ಸಾರಾಂಶ
ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಗಣಿ ಗುತ್ತಿಗೆ ಮತ್ತು ಕಲ್ಲು ಗಣಿ ಗುತ್ತಿಗೆಗಳಿಂದ ಸಂಗ್ರಹವಾಗುವ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ನಿಧಿಯಡಿಯಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷ ಗಣಿಬಾಧಿತ ಪ್ರದೇಶಗಳಿಗಾಗಿ 2020- 21 ನೇ ಸಾಲಿನ ಕ್ರಿಯಾ ಯೋಜನೆಯಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ನಿಗದಿಪಡಿಸಲಾಗಿದ್ದ ಮೊತ್ತ 29.66 ಲಕ್ಷಗಳಲ್ಲಿ 2 ಆಂಬುಲೆನ್ಸ್ ವಾಹನಗಳನ್ನು ಖರೀದಿಸಲಾಗಿದೆ.
- ಜಿಲ್ಲಾ ಖನಿಜ ಪ್ರತಿಷ್ಠಾನದಿಂದ ಕೊಡುಗೆ
ಕನ್ನಡಪ್ರಭ ವಾರ್ತೆ ಮೈಸೂರುಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ (ಡಿ.ಎಂ.ಎಫ್.ಟಿ) ವತಿಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 2 ಆಂಬ್ಯುಲೆನ್ಸ್‌ಗಳನ್ನು ನಗರದ ಬನ್ನಿಮಂಟಪ ಪಂಜಿನ ಕವಾಯಿತು ಮೈದಾನದಲ್ಲಿ ಶುಕ್ರವಾರ ನಡೆದ ಗಣರಾಜ್ಯೋತ್ಸವದಲ್ಲಿ ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರು ಹಸಿರು ನಿಶಾನೆ ತೋರುವ ಮೂಲಕ ಹಸ್ತಾಂತರಿಸಿದರು.
ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಗಣಿ ಗುತ್ತಿಗೆ ಮತ್ತು ಕಲ್ಲು ಗಣಿ ಗುತ್ತಿಗೆಗಳಿಂದ ಸಂಗ್ರಹವಾಗುವ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ನಿಧಿಯಡಿಯಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷ ಗಣಿಬಾಧಿತ ಪ್ರದೇಶಗಳಿಗಾಗಿ 2020- 21 ನೇ ಸಾಲಿನ ಕ್ರಿಯಾ ಯೋಜನೆಯಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ನಿಗದಿಪಡಿಸಲಾಗಿದ್ದ ಮೊತ್ತ 29.66 ಲಕ್ಷಗಳಲ್ಲಿ 2 ಆಂಬುಲೆನ್ಸ್ ವಾಹನಗಳನ್ನು ಖರೀದಿಸಲಾಗಿದೆ.ಈ ವೇಳೆ ವಿಧಾನಪರಿಷತ್ತು ಸದಸ್ಯ ಮರಿತಿಬ್ಬೇಗೌಡ, ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ, ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ. ಪ್ರಕಾಶ್, ಪೊಲೀಸ್ ಆಯುಕ್ತ ರಮೇಶ್ ಬಾನೋತ್, ದಕ್ಷಿಣ ವಲಯ ಡಿಐಜಿ ಡಾ.ಎಂ.ಬಿ. ಬೋರಲಿಂಗಯ್ಯ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಡಾ.ಕೆ.ಎನ್. ಪುಷ್ಪವತಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪಿ.ಎಸ್. ಕುಮಾರಸ್ವಾಮಿ ಮೊದಲಾದವರು ಇದ್ದರು.