ಕನ್ನಡಪ್ರಭ ವಾರ್ತೆ ಹಳಿಯಾಳ
ಪಟ್ಟಣದ ಶ್ರೀ ಗಣೇಶ ಕಲ್ಯಾಣ ಮಂಟಪದಲ್ಲಿ ಬಿಜೆಪಿಯ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾ ಅಭಿಯಾನ 2026ರ ಮಂಡಲ ಮಟ್ಟದ ಶಿಕ್ಷಣ ವರ್ಗ ನಡೆಯಿತು.ಪ್ರಾರಂಭದಲ್ಲಿ ವಂದೇ ಮಾತರಂ ಗೀತೆ ಗಾಯನ ಮಾಡಿ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ದೇಶಭಕ್ತಿಯ ಸಂಕಲ್ಪ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಡಲ ಅಧ್ಯಕ್ಷ ವಿಠ್ಠಲ ಸಿದ್ಧನ್ನವರ ವಹಿಸಿದ್ದರು. ಪ್ರಶಿಕ್ಷಣ ವರ್ಗ ಮಹಾ ಅಭಿಯಾನಕ್ಕೆ ಚಾಲನೆ ನೀಡಿದ ಮಾಜಿ ಶಾಸಕ ಸುನೀಲ ಹೆಗಡೆ ಮಾತನಾಡಿ, ಪಕ್ಷದ ಸಿದ್ಧಾಂತ ಮತ್ತು ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಕಾರ್ಯಕರ್ತರ ತರಬೇತಿಯ ಮಹತ್ವವನ್ನು ವಿವರಿಸಿ ಹೇಳಿದರು. ಮಂಡಲ ಪ್ರಭಾರಿ ನಿತ್ಯಾನಂದ ಗಾಂವ್ಕರ ಪ್ರಾಸ್ತಾವಿಕವಾಗಿ ಮಾತನಾಡಿ ಮಹಾಅಭಿಯಾನದ ಉದ್ದೇಶವನ್ನು ತಿಳಿಹೇಳಿದರು. ವೇದಿಕೆಯಲ್ಲಿ ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಾಜಿ ನರಸಾನಿ, ಜಿಲ್ಲಾ ವಿಶೇಷ ಆಹ್ವಾನಿತ ಮಂಗೇಶ ದೇಶಪಾಂಡೆ, ಜಿಲ್ಲಾ ಒಬಿಸಿ ಮೊರ್ಚಾ ಪ್ರಧಾನ ಕಾರ್ಯದರ್ಶಿ ಗಣಪತಿ ಕರಂಜೇಕರ ಉಪಸ್ಥಿತರಿದ್ದರು. ಮಂಡಲ ಪ್ರಧಾನ ಕಾರ್ಯದರ್ಶಿ ಸಂತೋಷ ಘಟಕಾಂಬ್ಳೆ ನಿರೂಪಿಸಿದರು. ಸೋಮೇಶ್ ಹುಂಡೇಕರ ಸ್ವಾಗತಿಸಿದರು, ಮಂಜುಳಾ ಮೊರೆಯವರು ವಂದೇ ಮಾತರಂ ಗೀತ ಗಾಯನ ಮಾಡಿದರು. ಜ್ಞಾನೇಶ್ ಮಾನಗೆಯವರು ವಂದಿಸಿದರು.ಪ್ರಶಿಕ್ಷಣ ವರ್ಗದಲ್ಲಿ ಮಂಡಲ ಮತ್ತು ಜಿಲ್ಲಾ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಶಕ್ತಿ ಕೇಂದ್ರಗಳ ಪ್ರಮುಖರು, ಪ್ರಭಾರಿಗಳು ಹಾಗೂ ಬೂತ್ ಮಟ್ಟದ ಅಧ್ಯಕ್ಷರು ಸೇರಿದಂತೆ ನೂರಾರು ಕಾರ್ಯಕರ್ತರು ತರಬೇತಿಯಲ್ಲಿ ಪಾಲ್ಗೊಂಡು ಸದುಪಯೋಗ ಪಡೆದರು.