Hammer Throw: Honor for gold medalist Salim
ಬಾಳೆಹೊನ್ನೂರು: ಸಮೀಪದ ಬನ್ನೂರು ಗ್ರಾಪಂ ವ್ಯಾಪ್ತಿಯ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬನ್ನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಒಕ್ಕೂಟದ ಅಧ್ಯಕ್ಷೆ ಮಧುರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಸಂಜೀವಿನಿ ಒಕ್ಕೂಟವು ಪೂರಕವಾಗಿದ್ದು, ಒಕ್ಕೂಟದ ಮೂಲಕ ವಿವಿಧ ವ್ಯಾವಹಾರಿಕ ಚಟುವಟಿಕೆಗಳನ್ನು ನಡೆಸಿ ಸಾಮಾಜಿಕ ಜ್ಞಾನವನ್ನು ಪಡೆದುಕೊಳ್ಳಬಹುದಾಗಿದೆ ಎಂದರು. ಇದೇ ಸಂದರ್ಭದಲ್ಲಿ ರಾಷ್ಟ್ರಮಟ್ಟದಲ್ಲಿ ಹ್ಯಾಮರ್ ಥ್ರೋನಲ್ಲಿ ಚಿನ್ನದ ಪದಕ ಪಡೆದ ಸಾಲೀಮ್ ಅವರನ್ನು ಗೌರವಿಸಲಾಯಿತು. ಸಂಜೀವಿನಿ ಒಕ್ಕೂಟದ ಕೃಷಿಯೇತರ ವ್ಯವಸ್ಥಾಪಕಿ ವಿನುತಾ, ಕವನ, ಗ್ರಾಪಂ ಪಿಡಿಓ ರಾಘವೇಂದ್ರ ಮತ್ತಿತರರು ಹಾಜರಿದ್ದರು. ೨೮ಬಿಹೆಚ್ಆರ್ ೧: