Hampanagowda assumes office as Chairman of the Warehousing Corporation

ಸಿಂಧನೂರು: ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ನೂತನ ಅಧ್ಯಕ್ಷರಾಗಿ ಸಿಂಧನೂರು ವಿಧಾನಸಭಾ ಕ್ಷೇತ್ರದ ಶಾಸಕ ಹಂಪನಗೌಡ ಬಾದರ್ಲಿ ಅವರು ಶನಿವಾರ ಅಧಿಕಾರ ಸ್ವೀಕರಿಸಿದರು. ಬೆಂಗಳೂರಿನ ನಿಗಮದ ಕಚೇರಿಯಲ್ಲಿ ಅಧಿಕಾರಿಗಳು ನೀಡಿದ ಕಡತಗಳಿಗೆ ಸಹಿ ಮಾಡಿ ಅಧಿಕಾರ ವಹಿಸಿಕೊಂಡರು. ಇದೇ ಸಂದರ್ಭದಲ್ಲಿ ದಾಸಶ್ರೇಷ್ಠ ಕನಕದಾಸರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸುವ ಮೂಲಕ ಅವರ 539ನೇ ಜಯಂತಿಯನ್ನು ಆಚರಿಸಲಾಯಿತು. ಮಾಜಿ ಸಚಿವ ಅಮರೇಗೌಡ ಬಯ್ಯಾಪುರ, ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ ಹಾಗೂ ನಿಗಮದ ಅಧಿಕಾರಿಗಳು ಇದ್ದರು.

-----

ಫೋಟೋ:27ಕೆಪಿಎಸ್ಎನ್ಡಿ2: ಸಿಂಧನೂರು ವಿಧಾನಸಭಾ ಕ್ಷೇತ್ರದ ಶಾಸಕ ಹಂಪನಗೌಡ ಬಾದರ್ಲಿ ಅವರು ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ನೂತನ ಅಧ್ಯಕ್ಷರಾಗಿ ಶನಿವಾರ ಅಧಿಕಾರ ಸ್ವೀಕರಿಸಿದರು