವಾಗಿದೆ ಎಂದರು.ಕೇಂದ್ರ ಸರ್ಕಾರವು 1.52 ಲಕ್ಷ ಕೋಟಿ ಹಣವನ್ನು ಕೃಷಿ ಕ್ಷೇತ್ರಕ್ಕೆ ನೀಡಲಾಗಿದೆ. ಪ್ರತಿ ಕ್ಯಾಬಿನೆಟ್ ಸಭೆಯಲ್ಲಿ ರೈತರ ಅಭಿವೃದ್ಧಿಗೆ ಸಂಬಂಧಿಸಿದ ಚರ್ಚೆಗಳು ನಡೆಯುತ್ತವೆ. ರೈತರ ಕಲ್ಯಾಣಕ್ಕೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಲಾಗುತ್ತಿದೆ. ರೈತರು ಆತ್ಮ ವಿಶ್ವಾಸದಿಂದ ಜೀವನ ನಡೆಸಬೇಕು. ಈ ನಿಟ್ಟಿನಲ್ಲಿ ನಾವು ಕಾರ್ಯ ನಿರ್ವಹಿಸುತ್ತೇವೆ ಎಂದು ಅವರು ಹೇಳಿದರು.