ಹನುಮಧ್ವಜ ಪ್ರಕರಣ: ಕೆರಗೋಡಿನಲ್ಲಿ ನಿಷೇಧಾಜ್ಞೆ ಮುಂದುವರಿಕೆ

| Published : Jan 31 2024, 02:20 AM IST

ಹನುಮಧ್ವಜ ಪ್ರಕರಣ: ಕೆರಗೋಡಿನಲ್ಲಿ ನಿಷೇಧಾಜ್ಞೆ ಮುಂದುವರಿಕೆ
Share this Article
  • FB
  • TW
  • Linkdin
  • Email

ಸಾರಾಂಶ

ಧ್ವಜಸ್ಥಂಭದ ಬಳಿಗೆ ಯಾರೂ ತೆರಳದಂತೆ ಸುತ್ತ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ. ಪೊಲೀಸರು ಸ್ಥಳದಲ್ಲೇ ಇದ್ದು ಅಹಿತಕರ ಘಟನೆಗಳು ಜರುಗದಂತೆ ಎಚ್ಚರಿಕೆ ವಹಿಸಿದ್ದಾರೆ. ಮುಂಜಾಗ್ರತೆಯಾಗಿ ಗ್ರಾಮದಲ್ಲಿ ಒಂದು ಕೆಎಸ್‌ಆರ್‌ಪಿ ತುಕಡಿ, 20 ಜನ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಧ್ವಜ ವಿವಾದದ ಕೇಂದ್ರಬಿಂದುವಾಗಿರುವ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಮಂಗಳವಾರ ನಿಷೇಧಾಜ್ಞೆ ಮುಂದುವರೆದಿದ್ದು, ಬಿಗಿ ಪೊಲೀಸ್‌ ಬಂದೋಬಸ್ತ್‌ ಆಯೋಜಿಸಲಾಗಿದೆ. ಧ್ವಜಸ್ಥಂಭದ ಬಳಿಗೆ ಯಾರೂ ತೆರಳದಂತೆ ಸುತ್ತ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ. ಪೊಲೀಸರು ಸ್ಥಳದಲ್ಲೇ ಇದ್ದು ಅಹಿತಕರ ಘಟನೆಗಳು ಜರುಗದಂತೆ ಎಚ್ಚರಿಕೆ ವಹಿಸಿದ್ದಾರೆ. ಮುಂಜಾಗ್ರತೆಯಾಗಿ ಗ್ರಾಮದಲ್ಲಿ ಒಂದು ಕೆಎಸ್‌ಆರ್‌ಪಿ ತುಕಡಿ, 20 ಜನ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ಅಧೀಕ್ಷಕ ಎನ್‌.ಯತೀಶ್‌ ತಿಳಿಸಿದ್ದಾರೆ.

ಹನುಮಧ್ವಜ ವಿವಾದ ಬಿಜೆಪಿ ಮತ್ತು ಜೆಡಿಎಸ್ ರಾಜಕೀಯಕ್ಕೆ ಬಳಸುತ್ತಿವೆ: ಶಾಸಕ ಉದಯ್ ಕಿಡಿಮದ್ದೂರು: ಮಂಡ್ಯ ತಾಲೂಕು ಕೆರಗೂಡು ಗ್ರಾಮದ ಹನುಮಧ್ವಜ ವಿವಾದವನ್ನು ಬಿಜೆಪಿ ಮತ್ತು ಜೆಡಿಎಸ್ ನಾಯಕರು ರಾಜಕೀಯಕ್ಕೆ ಬಳಸಿಕೊಳ್ಳುವ ಮೂಲಕ ಗಲಭೆಗೆ ಕಾರಣರಾಗುತ್ತಿದ್ದಾರೆ ಎಂದು ಶಾಸಕ ಕೆ.ಎಂ.ಉದಯ್ ಕಿಡಿಕಾರಿದರು.

ಪಟ್ಟಣದ ಪುರಸಭೆ ವ್ಯಾಪ್ತಿಯ ವಿವಿಧ ಬಡಾವಣೆಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರಿಗೆ ಮಾತನಾಡಿದರು. ಕಳೆದ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಹತಾಶರಾಗಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಕೆಲಸವಿಲ್ಲದೆ ನಿರುದ್ಯೋಗಿಗಳಾಗಿದ್ದಾರೆ ಎಂದು ದೂರಿದರು.ಜನರ ಮನಸ್ಸನ್ನು ಬೇರೆಡೆಗೆ ಸೆಳೆಯುವ ಉದ್ದೇಶದಿಂದ ಕೆರೆಗೂಡು ಹನುಮಧ್ವಜದ ವಿವಾದವನ್ನು ತಾರಕಕ್ಕೆ ತೆಗೆದುಕೊಂಡು ಹೋಗುವ ಮೂಲಕ ಜನರಲ್ಲಿ ಸಂಘರ್ಷದ ವಾತಾವರಣ ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿದರು.