ತೆಕ್ಕಟ್ಟೆ ಸೇವಾಸಂಗಮ ವಿದ್ಯಾಕೇಂದ್ರದಲ್ಲಿ ಶಿಕ್ಷಕರಿಗೆ ಹ್ಯಾಪಿ ಲರ್ನಿಂಗ್ ಕಾರ್ಯಾಗಾರ

| Published : May 28 2024, 01:15 AM IST

ತೆಕ್ಕಟ್ಟೆ ಸೇವಾಸಂಗಮ ವಿದ್ಯಾಕೇಂದ್ರದಲ್ಲಿ ಶಿಕ್ಷಕರಿಗೆ ಹ್ಯಾಪಿ ಲರ್ನಿಂಗ್ ಕಾರ್ಯಾಗಾರ
Share this Article
  • FB
  • TW
  • Linkdin
  • Email

ಸಾರಾಂಶ

ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆಯ ಶೈಕ್ಷಣಿಕ ಸಂಯೋಜಿತ ಸಂಸ್ಥೆಗಳ ಒಟ್ಟು ೧೧೫ ಶಿಕ್ಷಕರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

ಕನ್ನಡಪ್ರಭ ವಾರ್ತೆ ಕೋಟ

ಇಲ್ಲಿನ ತೆಕ್ಕಟ್ಟೆಯ ಸೇವಾ ಸಂಗಮ ವಿದ್ಯಾ ಕೇಂದ್ರದ ಆಶ್ರಯದಲ್ಲಿ ಶಿಕ್ಷಕರಿಗೆ ವಿಷಯಧಾರಿತ ಪುನಶ್ಚೇತನ ಕಾರ್ಯಾಗಾರ ‘ಹ್ಯಾಪಿ ಲರ್ನಿಂಗ್’ ನಡೆಯಿತು.

ಕಾರ್ಯಾಗಾರದಲ್ಲಿ ರಾಜ್ಯ ಸಂಪನ್ಮೂಲ ವ್ಯಕ್ತಿ ಕಾರ್ಕಳದ ರಾಜೇಂದ್ರ ಭಟ್ ಮಾತನಾಡಿ, ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆಯ ಶೈಕ್ಷಣಿಕ ಸಂಯೋಜಿತ ಸಂಸ್ಥೆಗಳ ಶಿಕ್ಷಕರಿಗೆ ಆಯೋಜಿಸಿದ ಹ್ಯಾಪಿ ಲರ್ನಿಂಗ್, ತರಗತಿ ಸಂವಹನ ಕಾರ್ಯಾಗಾರ ವಿಶಿಷ್ಟವಾದದ್ದು. ಇದರಲ್ಲಿ ಭಾಗವಹಿಸಿ ಪ್ರತಿಯೊಬ್ಬರು ತಮ್ಮ ವ್ಯಕ್ತಿತ್ವದ ಮೂಲಕ ವಿದ್ಯಾರ್ಥಿಗಳಿಗೆ ನವಜೀವನದ ಕಾಯಕಲ್ಪ ನೀಡಿ ಎಂದರು.

ಕಾರ್ಯಗಾರದ ಅಧ್ಯಕ್ಷತೆಯನ್ನು ಸೇವಾ ಸಂಗಮ ವಿದ್ಯಾ ಕೇಂದ್ರದ ಆಡಳಿತ ಮಂಡಳಿ ಅಧ್ಯಕ್ಷ ಸುರೇಶ ಬೆಟ್ಟಿನ್ ವಹಿಸಿದ್ದರು. ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆಯ ಅಧ್ಯಕ್ಷ ಪಾಂಡುರಂಗ ಪೈ ಸಿದ್ದಾಪುರ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ವೇದಿಕೆಯಲ್ಲಿ ಸೇವಾ ಸಂಗಮ ವಿದ್ಯಾ ಕೇಂದ್ರದ ಕಾರ್ಯದರ್ಶಿ ಕಮಲಾಕ್ಷ ಪೈ, ಉಪಾಧ್ಯಕ್ಷ ಅರುಣ ಕುಮಾರ ಶೆಟ್ಟಿ, ವಿದ್ಯಾ ಭಾರತಿ ಜಿಲ್ಲಾ ಕಾರ್ಯದರ್ಶಿ ಮಹೇಶ್ ಹೈಕಾಡಿ, ವಿದ್ಯಾ ಕೇಂದ್ರದ ಮುಖ್ಯೋಪಾಧ್ಯಾಯ ವಿಷ್ಣುಮೂರ್ತಿ ಭಟ್ ಉಪಸ್ಥಿತರಿದ್ದರು.

ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆಯ ಶೈಕ್ಷಣಿಕ ಸಂಯೋಜಿತ ಸಂಸ್ಥೆಗಳ ಒಟ್ಟು ೧೧೫ ಶಿಕ್ಷಕರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. ವಿದ್ಯಾ ಕೇಂದ್ರ ತೆಕ್ಕಟ್ಟೆ ಗೌರವ ಕಾರ್ಯದರ್ಶಿ ಸಂಜೀವ್ ಗುಂಡ್ಮಿ ಸ್ವಾಗತಿಸಿದರು. ವಿದ್ಯಾ ಕೇಂದ್ರದ ಮಾತಾಜಿ ಸಂಧ್ಯಾ ಭಟ್ ವಂದಿಸಿದರು. ಕಾರ್ಯಕ್ರಮವನ್ನು ಶಕೀಲಾ ಮಾತಾಜಿ ನಿರೂಪಿಸಿದರು.