ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದ್ರೆ ನನಗಿಂತ ಖುಷಿ ಯಾರಿಗೂ ಇಲ್ಲ: ಸೋಮಣ್ಣ ಅಚ್ಚರಿಯ ಹೇಳಿಕೆ

| Published : Aug 18 2024, 01:56 AM IST / Updated: Aug 18 2024, 11:55 AM IST

v somanna
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದ್ರೆ ನನಗಿಂತ ಖುಷಿ ಯಾರಿಗೂ ಇಲ್ಲ: ಸೋಮಣ್ಣ ಅಚ್ಚರಿಯ ಹೇಳಿಕೆ
Share this Article
  • FB
  • TW
  • Linkdin
  • Email

ಸಾರಾಂಶ

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರೆದರೆ ತಮಗಿಂತ ಹೆಚ್ಚು ಸಂತೋಷಪಡುವವರು ಬೇರೆ ಯಾರೂ ಇಲ್ಲ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಅಚ್ಚರಿಯ ಹೇಳಿಕೆ ನೀಡಿದ್ದಾರೆ.  

 ತುಮಕೂರು : ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರೆದರೆ ನನ್ನಷ್ಟು ಖುಷಿ ಪಡುವವರು ಯಾರೂ ಇಲ್ಲ ಎನ್ನುವ ಮೂಲಕ ಕೇಂದ್ರ ಸಚಿವ ವಿ.ಸೋಮಣ್ಣ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಅವರು ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ನುರಿತ ರಾಜಕಾರಣಿ ಎಂದ ಅವರು, ಕೆಲವು ಸಂದರ್ಭದಲ್ಲಿ ಕಾನೂನಿಗಿಂತ ಯಾರು ದೊಡ್ಡವರಲ್ಲ. ಕಾನೂನಿನ ಕೆಲಸ ಕಾನೂನು ಮಾಡುತ್ತದೆ. ಸಿದ್ದರಾಮಯ್ಯ ಏನು ಮಾಡಬೇಕೋ ಮಾಡುತ್ತಾರೆ. ಆದರೆ ಒಂದಂತು ಸತ್ಯ ಕಾನೂನಿಗಿಂತ ನಾವ್ಯಾರು ದೊಡ್ಡವರಲ್ಲ ಎಂದರು.

 ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ ಮಾಡುತ್ತೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಸೋಮಣ್ಣ, ನನಗೂ 45 ವರ್ಷ ರಾಜಕೀಯ ಅನುಭವ ಇದೆ. ಒತ್ತಾಯ ಮಾಡುವುದು, ಮತ್ತೊಂದು ಮಾಡೋದಕ್ಕಿಂತ ಹೆಚ್ಚಾಗಿ ಸಿದ್ದರಾಮಯ್ಯ ಸಾಹೇಬರು ಬುದ್ಧಿವಂತರಿದ್ದಾರೆ. ನಾನು ಅವರು ಬಹಳ ಆತ್ಮೀಯರಾಗಿ ಕೆಲಸ ಮಾಡಿದ್ದೇವೆ. 

ನಿನ್ನೆಯೂ ಸಹ ಅವರ ಜೊತೆ ಮಾತನಾಡಿದಾಗ, ಅವರು ಮಾತನಾಡಿದ್ದನ್ನು ನಾನು ಬಹಳ ಆನಂದದಿಂದ ಸ್ವೀಕಾರ ಮಾಡಿದ್ದೇನೆ. ಉಳಿದದ್ದನ್ನು ಕಾನೂನು ನೋಡುತ್ತದೆ ಎಂದರು. ಒಂದು ಕುಟುಂಬ ಅಂದ ಮೇಲೆ ಐದು ಬೆರಳು ಒಂದೇ ಸಮ ಇರುತ್ತದೆಯೇ ಎಂದ ಅವರು ನಮ್ಮ ಅವರ ಆತ್ಮೀಯತೆ ಅನ್ನುವುದಕ್ಕಿಂತ ಈ ಭಾಗದ ಜನರ ಋಣ ತೀರಿಸಬೇಕಾಗಿದೆ. 

ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಿ ಋಣ ತೀರಿಸಬೇಕಿದೆ ಎಂದರು. ಸಿದ್ದರಾಮಯ್ಯ ಅವರು ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರಾ? ಎಂಬ ವಿಚಾರವನ್ನು ಅವರ ಪಕ್ಷ ತೀರ್ಮಾನಿಸುತ್ತದೆ ಎಂದರು.