ಸಾರಾಂಶ
ಕನಕಪುರ: ಬಸವಣ್ಣನವರ ಅನುಯಾಯಿ ಹಡಪದ ಅಪ್ಪಣ್ಣ ಸಾಮಾಜಿಕ ಕ್ರಾಂತಿಗೆ ಮುನ್ನುಡಿ ಬರೆದ ಮಹಾಪುರುಷ ಎಂದು ಗ್ರೇಡ್-2 ತಹಸೀಲ್ದಾರ್ ಶಿವಕುಮಾರ್ ತಿಳಿಸಿದರು.
ಕನಕಪುರ: ಬಸವಣ್ಣನವರ ಅನುಯಾಯಿ ಹಡಪದ ಅಪ್ಪಣ್ಣ ಸಾಮಾಜಿಕ ಕ್ರಾಂತಿಗೆ ಮುನ್ನುಡಿ ಬರೆದ ಮಹಾಪುರುಷ ಎಂದು ಗ್ರೇಡ್-2 ತಹಸೀಲ್ದಾರ್ ಶಿವಕುಮಾರ್ ತಿಳಿಸಿದರು.
ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಆಯೋಜಿಸಿದ್ದ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 12ನೇ ಶತಮಾನದಲ್ಲಿ ಬಸವಣ್ಣನವರ ಅನುಭವ ಮಂಟಪದಲ್ಲಿ ಕಾರ್ಯದರ್ಶಿಯಾಗಿದ್ದ ಹಡಪದ ಅಪ್ಪಣ್ಣ ಸಮಾಜದಲ್ಲಿನ ಶೋಷಿತ ವರ್ಗಗಳನ್ನು ಮುಖ್ಯವಾಹಿನಿಗೆ ತರಲು ವಚನಗಳಿಂದ ಕ್ರಾಂತಿಕಾರಿ ಹೋರಾಟ ನಡೆಸಿದವರು. ಸಮಾಜದಲ್ಲಿ ಶೋಷಣೆಯ ನಿರ್ಮೂಲನೆಗೆ ಶ್ರಮಿಸಿದ ಮಹಾಪುರುಷರ ಸಾಲಿನಲ್ಲಿ ಹಡಪದ ಅಪ್ಪಣ್ಣ ಒಬ್ಬರು. 250ಕ್ಕೂ ಹೆಚ್ಚು ವಚನಗಳನ್ನು ರಚಿಸಿದ ಅಪ್ಪಣ್ಣನವರು ಬಸವಣ್ಣನವರೊಂದಿಗೆ ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಎಂದರು.ದಮ್ಮ ದೀವಿಗೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಮಲ್ಲಿಕಾರ್ಜುನ್ ಮಾತನಾಡಿ, 12ನೇ ಶತಮಾನದಲ್ಲಿ ಬಸವಣ್ಣನವರ ವಚನ ಸಾಹಿತ್ಯ ಚಳವಳಿಗೆ ಹಡಪದ ಹಪ್ಪಣ್ಣನವರು ಮೈಲುಗಲ್ಲಾಗಿದ್ದರು. ಅನೇಕ ವಚನಗಳನ್ನು ರಚಿಸಿದ ಹಡಪದ ಅಪ್ಪಣ್ಣನವರು ವಚನ ಸಾಹಿತ್ಯಕ್ಕೆ ತನ್ನದೇ ಆದ ಕೊಡುಗೆ ನೀಡಿದವರು ಎಂದರು.
ಕಾರ್ಯಕ್ರಮದಲ್ಲಿ ಪ್ರಗತಿಪರ ಸಂಘಟನೆಯ ಕುಮಾರಸ್ವಾಮಿ, ಮುಖಂಡ ನೀಲಿ ರಮೇಶ್ ಮಾತನಾಡಿದರು. ಪಶುಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಯು.ಸಿ.ಕುಮಾರ್, ನಗರಸಭಾ ಸದಸ್ಯ ಸ್ಟುಡಿಯೋ ಚಂದ್ರು, ಯುವಶಕ್ತಿ ವೇದಿಕೆ ಶ್ರೀನಿವಾಸ್, ಕಂದಾಯ ಇಲಾಖೆ ಅಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.ಕೆ ಕೆ ಪಿ ಸುದ್ದಿ 04:
ಕನಕಪುರ ತಾಲೂಕು ಕಚೇರಿ ಸಭಾಂಗಣದಲ್ಲಿ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಗ್ರೇಡ್ -2 ತಹಸೀಲ್ದಾರ್ ಶಿವಕುಮಾರ್ ಮಾತನಾಡಿದರು.