ನವದೆಹಲಿಯ ಗಣರಾಜ್ಯೋತ್ಸವಕ್ಕೆ ವಿಶೇಷ ಅತಿಥಿಯಾಗಿ ಎಚ್. ಎ. ಹಂಸ ಆಯ್ಕೆ

| Published : Jan 15 2025, 12:45 AM IST

ನವದೆಹಲಿಯ ಗಣರಾಜ್ಯೋತ್ಸವಕ್ಕೆ ವಿಶೇಷ ಅತಿಥಿಯಾಗಿ ಎಚ್. ಎ. ಹಂಸ ಆಯ್ಕೆ
Share this Article
  • FB
  • TW
  • Linkdin
  • Email

ಸಾರಾಂಶ

ಜನವರಿ 26ರಂದು ನವದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಎಚ್‌.ಎ. ಹಂಸ ಆಯ್ಕೆಗೊಂಡಿದ್ದಾರೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಜನವರಿ 26ರಂದು ನವದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎಚ್. ಎ. ಹಂಸ ಆಯ್ಕೆಗೊಂಡಿದ್ದಾರೆ.

ಭಾರತ ಸರ್ಕಾರದ ಪಂಚಾಯತ್ ರಾಜ್ಯ ಸಚಿವಾಲಯದ ನಿರ್ದೇಶನದ ಮೇರೆಗೆ ಕರ್ನಾಟಕ ರಾಜ್ಯ ಸರ್ಕಾರ ಹಂಸ ಅವರನ್ನು ದೆಹಲಿಯ ಗಣರಾಜ್ಯೋತ್ಸವಕ್ಕೆ ವಿಶೇಷ ಅತಿಥಿಯಾಗಿ ಆಯ್ಕೆ ಮಾಡಿದೆ.

ನವದೆಹಲಿ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಆಯ್ಕೆಗೊಂಡ ಒಟ್ಟು 12 ಅಧ್ಯಕ್ಷರ ಪೈಕಿ ಕೊಡಗು ಜಿಲ್ಲೆಯಿಂದ ಆಯ್ಕೆಗೊಂಡ ಏಕೈಕ ಗ್ರಾ. ಪಂ. ಅಧ್ಯಕ್ಷರಾಗಿದ್ದಾರೆ.

ಕಳೆದ 25 ವರ್ಷಗಳಿಂದ ಗ್ರಾಮ ಪಂಚಾಯಿತಿಯಲ್ಲಿ ಚುನಾಯಿತ ಜನಪ್ರತಿನಿಧಿಯಾಗಿ ಜನಾನುರಾಗಿರುವ ಹಂಸ ಅವರು, ಗ್ರಾಮಾಭಿವೃದ್ಧಿಯಲ್ಲಿ ಸಾಬೀತುಪಡಿಸಿದ ಅತ್ಯುತ್ತಮ ಮಾದರಿ ಆಡಳಿತ, ಕ್ರಿಯಾಶೀಲತೆ ಹಾಗೂ ಜನೋಪಯೋಗಿ ಯೋಜನೆಗಳ ಯಶಸ್ವಿ ಅನುಷ್ಠಾನದ ಮೂಲಕ ವಿಶೇಷವಾಗಿ ಗಮನ ಸೆಳೆದವರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಹಂಸ ಅವರಿಗೆ ಮತ್ತು ಹೊದ್ದೂರು ಗ್ರಾ. ಪಂ.ಗೆ ಹಲವಾರು ರಾಜ್ಯ ಮತ್ತು ಜಿಲ್ಲಾಮಟ್ಟದ ಪ್ರಶಸ್ತಿಗಳು ದೊರೆತಿವೆ.