ಸಾರಾಂಶ
ಎಚ್.ಎಲ್.ಲಿಂಗರಾಜಮ್ಮ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು.೧೩ ಸದಸ್ಯ ಬಲ ಇರುವ ಸಂಘದಲ್ಲಿ ಶಿವಸಿದ್ದಯ್ಯ ಅವರನ್ನು ಬಿಟ್ಟು ಯಾರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಅವರ ಆಯ್ಕೆಯನ್ನು ಚುನಾವಣಾಧಿಕಾರಿ ರವಿ ಘೋಷಿಸಿದರು.
ಕನ್ನಡಪ್ರಭ ವಾರ್ತೆ ಮಂಡ್ಯ
ತಾಲೂಕಿನ ಹೊಳಲು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರಾಗಿ ಎಚ್.ಎಸ್.ಶಿವಸಿದ್ದಯ್ಯ ಅವರು ಅವಿರೋಧವಾಗಿ ಆಯ್ಕೆಯಾದರು.ಎಚ್.ಎಲ್.ಲಿಂಗರಾಜಮ್ಮ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು.೧೩ ಸದಸ್ಯ ಬಲ ಇರುವ ಸಂಘದಲ್ಲಿ ಶಿವಸಿದ್ದಯ್ಯ ಅವರನ್ನು ಬಿಟ್ಟು ಯಾರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಅವರ ಆಯ್ಕೆಯನ್ನು ಚುನಾವಣಾಧಿಕಾರಿ ರವಿ ಘೋಷಿಸಿದರು.
ಸಂಘದ ಅಧ್ಯಕ್ಷರಾದ ನಿಂಗೇಗೌಡ, ಕಾರ್ಯನಿರ್ವಾಹಾಧಿಕಾರಿ ಹರ್ಷವರ್ಧನ್, ಗ್ರಾಮದ ಹಿರಿಯ ಮುಖಂಡರಾದ ಎಚ್.ಬಿ.ಶಿವಣ್ಣ, ನಾರಾಯಣಪ್ಪ, ನಾಗರಾಜು, ಎಚ್.ಎಸ್.ಯೋಗೇಶ್‌ಕುಮಾರ್, ಶ್ರೀಧರ್, ಜಟ್ಟಿ ಕುಮಾರ್, ಸದಾನಂದ, ಪಟೇಲ್ ರಾಮು, ಬುಕ್ಕಯ್ಯ, ಎಚ್.ಸಿ.ಲಿಂಗರಾಜು, ಶಿವಣ್ಣ, ಗ್ರಾಪಂ ಸದಸ್ಯರಾದ ನಾರಾಯಣಪ್ಪ ಹಾಗೂ ಸಂಘದ ಕಾರ್ಯಕಾರಿ ಮಂಡಳಿಯ ಸದಸ್ಯರು ನೂತನ ಉಪಾಧ್ಯಕ್ಷರನ್ನು ಅಭಿನಂದಿಸಿ, ಸನ್ಮಾನಿಸಿದರು.ಒಂದು ದಿನದ ಉದ್ಯಮಶೀಲತಾ ತಿಳಿವಳಿಕ ಶಿಬಿರಮಂಡ್ಯ:ನಗರದ ಸುಭಾಷ ನಗರ ಹರ್ಡೀಕರ್ ಭವನದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕೌಶಲ್ಯಾಭಿವೃದ್ಧಿ, ಬೆಂಗಳೂರು ಹಾಗೂ ಕರ್ನಾಟಕ ಉದ್ಯಮಶೀಲತಾ ಅಭಿವೃದ್ದಿ ಕೇಂದ್ರ (ಸಿಡಾಕ್) ಸಹಯೋಗದಲ್ಲಿ ಆ.13 ರಂದು ಜಿಲ್ಲೆಯಲ್ಲಿ ಸ್ವಂತ ಉದ್ಯಮ ಸ್ಥಾಪಿಸಲು ಬಯಸುವವರಿಗೆ ಒಂದು ದಿನದ ಉದ್ಯಮಶೀಲತಾ ತಿಳಿವಳಿಕ ಶಿಬಿರ ಹಮ್ಮಿಕೊಳ್ಳಲಾಗಿದೆ. ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು, ಪ್ರೋತ್ಸಾಹ ಯೋಜನೆಗಳ ಆಯ್ಕೆ, ಮುಂದೆ ಕೈಗೊಳ್ಳಲಾಗುವ ಉದ್ಯಮಶೀಲತಾಭಿವೃದ್ಧಿ ತರಬೇತಿ ಬಗ್ಗೆ ಮಾಹಿತಿ ಹಾಗೂ ಇತರೆ ಕೈಗಾರಿಕಾ ವಿಷಯಗಳ ಕುರಿತು ಮಾಹಿತಿ ನೀಡಲಾಗುವುದು. ಕಾರ್ಯಕ್ರಮದಲ್ಲಿ ಭಾಗವಹಿಸುವವರು ಕನಿಷ್ಠ 18 ವರ್ಷ ಮೇಲ್ಪಟ್ಟ ವಯಸ್ಸಿನವರಾಗಿರಬೇಕು. ಓದಲು, ಬರೆಯಲು ಬರುತ್ತಿರಬೇಕು. ಅರ್ಜಿ ಸಲ್ಲಿಸಲು ಆ. 12 ಕೊನೆ ದಿನ. ಹೆಚ್ಚಿನ ಮಾಹಿತಿಗಾಗಿ ಮೊ-9008194396, 7760145784 ಅನ್ನು ಸಂಪರ್ಕಿಸಬಹುದು ಎಂದು ಮಂಡ್ಯ ಸಿಡಾಕ್ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.