ಸಾರಾಂಶ
ಸಿಗಂದೂರು ಸೇತುವೆ ಲೋಕಾರ್ಪಣೆಗೆ ದಿನ ನಿಗದಿಯಾಗಿದ್ದು ಸಂತಸ ತಂದಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಆನಂದಪುರ: ಸಿಗಂದೂರು ಸೇತುವೆ ಲೋಕಾರ್ಪಣೆಗೆ ದಿನ ನಿಗದಿಯಾಗಿದ್ದು ಸಂತಸ ತಂದಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಶನಿವಾರ ರಾತ್ರಿ ಆನಂದಪುರದಲ್ಲಿ ಮೊಹರಂ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಪತ್ರಕರ್ತರೊಂದಿಗೆ ಮಾತನಾಡಿದರು.ಸಿಗಂದೂರು ಸೇತುವೆಯ ನಿರ್ಮಾಣಕ್ಕೆ ಯಡಿಯೂರಪ್ಪನವರು ನೀಡಿದ ಕೊಡುಗೆ ಅಪಾರವಾದದ್ದು. ಈ ಭಾಗದ ಜನರ ಹೋರಾಟ, ಪಾದಯಾತ್ರೆಯಾ ಫಲವಾಗಿ, ಚೌಡೇಶ್ವರಿಯ ಆಶೀರ್ವಾದದಿಂದ ಸೇತುವೆ ನಿರ್ಮಾಣವಾಗಿದೆ. ಈ ಸೇತುವೆ ನಿರ್ಮಾಣಕ್ಕೆ ಯಡಿಯೂರಪ್ಪನವರು ನೀಡಿದ ಕೊಡುಗೆಯನ್ನು ನೆನಪಿಸಿಕೊಳ್ಳಬೇಕಾಗುತ್ತದೆ ಎಂದರು.
ಯಡಿಯೂರಪ್ಪ ಅವರು ಸಿಗಂದೂರು ದೇವಿಯ ದೇವಾಲಯಕ್ಕೆ ಭೇಟಿ ನೀಡಿದ್ದ ವೇಳೆ ಈ ಭಾಗದ ಜನರಿಗೆ ಹಾಗೂ ಭಕ್ತರಿಗೆ ಅನುಕೂಲವಾಗುವ ರೀತಿಯಲ್ಲಿ ಸೇತುವೆ ನಿರ್ಮಿಸಿ ಕೊಡುವುದಾಗಿ ಭರವಸೆ ನೀಡಿದ್ದರು. ಹಾಗೆ ನುಡಿದಂತೆ ನಡೆದುಕೊಂಡಿದ್ದಾರೆ ಎಂದರು.ಈ ಸೇತುವೆಗೆ ಸಿಗಂದೂರು ಶ್ರೀ ಚೌಡೇಶ್ವರಿ ಸೇತುವೆ ಎಂದು ಹೆಸರನ್ನು ಪ್ರಕಟಿಸಿದ್ದು ಸೂಕ್ತವಾಗಿದೆ. ಸೇತುವೆ ಲೋಕಾರ್ಪಣೆಯ ನಂತರ ಭಕ್ತಾದಿಗಳನ್ನು, ಪ್ರವಾಸಿಗರನ್ನು ಸಿಗಂದೂರಿಗೆ ಕರೆದೊಯ್ಯುತ್ತಿದ್ದ ಲಾಂಚ್ ಸ್ಥಗಿತಗೊಳ್ಳುತ್ತದೆ. ಮುಂದಿನ ದಿನಗಳಲ್ಲಿ ಪ್ರವಾಸಿಗರಿಗೆ ಅನುಕೂಲವಾಗುವ ರೀತಿಯಲ್ಲಿ ಲಾಂಚ್ ವ್ಯವಸ್ಥೆಯನ್ನು ಬಳಸಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸೋಮಶೇಖರ್ ಲೌಗೆರೆ, ಎನ್.ಉಮೇಶ್, ಗಜೇಂದ್ರ ಯಾದವ್, ಎಂಪಿಎಸ್ ಮುನ್ನ, ಲೋಕೇಶ್, ರೆಹಮತ್ತುಲ್ಲಾ, ಬಸವರಾಜ್, ಕಲೀಮುಲ್ಲಾ ಖಾನ್ ಮತ್ತಿತರರಿದ್ದರು.