ಸಾರಾಂಶ
ಹನುಮಧ್ವಜ ತೆರವು ವಿರೋಧಿಸಿ ಮಂಗಳೂರಿನಲ್ಲಿ ಸೋಮವಾರ ಬಿಜೆಪಿ ಪ್ರತಿಭಟಿಸಿತು. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಹಿಂದೂಗಳ 500 ವರ್ಷಗಳ ಕನಸಾಗಿದ್ದು, ಈ ಸಂಭ್ರಮವನ್ನು ಇಡೀ ದೇಶ ಸಂಭ್ರಮಿಸಿದೆ. ಈ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಹನುಮ ಧ್ವಜವನ್ನು ಹಾಕಲಾಗಿತ್ತು. ಹಿಂದುಸ್ಥಾನದಲ್ಲಿ ಹಿಂದುಗಳ ಧ್ವಜ ಹಾಕಲು ಯಾರನ್ನಾದರೂ ಕೇಳಬೇಕಾ ಎಂದು ಬಿಜೆಪಿ ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ ಪ್ರಶ್ನಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಮಂಗಳೂರು
ಮಂಡ್ಯದಲ್ಲಿ ರಾಮಭಕ್ತರು ಅಳವಡಿಸಿದ್ದ ಹನುಮ ಧ್ವಜವನ್ನು ತೆರವುಗೊಳಿಸಿದ ಘಟನೆ ಖಂಡಿಸಿ ನಗರದ ಬಿಜೆಪಿ ಜಿಲ್ಲಾ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.ಬಿಜೆಪಿ ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ ಮಾತನಾಡಿ, ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಹಿಂದೂಗಳ 500 ವರ್ಷಗಳ ಕನಸಾಗಿದ್ದು, ಈ ಸಂಭ್ರಮವನ್ನು ಇಡೀ ದೇಶ ಸಂಭ್ರಮಿಸಿದೆ. ಈ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಹನುಮ ಧ್ವಜವನ್ನು ಹಾಕಲಾಗಿತ್ತು. ಹಿಂದುಸ್ಥಾನದಲ್ಲಿ ಹಿಂದುಗಳ ಧ್ವಜ ಹಾಕಲು ಯಾರನ್ನಾದರೂ ಕೇಳಬೇಕಾ ಎಂದು ಪ್ರಶ್ನಿಸಿದರು.ಇಂದು ಕುಂಪಲ ಪದಗ್ರಹಣ
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಘಟಕದ ನೂತನ ಅದ್ಯಕ್ಷರಾಗಿ ಆಯ್ಕೆಯಾದ ಸತೀಶ್ ಕುಂಪಲ ಅವರ ಅಧಿಕಾರ ಪದಗ್ರಹಣ ಸಮಾರಂಭ ಜ.30ರಂದು ಸಂಜೆ 4.30ಕ್ಕೆ ನಗರದ ಹೊರವಲಯದ ಅಡ್ಯಾರ್ ಗಾರ್ಡನ್‌ನಲ್ಲಿ ನಡೆಯಲಿದೆ.ಸಮಾರಂಭಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗಮಿಸಲಿದ್ದಾರೆ. ಪ್ರಸಕ್ತ ಬಿಜೆಪಿ ಅಧ್ಯಕ್ಷ ಸುದರ್ಶನ ಮೂಡುಬಿದಿರೆ ಅವರಿಂದ ಸತೀಶ್ ಕುಂಪಲ ಅಧಿಕಾರ ಸ್ವೀಕರಿಸಲಿದ್ದಾರೆ.
ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್, ರಾಜ್ಯ ಬಿಜೆಪಿ ಘಟಕದ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಜಿಲ್ಲೆಯ ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕ್, ಭಾಗೀರಥಿ ಮುರುಳ್ಯ, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ, ಹರೀಶ್ ಪೂಂಜಾ, ಎಂಎಲ್‌ಸಿ, ಪ್ರತಾಪಸಿಂಹ ನಾಯಕ್ ಸಹಿತ ಬಿಜೆಪಿ ಪಕ್ಷದ ಪ್ರಮುಖರು ಸಾಕ್ಷಿಯಾಗಲಿದ್ದಾರೆ ಎಂದು ಸತೀಶ್ ಕುಂಪಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಮನ ಬಂದಂತೆ ವರ್ತಿಸುತ್ತಿದೆ. ವಿನಾಶ ಕಾಲೇ ವಿಪರೀತ ಬುದ್ಧಿ ಎಂಬಂತೆ ನಡೆದುಕೊಳ್ಳುತ್ತಿದೆ. ಇದಕ್ಕೆ ತಕ್ಕ ಶಾಸ್ತಿಯನ್ನು ಮುಂದಿನ ದಿನಗಳಲ್ಲಿ ಮತದಾರರು ನೀಡಲಿದ್ದಾರೆ ಎಂದು ಹೇಳಿದರು.ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮಾತನಾಡಿ, ಮಂಡ್ಯದಲ್ಲಿ ಧ್ವಜ ತೆಗೆಯುವ ಮೂಲಕ ರಾಜ್ಯ ಸರ್ಕಾರ ಸಣ್ಣತನ ಪ್ರದರ್ಶಿಸಿದೆ. ಇದನ್ನು ನೋಡಿ ಸುಮ್ಮನಿರಲು ಸಾಧ್ಯವಿಲ್ಲ ಎಂದರು.ಶಾಸಕರಾದ ಉಮಾನಾಥ ಕೋಟ್ಯಾನ್, ವೇದವ್ಯಾಸ ಕಾಮತ್, ಡಾ.ವೈ. ಭರತ್ ಶೆಟ್ಟಿ, ಹರೀಶ್ ಪೂಂಜ, ಭಾಗೀರಥಿ ಮುರುಳ್ಯ, ಮಾಜಿ ಶಾಸಕರಾದ ಮೋನಪ್ಪ ಭಂಡಾರಿ, ಸಂಜೀವ ಮಠಂದೂರು, ಜಿ.ಪಂ. ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ, ಬಿಜೆಪಿ ಮುಖಂಡರಾದ ಸುದರ್ಶನ ಎಂ., ಬೃಜೇಶ್ ಚೌಟ, ಪ್ರೇಮಾನಂದ ಶೆಟ್ಟಿ, ರವಿಶಂಕರ ಮಿಜಾರು, ವಿಜಯ ಕುಮಾರ್ ಶೆಟ್ಟಿ, ಚಂದ್ರಹಾಸ್ ಉಳ್ಳಾಲ್, ರವೀಂದ್ರ ಶೆಟ್ಟಿ ಉಳಿದೊಟ್ಟು ಮತ್ತಿತರರು ಇದ್ದರು.