ಚಿಕ್ಕಮತಿಘಟ್ಟ ಗ್ರಾಮದಲ್ಲಿ ಕೋರಮಂಡಲ್ ಇಂಟರ್ನ್ಯಾಷನಲ್ ಲಿಮಿಟೆಡ್ ವತಿಯಿಂದ ಗ್ರೋಮೋರ್ ಗ್ರಾಮ ವರ್ಷದ ಸಂಭ್ರಮ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾದ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಉಪಕ್ರಮದಡಿ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಸೋಲಾರ್ ಬೀದಿ ದೀಪಗಳನ್ನು ಗ್ರಾಮಕ್ಕೆ ಹಸ್ತಾಂತರಿಸಲಾಯಿತು. ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವುದು ಹಾಗೂ ಗ್ರಾಮದಲ್ಲಿ ಬೆಳಕಿನ ವ್ಯವಸ್ಥೆಯನ್ನು ಸುಧಾರಿಸುವ ಉದ್ದೇಶದಿಂದ ಈ ಜನಪರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಂಪನಿಯ ಅSಖ ಉಪಕ್ರಮದಡಿ ಕೈಗೊಂಡಿರುವ ಈ ಕಾರ್ಯಗಳು ಗ್ರಾಮಸ್ಥರ ಆರೋಗ್ಯ, ಸುರಕ್ಷತೆ ಹಾಗೂ ಜೀವನಮಟ್ಟ ಸುಧಾರಣೆಗೆ ನೆರವಾಗಲಿವೆ. ಅಲ್ಲದೆ, ಗ್ರಾಮೀಣ ಪ್ರದೇಶದ ಮೂಲಸೌಕರ್ಯ ಅಭಿವೃದ್ಧಿಗೂ ಸಹಕಾರಿಯಾಗಲಿವೆ
ಚನ್ನರಾಯಪಟ್ಟಣ: ಚಿಕ್ಕಮತಿಘಟ್ಟ ಗ್ರಾಮದಲ್ಲಿ ಕೋರಮಂಡಲ್ ಇಂಟರ್ನ್ಯಾಷನಲ್ ಲಿಮಿಟೆಡ್ ವತಿಯಿಂದ ಗ್ರೋಮೋರ್ ಗ್ರಾಮ ವರ್ಷದ ಸಂಭ್ರಮ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾದ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಉಪಕ್ರಮದಡಿ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಸೋಲಾರ್ ಬೀದಿ ದೀಪಗಳನ್ನು ಗ್ರಾಮಕ್ಕೆ ಹಸ್ತಾಂತರಿಸಲಾಯಿತು.
ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವುದು ಹಾಗೂ ಗ್ರಾಮದಲ್ಲಿ ಬೆಳಕಿನ ವ್ಯವಸ್ಥೆಯನ್ನು ಸುಧಾರಿಸುವ ಉದ್ದೇಶದಿಂದ ಈ ಜನಪರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಂಪನಿಯ ಅSಖ ಉಪಕ್ರಮದಡಿ ಕೈಗೊಂಡಿರುವ ಈ ಕಾರ್ಯಗಳು ಗ್ರಾಮಸ್ಥರ ಆರೋಗ್ಯ, ಸುರಕ್ಷತೆ ಹಾಗೂ ಜೀವನಮಟ್ಟ ಸುಧಾರಣೆಗೆ ನೆರವಾಗಲಿವೆ. ಅಲ್ಲದೆ, ಗ್ರಾಮೀಣ ಪ್ರದೇಶದ ಮೂಲಸೌಕರ್ಯ ಅಭಿವೃದ್ಧಿಗೂ ಸಹಕಾರಿಯಾಗಲಿವೆ. ಕಾರ್ಯಕ್ರಮದಲ್ಲಿ ಕೋರಮಂಡಲ್ ಇಂಟರ್ನ್ಯಾಷನಲ್ ಲಿಮಿಟೆಡ್ನ ವಿಭಾಗೀಯ ಕೃಷಿ ತಜ್ಞರಾದ ರಮೇಶ್ ಕುಮಾರ್ ಹೆಚ್.ವಿ., ವಲಯ ವ್ಯವಸ್ಥಾಪಕರಾದ ಪ್ರವೀಣ್ ಕುಮಾರ್ ಬಿ., ಹಿರಿಯ ಕೃಷಿ ತಜ್ಞರಾದ ಕಿರಣ್ ಕುಮಾರ್, ಚನ್ನರಾಯಪಟ್ಟಣದ ಸಹಾಯಕ ಕೃಷಿ ನಿರ್ದೇಶಕರಾದ ಮೋಹನ್ ಕುಮಾರ್ ಹಾಗೂ ಉಪನ್ಯಾಸಕರಾದ ಬಾವಿಮನೆ ಚಂದ್ರಶೇಖರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಗ್ರಾಮಸ್ಥರು, ಮಕ್ಕಳು ಹಾಗೂ ಕೋರಮಂಡಲ್ ಇಂಟರ್ನ್ಯಾಷನಲ್ ಲಿಮಿಟೆಡ್ನ ಡಾ. ರಾಜಶೇಖರ್ ಮತ್ತು ಮಾರ್ಕೆಟಿಂಗ್ ಅಧಿಕಾರಿ ಅಲೋಕ್ ಸೇರಿದಂತೆ ಕಂಪನಿಯ ಸಿಬ್ಬಂದಿ ಉಪಸ್ಥಿತರಿದ್ದರು.ಗ್ರಾಮಕ್ಕೆ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಸೋಲಾರ್ ಬೀದಿ ದೀಪಗಳನ್ನು ಒದಗಿಸಿದ ಕೋರಮಂಡಲ್ ಇಂಟರ್ನ್ಯಾ?ನಲ್ ಲಿಮಿಟೆಡ್ನ ಜನಪರ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿ, ಕಂಪನಿಯ ಸಾಮಾಜಿಕ ಕಳಕಳಿಯನ್ನು ಶ್ಲಾಘಿಸಿದರು.