ಬಿವಿಟಿಯಲ್ಲಿ ಕರಕುಶಲ ವಸ್ತುಗಳ ತಯಾರಿ ತರಬೇತಿ ಸಮಾರೋಪ

| Published : Dec 31 2024, 01:02 AM IST

ಬಿವಿಟಿಯಲ್ಲಿ ಕರಕುಶಲ ವಸ್ತುಗಳ ತಯಾರಿ ತರಬೇತಿ ಸಮಾರೋಪ
Share this Article
  • FB
  • TW
  • Linkdin
  • Email

ಸಾರಾಂಶ

ಭಾರತೀಯ ವಿಕಾಸ ಟ್ರಸ್ಟ್‌ನಲ್ಲಿ ಉಡುಪಿಯ ರೋಬೋಸಾಫ್ಟ್ ಟೆಕ್ನಾಲಜೀಸ್ ಪ್ರಾಯೋಜಕತ್ವದಲ್ಲಿ ಆಸಕ್ತ ಗ್ರಾಮೀಣ ಮಹಿಳೆಯರಿಗೆ ೧೦ ದಿನಗಳ ಕೃತಕ ಆಭರಣ ಮತ್ತು ಅಲಂಕಾರಿಕ ಕರಕುಶಲ ವಸ್ತುಗಳ ತರಬೇತಿಯ ಸಮಾರೋಪ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಮಣಿಪಾಲ

ಇಲ್ಲಿನ ಭಾರತೀಯ ವಿಕಾಸ ಟ್ರಸ್ಟ್‌ನಲ್ಲಿ ಉಡುಪಿಯ ರೋಬೋಸಾಫ್ಟ್ ಟೆಕ್ನಾಲಜೀಸ್ ಪ್ರಾಯೋಜಕತ್ವದಲ್ಲಿ ಆಸಕ್ತ ಗ್ರಾಮೀಣ ಮಹಿಳೆಯರಿಗೆ ೧೦ ದಿನಗಳ ಕೃತಕ ಆಭರಣ ಮತ್ತು ಅಲಂಕಾರಿಕ ಕರಕುಶಲ ವಸ್ತುಗಳ ತರಬೇತಿಯ ಸಮಾರೋಪ ಕಾರ್ಯಕ್ರಮ ನಡೆಯಿತು.ಸಮಾರೋಪದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಉಡುಪಿ ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ನಿರ್ದೇಶಕಿ ಡಾ. ನಿರ್ಮಲಾ ಕುಮಾರಿ ಕೆ. ಮಾತನಾಡಿ, ಒಬ್ಬ ಮಹಿಳೆ ಸ್ವಉದ್ಯೋಗ ಕೈಗೊಂಡು ಯಶಸ್ವಿಯಾಗಲು ಕೈಗೊಳ್ಳಬೇಕಾದ ವಿವಿಧ ಕಾರ್ಯಸೂಚಿಗಳ ಬಗ್ಗೆ ತಿಳಿಸಿದರು. ಜನ ಸೇರುವ ಸಾಂಸ್ಕೃತಿಕ ಮತ್ತು ಧಾರ್ಮಿಕ ಸಮಾರಂಭಗಳಲ್ಲಿ ಆಯೋಜಿಸಿರುವ ವಸ್ತು ಪ್ರದರ್ಶನಗಳಲ್ಲಿ ಮಹಿಳೆಯರು ತಯಾರಿಸಿದ ವಸ್ತುಗಳನ್ನು ಮಾರಾಟ ಮಾಡಲು ಉತ್ತಮ ಅವಕಾಶ ಇದೆ ಎಂದು ಸಲಹೆ ನೀಡಿದರು.ಇನ್ನೋರ್ವ ಅತಿಥಿ ರೋಬೋಸಾಫ್ಟ್ ಟೆಕ್ನಾಲಜೀಸ್‌ನ ಹಿರಿಯ ಕಾರ್ಯ ವ್ಯವಸ್ಥಾಪಕ ಶ್ಯಾಮ ರಾಜೇಶ್ ಮಾತನಾಡಿ, ಮಹಿಳೆಯರು ವಿವಿಧ ತರಬೇತಿಗಳಲ್ಲಿ ಭಾಗವಹಿಸಿ ಇಲ್ಲಿ ಪಡೆದ ಕೌಶಲಗಳನ್ನು ಜೀವನದಲ್ಲಿ ಆಳವಡಿಸಿಕೊಂಡು ಅರ್ಥಿಕವಾಗಿ ಸ್ವತಂತ್ರರಾಗಬೇಕು ಎಂದು ಕರೆ ನೀಡಿದರು.

ತರಬೇತಿಯಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಪ್ರಮಾಣ ಪತ್ರ ವಿತರಿಸಲಾಯಿತು.

ವೇದಿಕೆಯಲ್ಲಿ ಸಂಪನ್ಮೂಲ ವ್ಯಕ್ತಿ ರಶ್ಮಿ ಭಟ್ ಶಿರಸಿ, ಉಪಸ್ಥಿತರಿದ್ದರು. ಮೊದಲಿಗೆ ಬಿವಿಟಿಯ ಮುಖ್ಯ ವ್ಯವಸ್ಥಾಪಕ ಮನೋಹರ ಕಟ್ಗೇರಿ ಸ್ವಾಗತಿಸಿದರು. ಎ.ಲಕ್ಷ್ಮೀಬಾಯಿ ಪ್ರಸ್ಥಾವನೆಗೈದರು. ಯು.ಗೀತಾ ರಾವ್ ಸಹಕರಿಸದರು. ರಾಘವೇಂದ್ರ ಆಚಾರ್ಯ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.