ಸಾರಾಂಶ
ಉಡುಪಿ ನಗರಸಭೆ ಅಧ್ಯಕ್ಷರಾದ ಪ್ರಭಾಕರ ಪೂಜಾರಿ ಅವರು ಮನೆಯನ್ನು ಫಲಾನುಭವಿ ಪ್ರಮೀಳಾ ಅವರಿಗೆ ಹಸ್ತಾಂತರ ಮಾಡಿ ಶುಭ ಹಾರೈಸಿದರು.
ಕನ್ನಡಪ್ರಭ ವಾರ್ತೆ ಮಣಿಪಾಲ
ಇಲ್ಲಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಉಡುಪಿ ತಾಲೂಕಿನ ಮಣಿಪಾಲ ವಲಯದ ಮಂಚಿ ಕುಮೇರಿಯ ಮಾಸಾಶನ ಫಲಾನುಭವಿಯಾದ ಪ್ರಮೀಳಾ ಅವರಿಗೆ ವಾತ್ಸಲ್ಯ ಮನೆ ಹಸ್ತಾಂತರ ಕಾರ್ಯಕ್ರಮ ನಡೆಸಲಾಯಿತು.ಉಡುಪಿ ನಗರ ಸಭೆಯ ಅಧ್ಯಕ್ಷರಾದ ಪ್ರಭಾಕರ ಪೂಜಾರಿ ಅವರು ಮನೆಯನ್ನು ಫಲಾನುಭವಿ ಪ್ರಮೀಳಾ ಅವರಿಗೆ ಹಸ್ತಾಂತರ ಮಾಡಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸುಂದರ್ ಕಲ್ಮಾಡಿ, ಸ್ಥಳೀಯ ಸದಸ್ಯರಾದ ಅಶೋಕ್ ನಾಯ್ಕ, ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಸತ್ಯಾನಂದ ನಾಯಕ್, ತಾಲೂಕು ಯೋಜನಾಧಿಕಾರಿಗಳಾದ ರಾಮ ಎಮ್., ಜನಜಾಗೃತಿ ವೇದಿಕೆಯ ಸದಸ್ಯರಾದ ಕುಶಲ್ ಶೆಟ್ಟಿ ಅವರು ಉಪಸ್ಥಿತರಿದ್ದು ಶುಭ ಹಾರೈಸಿದರು.ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಕ್ಯಾಪ್ಟನ್ ಹರೀಶ್, ಮಣಿಪಾಲ ವಲಯದ ಅಧ್ಯಕ್ಷೆ ಸಾವಿತ್ರಿ, ಹೆರ್ಗ ಬಿ ಒಕ್ಕೂಟದ ಅಧ್ಯಕ್ಷೆ ಸುಮಲತಾ, ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಮಣಿಪಾಲ ವಲಯದ ಸದಸ್ಯರು, ಒಕ್ಕೂಟದ ಸಂಘಗಳ ಸದಸ್ಯರು, ವಲಯದ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.
ವಲಯ ಮೇಲ್ವಿಚಾರಕರಾದ ಬಾಲಚಂದ್ರ ಅವರು ಕಾರ್ಯಕ್ರಮ ನಿರೂಪಿಸಿದರು, ಜ್ಞಾನವಿಕಾಸ ಸಮನ್ವಯಾಧಿಕಾರಿ ಕವಿತಾ ಸ್ವಾಗತಿಸಿದರು, ಹೆರ್ಗ ಬಿ ಸೇವಾ ಪ್ರತಿನಿಧಿ ಚಂದ್ರಕಲಾ ವಂದಿಸಿದರು.