ಪಕ್ಷ ವಹಿಸಿದ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸಿ: ಗೋವಿಂದ ನಾಯ್ಕ

| Published : Mar 16 2024, 01:45 AM IST

ಸಾರಾಂಶ

ಪಕ್ಷವನ್ನು ಉತ್ತಮವಾಗಿ ಸಂಘಟನೆ ಮಾಡಬೇಕಿದೆ. ಲೋಕಸಭೆ ಚುನಾವಣೆಯಲ್ಲಿ ಪಕ್ಷ ಹೆಚ್ಚಿನ ಮತಗಳನ್ನು ಗಳಿಸುವಂತಾಗಬೇಕು.

ಭಟ್ಕಳ: ಹೊಸ ಪದಾಧಿಕಾರಿಗಳೂ ಸಹ ತಮಗೆ ಕೊಟ್ಟ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ಉತ್ತಮವಾಗಿ ಕಾರ್ಯನಿರ್ವಹಿಸಬೇಕು ಎಂದು ಬಿಜೆಪಿ ಜಿಲ್ಲಾ ಲೋಕಸಭಾ ಚುನಾವಣೆ ಸಂಚಾಲಕ ಗೋವಿಂದ ನಾಯ್ಕ ತಿಳಿಸಿದರು.ಇಲ್ಲಿನ ಬಿಜೆಪಿ ಮಂಡಳದ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದಶಿಗಳ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿ, ಪಕ್ಷ ಎಲ್ಲವನ್ನೂ ಗಮನಿಸುತ್ತಿದೆ. ಹಿಂದಿನ ಪದಾಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸಿದ್ದು, ತಾಲೂಕಿನಲ್ಲಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಮತಗಳು ಲಭಿಸುವಂತೆ ಎಲ್ಲರೂ ಶ್ರಮಿಸಬೇಕು ಎಂದರು. ಮಾಜಿ ಶಾಸಕ ಸುನೀಲ ನಾಯ್ಕ ಮಾತನಾಡಿ, ಪಕ್ಷವನ್ನು ಉತ್ತಮವಾಗಿ ಸಂಘಟನೆ ಮಾಡಬೇಕಿದೆ. ಲೋಕಸಭೆ ಚುನಾವಣೆಯಲ್ಲಿ ಪಕ್ಷ ಹೆಚ್ಚಿನ ಮತಗಳನ್ನು ಗಳಿಸುವಂತಾಗಬೇಕು. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬೇಕು. ಆ ನಿಟ್ಟಿನಲ್ಲಿ ನಮ್ಮ ಸಂಘಟನೆಯಾಗಬೇಕೆಂದರು. ನಿಕಟಪೂರ್ವ ಅಧ್ಯಕ್ಷ ಸುಬ್ರಾಯ ದೇವಡಿಗ ಮಾತನಾಡಿ, ತಮ್ಮ ಅವಧಿಯಲ್ಲಿ ಪಕ್ಷದ ಹಿರಿಯ ಕಿರಿಯ ಮುಖಂಡರು, ಕಾರ್ಯಕಯರ್ತರು ಸಹಕಾರ ನೀಡಿದ್ದಾರೆ ಎಂದರು. ರಾಜ್ಯ ಮಾಧ್ಯಮ ವಕ್ತಾರ ಹರಿಪ್ರಕಾಶ ಕೋಣೆಮನೆ ಅವರು ಪಕ್ಷ ಸಂಘಟನೆ ಮತ್ತು ಸಿದ್ಧಾಂತದ ಬಗ್ಗೆ ವಿವರಿಸಿದರು. ಇದೇ ಸಂದರ್ಭದಲ್ಲಿ ಬಿಜೆಪಿ ಮಂಡಳದ ನೂತನ ಅಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ ನಾಯ್ಕ, ಶ್ರೀಧರ ನಾಯ್ಕ ಅವರಿಗೆ ಪಕ್ಷದ ಬಾವುಟ ಹಸ್ತಾಂತರ ಮಾಡುವುದರ ಮೂಲಕ ಮುಂಡಳದ ಜವಾಬ್ದಾರಿ ನೀಡಲಾಯಿತು. ಸಮಾರಂಭವನ್ನು ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್.ಎಸ್. ಹೆಗಡೆ ಉದ್ಘಾಟಿಸಿದರು. ಬಿಜೆಪಿ ಪ್ರಮುಖರಾದ ಪ್ರಸನ್ನ ಕೆರೆಕೈ, ಪ್ರಶಾಂತ ನಾಯ್ಕ, ಹೇಮಂತ ಗಾಂವಕರ್, ಈಶ್ವರ ಎನ್ ನಾಯ್ಕ, ಎಂ.ಜಿ. ಭಟ್, ರಾಜೇಶ ನಾಯ್ಕ, ಶಿವಾನಿ ಶಾಂತರಾಮ, ಕೃಷ್ಣಾ ನಾಯ್ಕ, ಶ್ರೀಕಾಂತ ನಾಯ್ಕ, ಸುರೇಶ ನಾಯ್ಕ, ಮುಕುಂದ ನಾಯ್ಕ, ವಿಷ್ಣುಮೂರ್ತಿ ಹೆಗಡೆ ಮುಂತಾದವರಿದ್ದರು. ಶ್ರೀನಿವಾಸ ನಾಯ್ಕ ಸ್ವಾಗತಿಸಿದರೆ, ಭಾಸ್ಕರ ದೈಮನೆ ನಿರೂಪಿಸಿದರು.