ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷರಾಗಿ ಹಾಲೇಶಗೌಡ, ಉಪಾಧ್ಯಕ್ಷರಾಗಿ ಜೈಮುನಿ

| Published : Apr 05 2025, 12:48 AM IST

ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷರಾಗಿ ಹಾಲೇಶಗೌಡ, ಉಪಾಧ್ಯಕ್ಷರಾಗಿ ಜೈಮುನಿ
Share this Article
  • FB
  • TW
  • Linkdin
  • Email

ಸಾರಾಂಶ

ಹರಿಹರ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷರಾಗಿ ಜಿ.ಬಿ. ಹಾಲೇಶ್ ಗೌಡ ಹಾಗೂ ಉಪಾಧ್ಯಕ್ಷರಾಗಿ ಪತ್ರಕರ್ತ ಕೆ. ಜೈಮುನಿ ಅವಿರೋಧ ಆಯ್ಕೆಯಾಗಿದ್ದಾರೆ.

ಹರಿಹರ: ಹರಿಹರ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷರಾಗಿ ಜಿ.ಬಿ. ಹಾಲೇಶ್ ಗೌಡ ಹಾಗೂ ಉಪಾಧ್ಯಕ್ಷರಾಗಿ ಪತ್ರಕರ್ತ ಕೆ. ಜೈಮುನಿ ಅವಿರೋಧ ಆಯ್ಕೆಯಾದರು.

ನಗರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗುರುವಾರ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆ ಆಯ್ಕೆ ಪ್ರಕ್ರಿಯೆ ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ರವರೆಗೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಜಿ. ವೀರಯ್ಯ ಮತ್ತು ಜಿ.ಬಿ. ಹಾಲೇಶ್‍ಗೌಡ ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಪತ್ರಕರ್ತ ಕೆ. ಜೈಮುನಿ ಮತ್ತು ಹಿದಾಯಿತ್ ಉಲ್ಲಾ ನಾಮಪತ್ರ ಸಲ್ಲಿಸಿದ್ದರು.

ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಜಿ.ವೀರಯ್ಯ ಮತ್ತು ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿ ಹಿದಾಯಿತ್‍ ಉಲ್ಲಾ ಸಲ್ಲಿಸಿದ್ದ ನಾಮಪತ್ರ ಹಿಂಪಡೆದರು. ಈ ಹಿನ್ನೆಲೆ ಅಭ್ಯರ್ಥಿಗಳಾದ ಜಿ.ಬಿ. ಹಾಲೇಶ್‍ ಗೌಡ ಅಧ್ಯಕ್ಷ ಸ್ಥಾನ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕೆ.ಜೈಮುನಿ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಸುನೀತಾ ಘೋಷಣೆ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕ್ಷೇತ್ರ ಅಧಿಕಾರಿಗಳಾದ ಶಿವರಾಜ್ ಕುಮಾರ್ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇರ್ಫಾನ್, ಸಂಘದ ಸದಸ್ಯರು ಉಪಸ್ಥಿತರಿದ್ದರು.

- - -

-03ಎಚ್ ಆರ್ ಆರ್ 03-04:

ಜಿ.ಬಿ.ಹಾಲೇಶ ಗೌಡ

ಕೆ.ಜೈಮುನಿ