ಹಳೆಯಂಗಡಿಯಲ್ಲಿ ಪ್ರಧಾನ ಕಚೇರಿ ಹೊಂದಿ, ಹಳೆಯಂಗಡಿ, ಪಡುಬಿದ್ರಿ, ಕಿನ್ನಿಗೋಳಿ, ಮೂಡುಬಿದಿರೆಯಲ್ಲಿ ಶಾಖೆ ಹೊಂದಿರುವ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ 20025-26ನೇ ಸಾಲಿನ ಸಾಧನೆಯನ್ನು ಗುರುತಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ‘ಸಾಧನಾ ಪ್ರಶಸ್ತಿ’ ನೀಡಿ ಗೌರವಿಸಿದೆ. ಎಸ್‌ಸಿಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಪ್ರಶಸ್ತಿಯನ್ನು ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಎಚ್. ವಸಂತ್ ಬರ್ನಾಡ್ ಅವರಿಗೆ ಪ್ರದಾನ ಮಾಡಿದರು.

ಮೂಲ್ಕಿ: ಹಳೆಯಂಗಡಿಯಲ್ಲಿ ಪ್ರಧಾನ ಕಚೇರಿ ಹೊಂದಿ, ಹಳೆಯಂಗಡಿ, ಪಡುಬಿದ್ರಿ, ಕಿನ್ನಿಗೋಳಿ, ಮೂಡುಬಿದಿರೆಯಲ್ಲಿ ಶಾಖೆ ಹೊಂದಿರುವ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ 20025-26ನೇ ಸಾಲಿನ ಸಾಧನೆಯನ್ನು ಗುರುತಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ‘ಸಾಧನಾ ಪ್ರಶಸ್ತಿ’ ನೀಡಿ ಗೌರವಿಸಿದೆ. ಎಸ್‌ಸಿಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಪ್ರಶಸ್ತಿಯನ್ನು ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಎಚ್. ವಸಂತ್ ಬರ್ನಾಡ್ ಅವರಿಗೆ ಪ್ರದಾನ ಮಾಡಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಪೂಜಾರಿ ಜೊತೆಗಿದ್ದರು. ಕಾರ್ಯಕ್ರಮದಲ್ಲಿ ಕೇಂದ್ರ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕ ಡಾ. ಬೆಳಪು ದೇವಿ ಪ್ರಸಾದ್ ಶೆಟ್ಟಿ, ಜಿಲ್ಲಾ ಯೂನಿಯನ್ ಸಹಕಾರಿ ಅಧ್ಯಕ್ಷ ಶಶಿಕುಮಾರ್ ರೈ, ಸಹಕಾರಿ ಇಲಾಖೆಯ ಉಪ ನಿಬಂಧಕರಾದ ರಮೇಶ್ ಎನ್., ಲಾವಣ್ಯ ಹಾಗೂ ಎಕ್ಕಾರು ಮೋನಪ್ಪ ಶೆಟ್ಟಿ, ಸದಾಶಿವ ಉಳ್ಳಾಲ್, ಭಾಸ್ಕರ್ ಕೋಟ್ಯಾನ್ ಇರ್ವತ್ತೂರು ಮತ್ತಿತರರಿದ್ದರು.